More

  ಧಾರ್ಮಿಕ ಚಿಂತನೆಗಳು ಮೈಗೂಡಲಿ

  ಸಿದ್ದಾಪುರ: ಪ್ರತಿಯೊಬ್ಬರೂ ಧಾರ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕೆಂದು ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಸಲಹೆ ನೀಡಿದರು.

  ಸಿದ್ದಾಪುರ ಸ್ವರ್ಣಮಾಲ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕೊಡಗು ಜಿಲ್ಲಾ ಕಾವೇರಿ ತಮಿಳು ಸಂಘದ 9ನೇ ವಾರ್ಷಿಕೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸಂಸ್ಕೃತಿ, ಪರಂಪರೆ, ಆಚರಣೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಮುದಾಯದವರು, ಸಂಘಟಿತರಾಗಿ ಮುಂದುವರಿಯಬೇಕು ಎಂದು ಕರೆ ನೀಡಿದರು.

  ಸನ್ಮಾನ: ತಮಿಳು ಸಂಘದಿಂದ ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಯೋಧರು, ಸಾಮಾಜಿಕ ಕಾರ್ಯಕರ್ತರು, ತಮಿಳು ಶಾಲೆಯ ಶಿಕ್ಷಕರು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕ್ರೀಡೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳ ಸಾಂಸಕ್ಕತಿಕ ಕಾರ್ಯಕ್ರಮ ನೆರೆದಿದ್ದವರ ಗಮನ ಸೆಳೆಯಿತು.

  ಕಾವೇರಿ ತಮಿಳು ಸಂಘದ ಅಧ್ಯಕ್ಷ ಮೈಕಲ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜು ಸುಬ್ರಮಣಿ, ಕುಟ್ಟಂಡ ಅಜಿತ್ ಕರುಂಬಯ್ಯ, ಸುವೀನ್ ಗಣಪತಿ, ಮಲ್ಲಂಡ ಮಧು ದೇವಯ್ಯ, ನಾಗರಾಜ್, ಕಣ್ಣನ್, ಕುಮಾರ್, ಗಣೇಶ್, ಖಜಾಂಚಿ ಮುತ್ತು ವೇಲ್, ಆಡಿಟರ್ ಶೇಖರ್ ಇತರರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts