ದೇವೇಗೌಡರು ಮೈಸೂರಿಂದ ಸ್ಪರ್ಧಿಸಿದರೆ ಗೆಲ್ಲಿಸುತ್ತೇವೆ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸ್ಪರ್ಧಿಸುವ ಕುರಿತು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಬೆಂಗಳೂರು ಉತ್ತರ ಕ್ಷೇತ್ರದಿಂದ ದೇವೇಗೌಡರು ಸ್ಪರ್ಧಿಸ ಬೇಕೆಂಬ ಒತ್ತಡ ಇದೆ. ಒಂದು ವೇಳೆ ಮೈಸೂರಿನಿಂದ ಅವರು ಸ್ಪರ್ಧಿಸಿದರೆ ಗೆಲ್ಲಿಸುತ್ತೇವೆ ಎಂದು ಮಾದಹಳ್ಳಿ ಗ್ರಾಮದಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.