ನರಗುಂದ ಬಂಡಾಯಕ್ಕೆ 39 ವರ್ಷ

Latest News

ಬೆಂಗಳೂರಿಗೆ ಇನ್ನೊಂದು ರೈಲು

ಶ್ರವಣ್‌ಕುಮಾರ್ ನಾಳ ಪುತ್ತೂರು ಅಗತ್ಯವಿರುವ 2ಪ್ರದೇಶಗಳಿಗೆ ಅಥವಾ ಬೃಹತ್ ನಗರದಿಂದ ಸಣ್ಣ ಪಟ್ಟಣಗಳಿಗೆ ವೇಗವಾಗಿ ಸಂಪರ್ಕಿಸಲು ನೆರವಾಗುವ ಉದ್ದೇಶದಿಂದ ತುಮಕೂರು-ಯಶವಂತಪುರ ಸೇರಿ ದೇಶದಲ್ಲಿ 10 ಸೇವಾ ಸರ್ವೀಸ್...

ಕ್ರಿಕೆಟಲ್ಲೂ ಹನಿಟ್ರ್ಯಾಪ್!

ಬೆಂಗಳೂರು: ‘ಸಭ್ಯರ ಕ್ರೀಡೆ’ ಕ್ರಿಕೆಟ್​ಗೆ ಬೆಟ್ಟಿಂಗ್ ದಂಧೆಯ ಕಳಂಕ ಮೆತ್ತಿದ ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಹಿಂದೆ ಹನಿಟ್ರಾ್ಯಪ್ ಅಪಸವ್ಯವೂ ಕಾಣಿಸಿಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ನಲ್ಲಿ ಸಿಕ್ಕಿಬಿದ್ದ ಆಟಗಾರರನ್ನು...

ಜೋಡಿ ಕೊಲೆ ಆರೋಪಿ ಸೆರೆ

ಈಶ್ವರಮಂಗಲ: ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಅಜಲಾಡಿ ಸಮೀಪದ ಹೊಸಮಾರು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿಯನ್ನು ಗ್ರಾಮಾಂತರ ಠಾಣಾ ಇನ್ಸ್‌ಪೆಕ್ಟರ್...

ಕೆಪಿಎಸ್​ಸಿ ​ಸಂದರ್ಶನದ ವೇಳೆ ನಡೆಯುವ ಅವ್ಯವಹಾರ ತಪ್ಪಿಸಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಣಯ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್​ಸಿ) ಸಂದರ್ಶನ ವೇಳೆ ಆಗಬಹುದಾದ ಅವ್ಯವಹಾರ ನಿಯಂತ್ರಿಸಿ ನೇಮಕಾತಿಯಲ್ಲಿ ಬಿಗಿ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಬುಧವಾರ...

ಖಂಡಿಗೆ ಕಿಂಡಿ ಅಣೆಕಟ್ಟು ದುರಸ್ತಿಗಿಲ್ಲ ಕ್ರಮ

ಲೋಕೇಶ್ ಸುರತ್ಕಲ್ ಪಾವಂಜೆ ಖಂಡಿಗೆ ಬಳಿ ಇರುವ ನಂದಿನಿ ನದಿ ಕಿಂಡಿ ಅಣೆಕಟ್ಟಿನ ದುರಸ್ತಿಗೆ ಅಧಿಕಾರಿಗಳು ಖಚಿತ ಯೋಜನೆ ರೂಪಿಸಿಲ್ಲ. ಅಣೆಕಟ್ಟು ನಿರ್ವಹಣೆಗೆ ಸಮಿತಿಯೇ ರಚನೆಯಾಗಿಲ್ಲ. ಹಾಗಾಗಿ...

ರಾಜು ಹೊಸಮನಿ ನರಗುಂದ: ದೇಶದ ಭೂಪುಟದಲ್ಲಿ ರೈತರ ಚಳವಳಿಗೆ ಪ್ರೇರಣೆಯಾಗಿ ನಿಲ್ಲುವ ಸ್ಥಳವೆಂದರೆ ಅದು ನರಗುಂದ. ಇಲ್ಲಿ ನಡೆದಿರುವ ಆ ಒಂದು ಹೋರಾಟದಿಂದ ರಾಜ್ಯಾದ್ಯಂತ ರೈತ ಸಂಘ ಕಟ್ಟಲು ಪ್ರೇರಣೆಯಾಗಿದ್ದು ಮಾತ್ರ ಸುಳ್ಳಲ್ಲ. ಅದು 1980 ಜುಲೈ 21ರಂದು ನಡೆದ ಬಂಡಾಯ. ಜಮೀನುಗಳಿಗೆ ನೀರು ಹರಿಯದಿದ್ದರೂ ಅಭಿವೃದ್ಧಿ ಕರ (ಬೆಟರ್​ವೆುಂಟ್ ಲೇವ್ಹಿ) ಪಾವತಿಸಬೇಕೆಂಬ ಅಂದಿನ ಆರ್.ಆರ್. ಗುಂಡೂರಾವ್ ಸರ್ಕಾರದ ಆದೇಶ ರದ್ದತಿಗೆ ಆಗ್ರಹಿಸಿ ರೈತರು ನಡೆಸಿದ ಬಂಡಾಯಕ್ಕೆ ಇದೇ ಜು. 21ಕ್ಕೆ 39 ವರ್ಷ.

ನರಗುಂದ ಭಾಗದಲ್ಲಿ ಕಾಲುವೆ ನಿರ್ವಿುಸಿ ರೈತರ ಜಮೀನುಗಳಿಗೆ ನೀರು ಬಿಡುವ ಮಹತ್ವದ ಯೋಜನೆಯನ್ನು ಆಗ ಜಾರಿಗೆ ತರಲಾಗಿತ್ತು. ಆದರೆ, ಸಕಾಲಕ್ಕೆ ನೀರು ಸಿಗದಿದ್ದಾಗ ಸರ್ಕಾರ ವಿಧಿಸುತ್ತಿದ್ದ ಅಭಿವೃದ್ಧಿ ಕರ ರದ್ದುಪಡಿಸುವಂತೆ ಆಗ್ರಹಿಸಿ ನರಗುಂದ ಪುರಸಭೆಯ ಅಂದಿನ ಅಧ್ಯಕ್ಷ ಚಂಬಣ್ಣ ನಂದಿ, ಶಿವಪ್ಪ ಬಾಳಿಕಾಯಿ, ವೀರಭದ್ರಪ್ಪ ಹುಯಿಲಗೋಳ, ಶಿವಪ್ಪ ನೆಗಳೂರ, ಪಟ್ಟೇದ ಬಸುರಾಜ ನೇತೃತ್ವದ ರೈತ ಸಂಘಟನೆ ಸದಸ್ಯರು ಹೋರಾಟ ನಡೆಸಿದರು. ಆದರೆ, ಸರ್ಕಾರ ರೈತರ ಹೋರಾಟಕ್ಕೆ ಸೊಪ್ಪು ಹಾಕಲಿಲ್ಲ.

ಅದರಿಂದ ರೊಚ್ಚಿಗೆದ್ದ ನರಗುಂದ, ನವಲಗುಂದ ರೈತರು ಏಕಕಾಲದಲ್ಲಿ ತೀವ್ರ ಹೋರಾಟ ಕೈಗೊಂಡರು. ಆ ಹೋರಾಟಕ್ಕೆ ರಾಜ್ಯ ಸರ್ಕಾರ ನಲುಗಿ ಹೋಗಿತ್ತು. ನೀರು ಬಂದೇ ಇಲ್ಲ ನಾವ್ಯಾಕೆ ತೆರಿಗೆ ಕಟ್ಟೋಣ? ಎಂದು ಕಾಲುವೆ ವ್ಯಾಪ್ತಿಯ ಗ್ರಾಮಗಳ ಸಾವಿರಾರು ರೈತರು 1980 ಜು. 21ರಂದು ಮೆರವಣೆಗೆ ಮೂಲಕ ತಹಸೀಲ್ದಾರ್ ಕಚೇರಿಗೆ ಆಗಮಿಸಿ ಧರಣಿ ನಡೆಸಿದರು. ಕಚೇರಿ ಬಂದ್ ಮಾಡುವಂತೆ ತಹಸೀಲ್ದಾರ್ ಎಸ್.ಎಫ್. ವರೂರ ಅವರಿಗೆ ಆಗ್ರಹಿಸಿದರು. ಅದಕ್ಕೆ ತಹಸೀಲ್ದಾರ್ ಒಪ್ಪದಿದ್ದಾಗ ಮಾತಿಗೆ ಮಾತು ಬೆಳೆದು ಕಲ್ಲು ತೂರಾಟ ನಡೆಯಿತು.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ರೈತರ ಮೇಲೆ ಲಾಠಿ ಪ್ರಹಾರ ಮಾಡಿದರು. ಗಲಾಟೆ ತಾರಕಕ್ಕೇರಿ ಪೋಲಿಸರು ಹಾರಿಸಿದ ಗುಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ತಾಲೂಕಿನ ಚಿಕ್ಕನರಗುಂದದ 24 ವರ್ಷದ ರೈತ ವೀರಪ್ಪ ಕಡ್ಲಿಕೊಪ್ಪ ಅವರ ಎದೆಗೆ ತಾಗಿ ಸ್ಥಳದಲ್ಲೇ ಮೃತಪಟ್ಟರು. ಪ್ರತಿಭಟನೆ ಮತ್ತಷ್ಟು ಕಾವು ಪಡೆಯುತ್ತಿದ್ದಂತೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. ಅದಕ್ಕೆ ಪ್ರತಿಯಾಗಿ ರೈತರು ಕಲ್ಲು ತೂರಾಟ ನಡೆಸಿದರು. ಮೇಳಿ (ಕೃಷಿ ಪರಿಕರ) ಹಿಡಿದು ಅಧಿಕಾರಿ ಮತ್ತು ಪೊಲೀಸರನ್ನು ಥಳಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಎಸ್.ಎಫ್. ವರೂರ ಅವರ ಕಿವಿ ತುಂಡಾಗಿ ನೇತಾಡತೊಡಗಿತ್ತು.

ಹುತಾತ್ಮ ರೈತ ವೀರಪ್ಪ ಕಡ್ಲಿಕೊಪ್ಪ ಮೇಲೆ ಗುಂಡು ಹಾರಿಸಿದವರನ್ನು ಪತ್ತೆ ಹಚ್ಚಲು ರೈತರು ಮುಂದಾದರು. ಆಗ ಗಲಾಟೆಯಲ್ಲಿ ಗಾಯಗೊಂಡ ಪಿಎಸ್​ಐ ಸಿಕಂದರ್ ಪಟೇಲ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ನುಗ್ಗಿದ ರೈತರು ಅವರನ್ನು ಹಿಗ್ಗಾಮುಗ್ಗಾ ಥಳಿಸಿದರು. ಅರೆಬರೆ ಉಳಿದ ಜೀವಕ್ಕೆ ಕೆಲವರು ನೀರು ಹಾಕಿದರೂ ರೋಜಾ ಇರುವ ಕಾರಣಕ್ಕೆ ಪಿಎಸ್​ಐ ಸಿಕಂದರ್ ನೀರು ಕುಡಿಯಲೂ ನಿರಾಕರಿಸಿ ಸಾವಿನಲ್ಲೂ ಧಾರ್ವಿುಕತೆ ಮೆರೆದರು. ಅಂದು ನವಲಗುಂದದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಅಳಗವಾಡಿಯ ಬಸಪ್ಪ ಲಕ್ಕುಂಡಿ ಕೊನೆಯುಸಿರೆಳೆದರು.

ಅದೇ ಸಮಯದಲ್ಲಿ ನರಗುಂದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ್ದ ಅಬಕಾರಿ ಇಲಾಖೆಯ ಜೀಪ್ ಹಾಗೂ ಪೊಲೀಸರ ವಾಹನಗಳಿಗೆ ಕೆಲವರು ಬೆಂಕಿ ಇಟ್ಟರು. ವಾಹನಗಳು ಸುಟ್ಟು ಕರಕಲಾದವು. ಈ ಮಧ್ಯೆ ಹೆಚ್ಚುವರಿ ಪೋಲಿಸ್ ಸಿಬ್ಬಂದಿ ಆಗಮಿಸುವಷ್ಟರಲ್ಲಿ ಇನ್ನೊಬ್ಬ ಪಿಎಸ್​ಐ ಪ್ರವೀಣಕುಮಾರ ಕೊಂಕಣಿ, ಪೇದೆಗಳಾದ ಧಾರವಾಡದ ನಾಗಪ್ಪ ಸಿದ್ದಪ್ಪ ಅಕ್ಕಿ, ನವಲಗುಂದ ತಾಲೂಕಿನ ಶಲವಡಿಯ ಬಸಯ್ಯ ಹಿರೇಮಠ ರೈತರ ಪ್ರಹಾರಕ್ಕೆ ತಾಲೂಕಿನ ಬನಹಟ್ಟಿ, ಕುರ್ಲಗೇರಿ ಗ್ರಾಮದ ಜಮೀನಿನಲ್ಲಿ ಜೀವ ತೆತ್ತರು. ಆಗ ಕರ್ಪ್ಯೂ ಜಾರಿಯಾಗಿ 137 ರೈತರನ್ನು ಪೋಲಿಸರು ಬಂಧಿಸಿದರು. ಈ ಬಂಡಾಯದ ಸ್ಮರಣಾರ್ಥ ಪ್ರತಿವರ್ಷ ಜು. 21ರಂದು ರೈತ ಹುತಾತ್ಮ ದಿನ ಆಚರಿಸಲಾಗುತ್ತಿದೆ.

- Advertisement -

Stay connected

278,638FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...