ಕೊಳ್ಳೇಗಾಲ: ಕೊಳ್ಳೇಗಾಲ ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ 30ನೇ ವಾರ್ಡ್‌ನ ನಗರಸಭಾ ಸದಸ್ಯ ಜಿ.ಎಂ.ಸುರೇಶ್ ಸೋಮವಾರ ಅಧಿಕಾರ ಸ್ವೀಕರಿಸಿದರು.
ನಗರಸಭೆ ಕಾರ್ಯಾಲಯದಲ್ಲಿರುವ ಸ್ಥಾಯಿ ಸಮಿತಿ ಅಧ್ಯಕ್ಷರ ಕಚೇರಿಯನ್ನು ಉದ್ಘಾಟಿಸಿದ ಮಾತನಾಡಿದ ಅವರು, ನನ್ನ ವ್ಯಾಪ್ತಿಯಲ್ಲಿ ಆರೋಗ್ಯ, ಶಿಕ್ಷಣ, ಸಾಮಾಜಿಕ ನ್ಯಾಯ, ಸಾರ್ವಜನಿಕರಿಗೆ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದರು.
ಬಳಿಕ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ನಗರಸಭೆ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಹಾಗೂ ಮುಖಂಡರು ಅಭಿನಂದಿಸಿದರು. ನಗರಸಭೆ ಅಧ್ಯಕ್ಷೆ ರೇಖಾ, ಉಪಾಧ್ಯಕ್ಷ ಎ.ಪಿ.ಶಂಕರ್, ಪೌರಾಯುಕ್ತ ರಮೇಶ್ ಹಾಗೂ ಸದಸ್ಯರು, ಅಧಿಕಾರಿಗಳು, ಜಿಲ್ಲಾ ಗ್ಯಾರಂಟಿಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರು, ಬ್ಲಾಕ್ ಕಾರ್ಯದರ್ಶಿ ಬಸ್ತೀಪುರ ರವಿ ಮತ್ತಿತರರು ಹಾಜರಿದ್ದರು.
TAGGED:Kollegala news