21 C
Bengaluru
Thursday, January 23, 2020

ದೇಶಹಳ್ಳಿ ರಸ್ತೆಯಲ್ಲಿ ಧೂಳಿನಭಿಷೇಕ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಮದ್ದೂರು: ಸಮೀಪದ ದೇಶಹಳ್ಳಿಯ ಪ್ರಮುಖ ರಸ್ತೆ ಹದಗೆಟ್ಟು ಹಲವು ತಿಂಗಳು ಕಳೆದರೂ ಸರಿಪಡಿಸದ ಕಾರಣ ವಾಹನ ಸವಾರರು ಹಾಗೂ ಪಾದಚಾರಿಗಳು ಸಂಚಾರಕ್ಕೆ ಪರದಾಡುವಂತಾಗಿದೆ.

ಗ್ರಾಮದಲ್ಲಿ ಅಂದಾಜು 1 ಕಿ.ಮೀ. ರಸ್ತೆ ಕೆಟ್ಟಿರುವ ಕಾರಣ ವಾಹನ ಸಂಚಾರ ಕಷ್ಟಕರವಾಗಿದೆ. ಟ್ರಾೃಕ್ಟರ್, ಲಾರಿ ಸೇರಿದಂತೆ ಇನ್ನಿತರ ಭಾರಿ ವಾಹನಗಳು ಹೋದರೆ ರಸ್ತೆ ಬದಿಯಿರುವ ಮನೆಗಳಿಗೆ, ಜಮೀನುಗಳಿಗೆ ಧೂಳಿನ ಅಭಿಷೇಕವಾಗುತ್ತದೆ. ಮಳೆ ಬಂದರಂತೂ ರಸ್ತೆ ಕೆಸರು ಗದ್ದೆಯಂತಾಗುತ್ತಿದ್ದು, ಸಂಚಾರಕ್ಕೆ ಹರಸಾಹಸ ಪಡುವಂತಾಗಿದೆ.

ಕೆಲವು ತಿಂಗಳ ಹಿಂದೆ ಗ್ರಾಮದಲ್ಲಿ ರಸ್ತೆ ಮಾಡುವುದಾಗಿ ಹೇಳಿ ರಸ್ತೆಯನ್ನು ಅಗೆದು ಹೋದವರು, ಇದುವರೆಗೂ ಕಾಮಗಾರಿ ಪೂರ್ಣಗೊಳಿಸಿಲ್ಲ. ಮಣ್ಣು ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಕಲ್ಲುಗಳು ರಸ್ತೆಯ ಮೇಲಕ್ಕೆ ಬಂದಿವೆ. ಇದರಿಂದ ರಸ್ತೆಯಲ್ಲಿ ಯಾವುದೇ ವಾಹನಗಳು ಸುಲಭವಾಗಿ ಸಂಚಾರ ಮಾಡುವುದು ಕಷ್ಟಸಾಧ್ಯವಾಗಿದೆ.

ಪಟ್ಟಣದ ಚನ್ನೇಗೌಡನದೊಡ್ಡಿಯಿಂದ ಬೆಸಗರಹಳ್ಳಿ, ಕೊಪ್ಪ ಸೇರಿದಂತೆ ಇನ್ನಿತರ ಗ್ರಾಮಗಳಿಗೆ ಹೋಗಲು ಸಂಪರ್ಕ ರಸ್ತೆ ಇದಾಗಿದ್ದು, ಪ್ರತಿನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿ ಸಂಚಾರ ಮಾಡುತ್ತವೆ. ಹೆದಗೆಟ್ಟಿರುವ ರಸ್ತೆ ಪಕ್ಕದಲ್ಲಿಯೇ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿವೆ. ಗ್ರಾಮದ ಆದಿಶಕ್ತಿ ದೇವಾಲಯಕ್ಕೂ ಪ್ರತಿನಿತ್ಯ ನೂರಾರು ಭಕ್ತಾಧಿಗಳು ಆಗಮಿಸುತ್ತಿದು, ಅವ್ಯವಸ್ಥೆಗೆ ಹಿಡಿಶಾಪ ಹಾಕುವಂತಾಗಿದೆ.

ಈ ಬಗ್ಗೆ ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಇನ್ನಾದರೂ ಸಂಬಂಧಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ರಸ್ತೆ ಸರಿಪಡಿಸಿ ಅನುಕೂಲ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ.

‘ನಮ್ಮ ಗ್ರಾಮಕ್ಕೆ ಆಗಮಿಸುವ ಸರ್ವರಿಗೂ ಆತ್ಮೀಯ ಸ್ವಾಗತ. ರಸ್ತೆಯಲ್ಲಿ ನಡೆದುಕೊಂಡು ಹೋಗುವ ಸಾರ್ವಜನಿಕರು ಎಚ್ಚರಿಕೆಯಿಂದ ನಡೆದು ಸುರಕ್ಷಿತವಾಗಿ ತಲುಪಿ. ಈ ರಸ್ತೆಯು ಕಲ್ಲು ಮಣ್ಣುಗಳಿಂದ ಕೂಡಿದೆ. ಇದು ನಮ್ಮ ಗ್ರಾಮದ ಮುಖ್ಯರಸ್ತೆ.’ ಎಂದು ಗ್ರಾಮಸ್ಥರು ಬೋರ್ಡ್‌ಗಳನ್ನು ಹಾಕಿ ಗಮನ ಸೆಳೆಯುವ ಕಾರ್ಯ ಮಾಡಿದ್ದಾರೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...