More

  ಧರ್ಮಸ್ಥಳ ಸಂಘದ ಕಾರ್ಯ ಶ್ಲಾಘನೀಯ

  ಬೈಲಹೊಂಗಲ: ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಲ್ಪಿಸಲು ಶ್ರಮಿಸುತ್ತಿರುವ ಡಾ.ವೀರೇಂದ್ರ ಹೆಗ್ಗಡೆ ಅವರ ಕೊಡುಗೆ ಅನನ್ಯವಾಗಿದೆ ಎಂದು ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ ಹೇಳಿದರು. ಪಟ್ಟಣದ ಶಿವಬಸವ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸಾಮೂಹಿಕ ಸತ್ಯ ನಾರಾಯಣ ಪೂಜಾ ವ್ಯವಸ್ಥಾಪನಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾಮೂಹಿಕ ಸತ್ಯ ನಾರಾಯಣ ಪೂಜೆ ಹಾಗೂ ಒಕ್ಕೂಟಗಳ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
  ಮುರಗೋಡದ ಮಹಾಂತ ದುರದುಂಡೇಶ್ವರ ಮಠದ ಪೀಠಾಧೀಪತಿ ನೀಲಕಂಠ ಸ್ವಾಮೀಜಿ ಮಾತನಾಡಿ, ಸಮಾಜದ ಏಳಿಗೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ತನ್ನ ಸೇವಾ ಕ್ಷೇತ್ರವನ್ನು ವಿಸ್ತರಿಸುತ್ತ ಸ್ವಾವಲಂಬಿ ಜೀವನಕ್ಕೆ ಪ್ರೇರಣೆಯಾಗಿದೆ ಎಂದರು.

  ಶಾಸಕ ಮಹಾಂತೇಶ ಕೌಜಲಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ಷೇತ್ರದ ಯೋಜನೆಗಳ ಮೂಲಕ ಬೈಲಹೊಂಗಲದ ಭಾಗದಲ್ಲಿ ಅನೇಕ ಜನೋಪಯೋಗಿ ಕಾರ್ಯಗಳನ್ನು ಹಮ್ಮಿಕೊಳ್ಳುವುದರೊಂದಿಗೆ ಜನರಲ್ಲಿ ಭಕ್ತಿಯ ಭಾವನೆ ಮೂಡಿಸುವಲ್ಲಿ ಸಂಸ್ಥೆಯು ಯಶಸ್ವಿಯಾಗುತ್ತಿರುವುದು ಹೆಮ್ಮೆಯಾಗಿದೆ ಎಂದರು.

  ಹಲವು ಸ್ವಾವಲಂಬಿ ಉದ್ಯೋಗಿಗಳಿಗೆ ಗಣ್ಯರು ಚೆಕ್‌ಗಳನ್ನು ವಿತರಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ನಿರ್ದೇಶಕ ಪ್ರದೀಪ ಶೆಟ್ಟಿ, ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ, ಮಾಜಿ ಅಧ್ಯಕ್ಷ ಬಾಬು ಕುಡಸೋಮಣ್ಣವರ, ಸದಸ್ಯರಾದ ಗುರು ಮೆಟಗುಡ್ಡ, ಹೇಮಲತಾ ಹಿರೇಮಠ, ತಾಲೂಕು ಯೋಜನಾಧಿಕಾರಿ ಪಿ.ವಿಜಯಕುಮಾರ, ಮೇಲ್ವಿಚಾರಕಿ ಅನ್ನಪೂರ್ಣಾ ನವಲಗುಂದ, ಮೇಲ್ವಿಚಾರಕ ನಿಂಗಪ್ಪ ಪಾಟೀಲ, ಅಂಜನಾ ಯಕ್ಷಂಬಿ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts