23.2 C
Bangalore
Saturday, December 14, 2019

ಧಾರವಾಡ ಜಿಲ್ಲೆಯಲ್ಲಿ ಆಟೋ ನಂಬಿದವರ ಬದುಕು ಅತಂತ್ರ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕಳೆದ ಎಂಟು ತಿಂಗಳಿಂದ ಹೊಸ ಆಟೋ ರಿಕ್ಷಾಗಳಿಗೆ ಪರ್ವಿುಟ್ ವಿತರಣೆ ನಿಲ್ಲಿಸಿರುವುದರಿಂದ ನೂರೆಂಟು ಸಮಸ್ಯೆಗಳು ಉದ್ಭವಿಸಿದ್ದು, ಹಲವು ಬಡ ಕುಟುಂಬಗಳ ಬದುಕು ಅತಂತ್ರವಾಗಿದೆ.

ನಗರದಲ್ಲಿ ಟ್ರಾಫಿಕ್ ಸಮಸ್ಯೆ, ವಾಹನಗಳ ಹೆಚ್ಚಳ, ರ್ಪಾಂಗ್ ತೊಂದರೆ ಹಾಗೂ ಆಟೋ ಚಾಲಕರ ಸಂಘಟನೆಗಳ ಮನವಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಳೆದ 2018ರ ನವೆಂಬರ್​ನಲ್ಲಿ ಹೊಸ ಆಟೋಗಳಿಗೆ ಪರ್ವಿುಟ್ ನೀಡುವುದನ್ನು ತಾತ್ಕಾಲಿಕವಾಗಿ ತಡೆ ಹಿಡಿದಿದೆ. ಆದರೆ, ಎಂಟು ತಿಂಗಳು ಕಳೆದರೂ ಅದನ್ನು ಹಿಂಪಡೆದಿಲ್ಲ.

ಜಿಲ್ಲಾಡಳಿತದ ಈ ನಿರ್ಧಾರದಿಂದಾಗಿ ಸದ್ಯ ಹುಬ್ಬಳ್ಳಿ- ಧಾರವಾಡದ ಎರಡು ಆರ್​ಟಿಒ ಕಚೇರಿಗಳಲ್ಲಿ ಹೊಸ ಆಟೋಗಳಿಗೆ ಪರ್ವಿುಟ್ ಸಿಗುತ್ತಿಲ್ಲ. ಪರಿಣಾಮವಾಗಿ ಆಟೋ ಓಡಿಸಿ ತಮ್ಮ ಕುಟುಂಬವನ್ನು ಸಲಹುತ್ತಿದ್ದ ನೂರಾರು ಕುಟುಂಬಗಳಿಗೆ ದಿಕ್ಕೇ ತೋಚದಂತಾಗಿದೆ. ಜತೆಗೆ ಆಟೋ ಸರ್ವಿಸ್ ಹಾಗೂ ಡೀಲರ್ ಇತ್ಯಾದಿ ಉದ್ಯಮಗಳು ಕೆಳಮುಖವಾಗಿ ಸಾಗುತ್ತಿವೆ.

ಆಟೋ ಚಾಲಕರ, ಮಾಲೀಕರ ಸಂಘದವರು ಹೊಸ ಆಟೋಗಳಿಗೆ ಪರ್ವಿುಟ್ ಬೇಡ ಎಂದಿದ್ದರೆ ಹೊರತು, ಈಗಿರುವ ಹಳೇ ಆಟೋಗಳನ್ನು ಹೊಸದಕ್ಕೆ ಬದಲಾವಣೆ ಮಾಡಿಕೊಳ್ಳಲು ಅಥವಾ ಸಿಎನ್​ಜಿ ಆಟೋಗಳಾಗಿ ಪರಿವರ್ತನೆ ಮಾಡಿಕೊಳ್ಳಲು ಬೇಡ ಎಂದಿರಲಿಲ್ಲ.

ನಿರುದ್ಯೋಗ ಹೆಚ್ಚಳ:

ಸದ್ಯ ಜಿಲ್ಲಾಡಳಿತ ಯಾವುದಕ್ಕೂ ಅವಕಾಶ ಕೊಡದಿರುವುದರಿಂದ ಅವಳಿ ನಗರದಲ್ಲಿ ಆಟೋ ಉದ್ಯಮ ಹಾಗೂ ಆಟೋ ನಂಬಿ ಜೀವನ ಕಂಡುಕೊಂಡಿರುವವರು ಅತಂತ್ರರಾಗಿದ್ದಾರೆ.

ಟ್ರಾಫಿಕ್ ಸಮಸ್ಯೆಯಾಗಬಾರದು, ವಾಹನಗಳ ಸಂಖ್ಯೆ ಹೆಚ್ಚಳವಾಗಬಾರದು ಎನ್ನುವ ವಾದ ಒಪ್ಪತಕ್ಕದ್ದು. ಆದರೆ, ಈಗಿರುವ ವಾಹನಗಳಲ್ಲೇ ಅದರಲ್ಲೂ ಗುಜರಿಗೆ ಹೋಗಬಹುದಾದ ರಿಕ್ಷಾಗಳನ್ನು ಬದಲಾವಣೆ ಮಾಡಿಕೊಳ್ಳುವುದಕ್ಕಾದರೂ ಅವಕಾಶ ಕೊಡಬಹುದಲ್ಲ? ಎಂದು ಉದ್ಯೋಗ ನಿರೀಕ್ಷೆಯಲ್ಲಿರುವವರು ಕೇಳುತ್ತಿದ್ದಾರೆ.

ಏನೇನು ಸಮಸ್ಯೆ:

ಆಟೋ ಶೋರೂಂ, ದುರಸ್ತಿ ಕಾರ್ಯಾಗಾರ ಸೇರಿ ಡೀಲರ್​ಗಳು ಸಾಕಷ್ಟು ಹೂಡಿಕೆ ಮಾಡಿದ್ದಾರೆ. ಅಲ್ಲಿ ನೂರಾರು ಜನ ಕೆಲಸ ಮಾಡುತ್ತಿದ್ದಾರೆ. ಇದೀಗ ಅಲ್ಲಿ ವಹಿವಾಟು ಇಲ್ಲದೇ ತೊಂದರೆ ಅನುಭವಿಸುವಂತಾಗಿದೆ. ದಿನೇದಿನೆ ನಿರುದ್ಯೋಗ ಹೆಚ್ಚಳವಾಗುತ್ತಿದೆ.

ಈಗಾಗಲೇ ಬಹಳಷ್ಟು ನಿರುದ್ಯೋಗಿ ಯುವಕರು ಹೊಸ ಆಟೋ ಕೊಂಡು ಬದುಕು ಕಟ್ಟಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಆಟೋ ಪರ್ವಿುಟ್ ಸಿಗದೇ ಅವರಿಗೆಲ್ಲ ನಿರಾಶೆಯಾಗಿದೆ.

ಕೆಲ ಚಾಲಕರು, ಮಾಲೀಕರಿಂದ ಬಾಡಿಗೆ ಆಟೋ ಪಡೆದು ನಿತ್ಯದ ಬದುಕು ಸಾಗಿಸುತ್ತಿದ್ದಾರೆ. ಹಲವು ವರ್ಷಗಳ ನಂತರ ಅವರು ಹೊಸ ಆಟೋದ ನಿರೀಕ್ಷೆಯಲ್ಲಿದ್ದಾರೆ.

ಸಿಎನ್​ಜಿ ಬಂಕ್:

ಹುಬ್ಬಳ್ಳಿ ಧಾರವಾಡದಲ್ಲಿ ಎರಡು ಕಡೆ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ (ಸಿಎನ್​ಜಿ) ಬಂಕ್​ಗಳು ಆರಂಭವಾಗಿವೆ. ವಿಶೇಷವಾಗಿ ಆಟೋಗಳಿಗೆ ಗ್ಯಾಸ್ ತುಂಬಲೆಂದೇ ಈ ಬಂಕ್​ಗಳು ಆರಂಭವಾಗಿವೆ. ಸಿಎನ್​ಜಿ ಹೆಚ್ಚು ಬಳಸಿದರೆ ಪರಿಸರ ಸ್ವಚ್ಛವಾಗಿ ಉಳಿಯುತ್ತದೆ. ಇನ್ನಷ್ಟು ಉದ್ಯೋಗ ಸೃಷ್ಟಿಯಾಗಲಿದೆ. ಈ ಎಲ್ಲದರ ಬಗ್ಗೆ ಜಿಲ್ಲಾಡಳಿತ ಶೀಘ್ರ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.

ನಿಯಮ ಉಲ್ಲಂಘನೆ…

ಹುಬ್ಬಳ್ಳಿ- ಧಾರವಾಡದಲ್ಲಿ ಪೆಟ್ರೋಲ್, ಗ್ಯಾಸ್ ಸೇರಿ ಒಟ್ಟು 26 ಸಾವಿರ ಆಟೋಗಳಿವೆ. ಈಗಿರುವ ಆಟೋಗಳನ್ನೇ ಎಲ್ಲೆಂದರಲ್ಲಿ ನಿಲ್ಲಿಸುವುದು, ಸಂಚಾರ ನಿಯಮ ಉಲ್ಲಂಘಿಸುವುದರಿಂದ ನಿತ್ಯ ಟ್ರಾಫಿಕ್ ಸಮಸ್ಯೆ ಉಲ್ಬಣವಾಗುತ್ತಿದೆ. ಕೇಸ್ ಹಾಕಿದರೂ ಕೆಲ ಆಟೋ ಚಾಲಕರು ಪಾಠ ಕಲಿಯುತ್ತಿಲ್ಲ ಎಂಬುದು ಸಂಚಾರ ಪೊಲೀಸರ ವಾದ.

ಗುಜರಿಗೆ ಹಾಕಿದರೆ ಬದಲಾವಣೆ

ಹಳೇ ಆಟೋಗಳನ್ನು ಗುಜರಿಗೆ ಹಾಕಿದರೆ ಅದೇ ಪರ್ವಿುಟ್​ನಲ್ಲಿ ಹೊಸ ಆಟೋ ಕೊಳ್ಳಲು ಅವಕಾಶ ನೀಡುತ್ತೇವೆ. ಆದರೆ, ಈವರೆಗೆ ಯಾರೂ ಮುಂದೆ ಬಂದಿಲ್ಲ. ಇನ್ನು ಸಿಎನ್​ಜಿ ಆಟೋಗಳ ನೋಂದಣಿಗೆ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದರೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ.

| ರವೀಂದ್ರ ಕವಳಿ, ಆರ್​ಟಿಒ, ಧಾರವಾಡ ಪಶ್ಚಿಮ

 

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...