ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದ್ದು, ಅನವಶ್ಯಕವಾಗಿ ಓಡಟ ನಡೆಸುವವರ ವಿರುದ್ಧ ಪೊಲೀಸರು ತಪಾಸಣೆ ನಡೆಸಿ ವಾಹನ ವಶಕ್ಕೆ ಪಡೆದಿದ್ದಾರೆ.
ಮಂಗಳೂರಿನ ಸರ್ಕೀಟ್ ಹೌಸ್ ಬಳಿ, ನಂತೂರು, ಕೂಳೂರು, ಕ್ಲಾಕ್ ಟವರ್ ಮೊದಲಾದ ೩೫ ಕಡೆ ಪೊಲೀಸರು ತಪಾಸಣೆ ಬಿಗುಗೊಳಿಸಿದ್ದಾರೆ. ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಆಸ್ಪತ್ರೆ, ಮೆಡಿಕಲ್, ಹಾಲು, ಪತ್ರಿಕೆ ಹೊರತುಪಡಿಸಿ ಇನ್ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಿಲ್ಲ.
ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ವಾಹನ ತಪಾಸಣೆ ನಡೆಸಿದರು. ಹಲವು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿವೆ. ರಾ.ಹೆದ್ದಾರಿಯಲ್ಲಿ ವಾಹನಗಳು ಸಂಚರಿಸುತ್ತಿವೆ.
ತಾಲೂಕು ಕೇಂದ್ರಗಳಾದ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ ಮೊದಲಾದ ಕಡೆಗಳಲ್ಲೂ ವಾರಾಂತ್ಯ ಕರ್ಫ್ಯೂಗೆ ಸಾರ್ವಜನಿಕರಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ.
ದ.ಕನ್ನಡ ವಾರಾಂತ್ಯ ಕರ್ಫ್ಯೂ ಪೊಲೀಸರಿಂದ ತಪಾಸಣೆ
You Might Also Like
ದೀರ್ಘ ಕಾಲದ ಬೆನ್ನು ನೋವು ನಿಯಂತ್ರಣಕ್ಕೆ ಮಾರ್ಜಾಲಾಸನ | Back Pain
ಪ್ರ: ಮಾರ್ಜಾಲಾಸನದ ಬಗ್ಗೆ ಮಾಹಿತಿ, ಅಭ್ಯಾಸದ ಕ್ರಮ ತಿಳಿಸಿ (Back Pain). ಉ: ಈ ಆಸನಕ್ಕೆ…
ಎಳನೀರನ್ನು ಹೀಗೆ ಕುಡಿದರೆ ಸಾಕು ಹೊಟ್ಟೆಯ ಸುತ್ತ ಸೇರಿಕೊಂಡಿರುವ ಬೊಜ್ಜು ಬೇಗನೆ ಕರಗುತ್ತೆ..!
ಪ್ರತೀ ಊರಿನಲ್ಲಿ ಎಳನೀರು ಸಿಗುತ್ತದೆ. ಇದನ್ನು ನಿಯಮಿತವಾಗಿ ಕುಡಿಯುತ್ತಾ ಬಂದರೆ ತೂಕವನ್ನು ಸಾಕಷ್ಟು ಪ್ರಮಾಣದಲ್ಲಿ ಕಡಿಮೆ…
Weight Loss: ಊಟ ಬಿಟ್ಟರೆ ತೂಕ ಕಡಿಮೆಯಾಗುತ್ತಾ? ಈ ವಿಷಯಗಳನ್ನು ನಂಬಬೇಡಿ!
ಬೆಂಗಳೂರು: ಹೆಚ್ಚಿನವರು ಅಧಿಕ ತೂಕದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರು ತೂಕ ಇಳಿಸಿಕೊಳ್ಳಲು (Weight Loss) ಹಲವು…