ಧೈರ್ಯದಿಂದ ಪರೀಕ್ಷೆ ಎದುರಿಸಿ

blank

ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತರುವಂತೆ ವಿದ್ಯಾರ್ಥಿಗಳಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಸಲಹೆ ನೀಡಿದರು.
ನಗರದ ಬಿಇಒ ಕಚೇರಿಯಲ್ಲಿ ಶನಿವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿ ಕುರಿತಂತೆ ಆನ್‌ಲೈನ್ ಮೂಲಕ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಧೈರ್ಯ, ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಬೇಕು. ವಿನಾಕಾರಣ ಭಯ ಬೇಡ ಎಂದು ಕಿವಿ ಮಾತು ಹೇಳಿದರು.
ಬಿಇಒ ಎಸ್. ನಾಗಭೂಷಣ್ ಮಾತನಾಡಿ, ತಾಲೂಕಿನಲ್ಲಿ 22 ಪರೀಕ್ಷಾ ಕೇಂದ್ರಗಳಿವೆ. ಎಲ್ಲ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ತಾಲೂಕು,ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ವೆಬ್‌ಕಾಸ್ಟಿಂಗ್ ನಡೆಯಲಿದೆ. ಚಿತ್ರದುರ್ಗ ತಾಲೂಕಿನಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಜನಪ್ರತಿನಿಧಿಗಳೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ ಆನ್‌ಲೈನ್ ಮೂಲಕ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಶಿಕ್ಷಣ ಸಂಯೋಜಕ ಕೆ.ಆರ್. ಲೋಕೇಶ್, ಕ್ಷೇತ್ರ ಸಮನ್ವಯಾಧಿಕಾರಿ ಸಂಪತ್‌ಕುಮಾರ್, ಜಿಲ್ಲಾ ಸಾಕ್ಷರತಾ ಅಧಿಕಾರಿ ಮಂಜುಳಾ, ತಾಲೂಕಿನ ಬಿಸಿಯೂಟ ಸಹಾಯಕ ನಿರ್ದೇಶಕ ಗುರುರಾಜ್, ಇಸಿಒಗಳಾದ ಮಲ್ಲಿಕಾರ್ಜುನ್, ಎಸ್.ಎಂ. ಮೂರ್ತಾಚಾರ್, ವಿನುತಾ ರಾಣಿ ಸಮೀರಾ, ಅಂಜನಪ್ಪ, ರಮೇಶ್‌ರೆಡ್ಡಿ, ರವೀಂದ್ರನಾಥ್, ಶಿಕ್ಷಕರಾದ ಎಂ.ಆರ್. ನಾಗರಾಜ್, ಕಚೇರಿ ಅಧೀಕ್ಷಕ ಸಾಯಿಪ್ರಸಾದ್ ಇತರರು ಇದ್ದರು.
ತಾಲೂಕಿನ ಎಲ್ಲ ಪ್ರೌಢ ಾಲೆಗಳ 6635 ಮಕ್ಕಳು ಭಾಗವಹಿಸಿದ್ದರು. ಶಾಸಕರು ವಿದ್ಯಾರ್ಥಿಗಳಿಗೆ ಬರೆದ ಪತ್ರವನ್ನು ಬಿಡುಗಡೆ ಮಾಡಲಾಯಿತು.

Share This Article

Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು

Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…

ಬೇಸಿಗೆಯಲ್ಲಿ ಬೇವಿನ ನೀರಿನಿಂದ ಸ್ನಾನ ಮಾಡಿದರೆ ಏನೆಲ್ಲಾ ಲಾಭಗಳಿವೆ ಗೊತ್ತಾ? Neem

Neem: ಬೇವು ಎಂದರೆ ಮೂಗು ಮುರಿಯುವ ಜನರೇ ಹೆಚ್ಚು. ಆದರೆ ಈ ಬೇವಿನಲ್ಲಿ ಎಷ್ಟೆಲ್ಲಾ ಪ್ರಯೋಜನಗಳಿವೆ…