ದೊಡ್ಡವರ ಹೇಳಿಕೆಗೆ ನಾನೇನು ಪ್ರತಿಕ್ರಿಯಿಸಲಿ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗಾಗಿ ದೆಹಲಿಗೆ ಹೋಗುತ್ತಿದ್ದೇನೆ ಎಂಬ ಸಚಿವ ರಾಜಣ್ಣ ಹೇಳಿಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ದೊಡ್ಡವರು. ನಮ್ಮ ಪಕ್ಷದ ಹಿರಿಯ ನಾಯಕರು. ನಾನು ದೊಡ್ಡವರ ಬಗ್ಗೆ ಮಾತನಾಡುವುದಿಲ್ಲ.
ಹಿರಿಯ ನಾಯಕರ ಬಗ್ಗೆ ನಾನೇನು ಪ್ರತಿಕ್ರಿಯೆ ನೀಡಲಿ ಹೇಳಿ? ಎಂದು ಪತ್ರಕರ್ತರನ್ನೇ ಪ್ರಶ್ನಿಸಿದರು.
ಯಾವುದೇ ಬದಲಾವಣೆ ಇಲ್ಲ
ನಮ್ಮ ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಳ ಸೇರಿದಂತೆ ಎಲ್ಲದರಲ್ಲೂ ಬಿಜೆಪಿ ರಾಜಕಾರಣ ಮಾಡುತ್ತಿದೆ. ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳ ನಮಗೆ ಸಂಬಂಧಿಸಿದ್ದಲ್ಲ. ಅದು ಕೇಂದ್ರ ಸರ್ಕಾರದ ವಿಚಾರ. ಕಡಿಮೆ ಮಾಡುವುದು ನಮ್ಮ ಕೈಯಲ್ಲಿಲ್ಲ. ಪರಿಷ್ಕರಣೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರತಿಕ್ರಿಯಿಸಿದರು.