18 C
Bangalore
Friday, December 6, 2019

ಧಾರವಾಡ ಕೃಷಿ ವಿವಿ ಘಟಿಕೋತ್ಸವ ನಾಳೆ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಧಾರವಾಡ: ಇಲ್ಲಿನ ಕೃಷಿ ವಿಶ್ವವಿದ್ಯಾಲಯದ 31ನೇ ಘಟಿಕೋತ್ಸವವು ಜು. 7ರಂದು ಬೆಳಗ್ಗೆ 11.30ಕ್ಕೆ ವಿಶ್ವವಿದ್ಯಾಲಯ ಆವರಣದ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಜರುಗಲಿದೆ ಎಂದು ಕುಲಪತಿ ಡಾ. ವಿ.ಐ. ಬೆಣಗಿ ತಿಳಿಸಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿ ವಜುಭಾಯಿ ವಾಲಾ ಅವರು ಕಾರಣಾಂತರಗಳಿಂದ ಆಗಮಿಸುತ್ತಿಲ್ಲ. ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ಡಿ ಅಧ್ಯಕ್ಷತೆ ವಹಿಸಿ ಪದವಿ ಪ್ರದಾನ ಮಾಡುವರು. ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಎಸ್.ಕೆ. ಪಟ್ನಾಯಕ್ ಅತಿಥಿಯಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡುವರು ಎಂದರು.

ಘಟಿಕೋತ್ಸವದಲ್ಲಿ 938 ಅಭ್ಯರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗುವುದು. ಅದರಲ್ಲಿ 726 ಅಭ್ಯರ್ಥಿಗಳು ಹಾಜರಾತಿಯಲ್ಲಿ ಹಾಗೂ 212 ಅಭ್ಯರ್ಥಿಗಳು ಗೈರು ಹಾಜರಾತಿಯಲ್ಲಿ ಪದವಿಗಳನ್ನು ಸ್ವೀಕರಿಸುವರು. 607 ಅಭ್ಯರ್ಥಿಗಳಿಗೆ ಸ್ನಾತಕ ಪದವಿಗಳನ್ನು ಪ್ರದಾನ ಮಾಡಲಾಗುವುದು. ಸ್ನಾತಕೋತ್ತರ ಪದವಿಗಳನ್ನು ಕೃಷಿಯಲ್ಲಿ 211, ಕೃಷಿ ವ್ಯವಹಾರ ನಿರ್ವಹಣೆ 9, ಅರಣ್ಯ11 ಮತ್ತು ಗ್ರಾಮೀಣ ಗೃಹವಿಜ್ಞಾನ 42 ಸೇರಿ 273 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಇದರಲ್ಲಿ 209 ಅಭ್ಯರ್ಥಿಗಳು ಹಾಜರಾತಿಯಲ್ಲಿ ಪದವಿಗಳನ್ನು ಸ್ವೀಕರಿಸುವರು. ಈ ಬಾರಿ 58 ಅಭ್ಯರ್ಥಿಗಳಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ ಪ್ರದಾನ ಮಾಡಲಾಗುವುದು ಎಂದರು.

ವೈದೇಹಿ ಪೈ ಚಿನ್ನದ ಹುಡುಗಿ: ಘಟಿಕೋತ್ಸವದಲ್ಲಿ 43 ಬಂಗಾರದ ಪದಕ ಹಾಗೂ 5 ನಗದು ಬಹುಮಾನ ನೀಡಲಾಗುವುದು. ಧಾರವಾಡ ಕೃಷಿ ಮಹಾವಿದ್ಯಾಲಯದ ವೈದೇಹಿ ವಿಧಾನಚಂದ್ರ ಪೈ ಅವರು 2 ಬಂಗಾರದ ಪದಕಗಳನ್ನು ಪಡೆದು ಚಿನ್ನದ ಹುಡುಗಿ ಆಗಲಿದ್ದಾರೆ. 4 ವರ್ಷದ ಸ್ನಾತಕ ಪದವಿಯಲ್ಲಿ ವೈದೇಹಿ 9.18 ಸಿಜಿಪಿಎ ಗಳಿಸಿ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಉಳಿದಂತೆ ರಾಘವೇಂದ್ರ ಉಮೇಶ ನಾಯಕ ಬಿ.ಎಸ್​ಸಿ (ಕೃಷಿ ಮಾರುಕಟ್ಟೆ ಹಾಗೂ ಸಹಕಾರ), ನಿತಿನ್ ಹೂಗಾರ ಬಿ.ಎಸ್​ಸಿ (ಕೃಷಿ), ವನಿತಾ, ಬಿ.ಎಸ್​ಸಿ (ಕೃಷಿ), ಎಂ.ಸಿ. ಶಶಿಕುಮಾರ ಬಿ.ಎಸ್​ಸಿ (ಅರಣ್ಯ), ವೇದಾ ಮಹಾಬಲೇಶ್ವರ ಹೆಗಡೆ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಧಾರವಾಡ ಹಾಗೂ ಕೆ.ಸಿ. ಶರತ್​ಚಂದ್ರ ಬಿ.ಟೆಕ್ (ಆಹಾರ ತಾಂತ್ರಿಕತೆ) ಅವರು ಸ್ನಾತಕ ಪದವಿಯಲ್ಲಿ ತಲಾ ಒಂದು ಬಂಗಾರದ ಪದಕ ಪಡೆಯಲಿದ್ದಾರೆ. 1980-84ನೇ ಬ್ಯಾಚ್​ನ ಬಿ.ಎಸ್​ಸಿ ಕೃಷಿ- ಕೃಷಿ ಮಾರುಕಟ್ಟೆ ಪದವೀಧರರು ಕೊಡಮಾಡುವ ನಗದು ಪುರಸ್ಕಾರಕ್ಕೆ ಕೃಷಿ ಮಹಾವಿದ್ಯಾಲಯ ಧಾರವಾಡದ ಪ್ರಶಾಂತ ಭೀಮಪ್ಪ ಡೋನಿ ಭಾಜನರಾಗಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಡಾ. ಎಚ್. ಬಸವರಾಜ, ಡೀನ್ ಡಾ. ಆರ್.ಎಸ್. ಗಿರಡ್ಡಿ, ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ಡಾ. ಶಿವಲಿಂಗಪ್ಪಗೆ ‘ಗೌಡಾ’: ಘಟಿಕೋತ್ಸವದಲ್ಲಿ ಕೆನಡಾ ದೇಶದ ಮ್ಯಾನಿಟೋಬಾ ವಿಶ್ವವಿದ್ಯಾಲಯದ ಸಮುದಾಯ ಆರೋಗ್ಯ ವಿಜ್ಞಾನ ಇಲಾಖೆಯ ಪ್ರಾಧ್ಯಾಪಕ ಡಾ. ಶಿವಲಿಂಗಪ್ಪ ಎಸ್. ಹಳ್ಳಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ವಿಜಯಪುರ ಮೂಲದ ಇವರು ಸಮುದಾಯ ಆರೋಗ್ಯ ವಿಜ್ಞಾನದ ವಿಜ್ಞಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗೌರವ ಡಾಕ್ಟರೇಟ್​ಗೆ ಹಲವರ ಪ್ರಸ್ತಾವನೆಗಳನ್ನು ರಾಜ್ಯಪಾಲರಿಗೆ ಕಳುಹಿಸಲಾಗಿತ್ತಾದರೂ ಒಬ್ಬರಿಗೆ ಅನುಮೋದನೆ ನೀಡಿದ್ದಾರೆ ಎಂದು ಡಾ. ಬೆಣಗಿ ಹೇಳಿದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...