26.8 C
Bangalore
Friday, December 13, 2019

ದೊಡ್ಡಬಳ್ಳಾಪುರದಲ್ಲಿ ನಾಯಿ ಹಾವಳಿ

Latest News

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಹೆದ್ದಾರಿ 4ರ ಜಾಸ್ ಟೋಲ್ ಬಳಿ ಲಾರಿ-ಬಸ್ ಡಿಕ್ಕಿಯಾಗಿ 16 ಮಂದಿಗೆ ಗಾಯ

ನೆಲಮಂಗಲ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಗುರುವಾರ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿರುವ ಅಪಘಾತದಲ್ಲಿ ಚಾಲಕ...

ದೊಡ್ಡಬಳ್ಳಾಪುರ: ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳು ಹಾಗೂ ದೊಡ್ಡವರ ಮೇಲೆ ದಾಳಿ ನಡೆಸುತ್ತಿವೆ. ಪ್ರತಿದಿನವೂ ಒಂದಲ್ಲಾ ಒಂದು ಕಡೆ ದಾಳಿ ನಡೆಯುತ್ತಿದ್ದು ಸಾರ್ವಜನಿಕರಲ್ಲಿ ಭಯ ಮನೆ ಮಾಡಿದೆ.

ಬಸವೇಶ್ವರ ನಗರದಲ್ಲಿ ಶನಿವಾರ ನಾಯಿಗಳ ಗುಂಪು ಇಬ್ಬರು ಮಕ್ಕಳನ್ನು ತೀವ್ರ ಗಾಯಗೊಳಿಸಿವೆ.
ಬಸವೇಶ್ವರ ನಗರದ ಮುರುಳಿ ಎಂಬುವವರ ಮಕ್ಕಳಾದ ಹರಿಪ್ರಿಯಾ (6), ದಿಕ್ಷೀತ (2) ದೊಡ್ಡಮ್ಮನ ಮನೆಗೆ ತೆರಳುವಾಗ ನಾಯಿಗಳು ದಾಳಿ ಮಾಡಿವೆ. ಮಕ್ಕಳು ಈ ವೇಳೆ ರಸ್ತೆ ಬದಿಯ ಬೇಲಿ ಮೇಲೆ ಬಿದ್ದಾಗ ಕಚ್ಚಿವೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೋಜಿಪುರ, ಗಂಗಾಧರಪುರ, ಬಸವೇಶ್ವರ ನಗರ, ವಿನಾಯಕ ನಗರ, ಮುತ್ಸಂದ್ರ, ಕಚೇರಿ ಪಾಳ್ಯ, ಸಂಜಯ ನಗರ, ಕುವೆಂಪು ನಗರ, ಶಾಂತಿನಗರ ಹೊರ ವ್ಯಾಪ್ತಿಯ ರಸ್ತೆ ಭಾಗದಲ್ಲಿ ಹಾವಳಿ ಹೆಚ್ಚಾಗಿದೆ.

ಕೆಲವೆಡೆ ಕೋಳಿ, ಮಾಂಸದ ಅಂಗಡಿಗಳ ಸಮಚ್ಛಯವೇ ಇದಕ್ಕೆ ಕಾರಣ. ಮಾಂಸದ ವಾಸನೆಯಿಂದ ನಾಯಿಗಳು ಅಲ್ಲಿ ಜಮಾಯಿಸುತ್ತವೆ. ಮಾಂಸದ ರುಚಿ ಕಂಡಿರುವ ನಾಯಿಗಳು ಮನುಷ್ಯರು ಹಾಗೂ ಸಾಕು ಪ್ರಾಣಿಗಳ ಮೇಲೆ ಎರಗುತ್ತಿವೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.

ವಾಹನ ಸವಾರರಿಗೆ ಕಂಟಕ: ಕೊಂಗಾಡಿಯಪ್ಪ ಕಾಲೇಜಿನ ರಾಷ್ಟ್ರೀಯ ಹೆದ್ದಾರಿ, ಪಾಲನಜೋಗಹಳ್ಳಿಯ ರಾಜ್ಯ ಹೆದ್ದಾರಿ ಬಳಿ ಮಾಂಸ ಅಂಗಡಿಗಳು ಹೆಚ್ಚಾಗಿರುವುದರಿಂದ ಮಾಂಸ ಹಾಗೂ ತ್ಯಾಜ್ಯಕ್ಕಾಗಿ ನಾಯಿಗಳ ಗುಂಪು ಹೆಚ್ಚುತ್ತಿವೆ. ಈ ರಸ್ತೆಯಲ್ಲಿ ಸಾಗುವ ವಾಹನ ಸವಾರರ ಮೇಲೆ ಏಕಾಏಕಿ ಅಡ್ಡಲಾಗಿ ನುಗ್ಗುವುದರಿಂದ ವಾಹನ ಸವಾರರ ಪ್ರಾಣ ಹಾನಿಗೂ ಕಾರಣವಾಗುತ್ತಿವೆ.

ದಿನಕ್ಕೆ 8 ಮಂದಿಗೆ ಕಡಿತ: ನಗರ ತಾಯಿ-ಮಗು ಆಸ್ಪತ್ರೆ ಮೂಲಗಳ ಪ್ರಕಾರ ಪ್ರತಿನಿತ್ಯ 10 ರಿಂದ 12ಮಂದಿ ನಾಯಿ ಕಡಿತದಿಂದ ಚಿಕಿತ್ಸೆ ಬರುತ್ತಿದ್ದು, ಇವರಲ್ಲಿ 8ಕ್ಕೂ ಹೆಚ್ಚು ಮಂದಿ ನಗರವ್ಯಾಪ್ತಿಯವರೇ ಆಗಿದ್ದಾರೆ ಎಂಬುದು ಆತಂಕಕಾರಿ ವಿಷಯವಾಗಿದೆ. ಇನ್ನು ಆಸ್ಪತ್ರೆಯಲ್ಲಿ ನಾಯಿ ಕಡಿತ ಚುಚ್ಚುಮದ್ದು ಲಭ್ಯವಿದ್ದು, ನಿಯಮಿತ ಚಿಕಿತ್ಸೆ ನೀಡಲಾಗುತ್ತಿದೆ.

ನಗರಸಭೆಯಿಂದ ನಾಯಿಗಳ ಸಂತಾನ ಶಕ್ತಿಹರಣ ಚಿಕಿತ್ಸೆಗಾಗಿ ಟೆಂಡರ್ ಕರೆಯಲಾಗಿದ್ದು, ಪ್ರಕ್ರಿಯೆ ಕೊನೇ ಹಂತದಲ್ಲಿದ್ದು, ತ್ವರಿತವಾಗಿ ನಾಯಿ ಹಾವಳಿಗೆ ಕಡಿವಾಣ ಹಾಕಲಾಗುವುದು.
ಆರ್.ಮಂಜುನಾಥ್, ನಗರಸಭೆ ಪೌರಾಯುಕ್ತ, ದೊಡ್ಡಬಳ್ಳಾಪುರ

ನಗರದಲ್ಲಿ ನಾಯಿಗಳ ಹಾವಳಿ ಮಿತಿಮೀರಿದೆ. ಈ ಕುರಿತು ಕ್ರಮಕೈಗೊಳ್ಳಬೇಕಾದ ನಗರಸಭೆ ಅಧಿಕಾರಿಗಳು ಟೆಂಡರ್ ಪ್ರಕ್ರಿಯೆ ಮುಂದು ಮಾಡಿ ವಿಳಂಬ ಮಾಡುತ್ತಿದ್ದು, ಶನಿವಾರ ಮಕ್ಕಳ ಮೇಲೆ ನಡೆಸಿರುವ ದಾಳಿ ನಗರವಾಸಿಗಳ ಆತಂಕಕ್ಕೆ ಕಾರಣವಾಗಿದೆ.
ಕೆಂಪರಾಜ್, ನಗರಸಭೆ ಮಾಜಿ ಸದಸ್ಯ, ದೊಡ್ಡಬಳ್ಳಾಪುರ

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....