ಹುಣಸೂರು: ಸಾಲಬಾಧೆ ತಾಳದೆ ರೈತರೊಬ್ಬರು ಲಕ್ಷ್ಮಣತೀರ್ಥ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಲೂಕಿನ ಕಿರಿಜಾಜಿ ಗ್ರಾಮದ ಗಿರೀಶ್(54) ಆತ್ಮಹತ್ಯೆ ಮಾಡಿಕೊಂಡ ರೈತ.
ನಗರದ ಎಸ್‌ಬಿಐನಲ್ಲಿ 10 ಲಕ್ಷ ರೂ. ಬೆಳೆ ಸಾಲ ಪಡೆದಿದ್ದರು. ಆದರೆ ತಂಬಾಕು ಇನ್ನಿತರ ಬೆಳೆಗಳು ಕೈಹಿಡಿಯದ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗದೆ ಗುರುವಾರ ಮಧ್ಯಾಹ್ನ ಗ್ರಾಮದ ಬಳಿಯ ಲಕ್ಷ್ಮಣತೀರ್ಥ ನದಿಗೆ ಹಾರಿದ್ದಾರೆ. ನದಿದಂಡೆಯಲ್ಲಿ ಇದ್ದ ದನಗಾಹಿಗಳು ನೋಡಿ ಊರಿನ ಜನರಿಗೆ ಮಾಹಿತಿ ನೀಡಿದ್ದಾರೆ. ನಂತರ ದೇಹವನ್ನು ನದಿಯಿಂದ ಹೊರತಂದು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಕೈಗೊಂಡು ಸಂಬಂಧಿಗಳಿಗೆ ಹಸ್ತಾಂತರಿಸಲಾಗಿದೆ. ಮೃತ ಗಿರೀಶ್‌ಗೆ ಪತ್ನಿ, ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿ ಇದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.