18.5 C
Bangalore
Monday, December 16, 2019

ನರೇಗಲ್ಲ ಹಿರೇಕೆರೆ ಅಭಿವೃದ್ಧಿಗೆ ಶ್ಲಾಘನೆ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ನರೇಗಲ್ಲ: ಸ್ಥಳೀಯ ಐತಿಹಾಸಿಕ ಹಿರೇಕೆರೆಗೆ ಭಾನುವಾರ ಕೇಂದ್ರ ವಾಣಿಜ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಸುನೀಲ ಕುಮಾರ ಭೇಟಿ ನೀಡಿ, ಕೆರೆ ಅಭಿವೃದ್ಧಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಕಾಲಕ್ಕೆ ಮಳೆಯಾಗದ ಕಾರಣ ದಿನದಿಂದ ದಿನಕ್ಕೆ ದಾಖಲೆ ಪ್ರಮಾಣದಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಜಲಮೂಲ ನಾಶವಾಗುತ್ತಿವೆ. ಆದರೆ, ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಪುರಾತನ ಜಲಮೂಲಗಳ ಸಂರಕ್ಷಣೆಯ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ. ಪ್ರತಿಯೊಂದು ಗ್ರಾಮಗಳ ಕೆರೆ ಅಭಿವೃದ್ಧಿಗೆ ಸಾರ್ವಜನಿಕರು ಮುಂದಾದರೆ ಬರಗಾಲದಿಂದ ಮುಕ್ತಿ ಸಿಗಲಿದೆ. ಜಿಲ್ಲೆಯಲ್ಲಿ ಸರಾಸರಿ ಶೇ.55ರಷ್ಟು ಮಳೆಯಾಗುತ್ತಿದ್ದು, ಅದರಲ್ಲಿ ಅಂದಾಜು ಶೇ. 15ರಷ್ಟು ಮಾತ್ರ ಬಳಕೆಯಾಗುತ್ತಿದೆ. ಇನ್ನುಳಿದ ನೀರಿನ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ನರೇಗಲ್ಲನ ಹಿರೇಕೆರೆಯನ್ನು ಸಾರ್ವಜನಿಕರು, ರೈತರು ಮುಂದೆ ನಿಂತು ಸ್ವಂತ ಹಣದಲ್ಲಿ ಹೂಳೆತ್ತುವ ಕಾರ್ಯದೊಂದಿಗೆ ಕೆರೆ ಅಭಿವೃದ್ಧಿ ಕಾರ್ಯ ಕೈಗೊಂಡಿರುವುದು ಸಂತಸದ ವಿಷಯವಾಗಿದೆ. ಕೆರೆಗೆ ನೀರು ತುಂಬಿಸುವ ಮಾರ್ಗಗಳ ಅಭಿವೃದ್ಧಿ ಸೇರಿ ಇತರೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವಂತೆ ಸೂಚಿಸಿದರು.

ನರೇಗಲ್ಲ ನೆಲ, ಜಲ ಸಂರಕ್ಷಣೆ ಸಮಿತಿಯಿಂದ ಹಿರೇಕೆರೆ ಅಭಿವೃದ್ಧಿಗಾಗಿ ಮನವಿ ಸಲ್ಲಿಸಲಾಯಿತು. ನೆಲ ಜಲ ಸಂರಕ್ಷಣಾ ಸಮಿತಿ ಅಧ್ಯಕ್ಷ ಗುರುರಾಜ ಕುಲಕರ್ಣಿ, ಬಸವರಾಜ ವಂಕಲಕುಂಟಿ, ಉಮೇಶ ಸಂಗನಾಳಮಠ, ಕೆ.ಜಿ. ಉಡುಪಿ, ರವೀಂದ್ರನಾಥ ದೊಡ್ಡಮೇಟಿ, ಶಿವನಗೌಡ ಪಾಟೀಲ, ನಿಂಗನಗೌಡ ಲಕ್ಕನಗೌಡ್ರ, ಕೆ.ಸಿ. ಜೋಗಿ, ಪ.ಪಂ. ಮುಖ್ಯಾಧಿಕಾರಿ ಎಸ್.ಎಸ್. ಹುಲ್ಲಮ್ಮನವರ, ಇಂಜಿನಿಯರ್ ವಿ.ಪಿ. ಕಾಟೇವಾಲ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಿ.ಬಿ. ಬಾಲರಡ್ಡಿ, ಇಒ ಎಂ.ವಿ. ಚಳಗೇರಿ, ಯೋಜನಾ ನಿರ್ದೇಶಕ ಸಂತೋಷ ಪಾಟೀಲ, ಸಹಾಯಕ ಕೃಷಿ ಅಧಿಕಾರಿ ಸಿದ್ದೇಶ ಕೋಡಿಹಳ್ಳಿ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಅಬ್ಬಿಗೇರಿಗೆ ಭೇಟಿ…
ನರೇಗಲ್ಲ ಹಿರೇಕೆರೆ ವೀಕ್ಷಣೆ ನಂತರ ಅಧಿಕಾರಿಗಳ ತಂಡ ಸಮೀಪದ ಅಬ್ಬಿಗೇರಿಯ ಕೋಟುಮಚಗಿ ರಸ್ತೆಯ ಪುರಾತನ ಕಲಕೇರಿ ಕೆರೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ವಣವಾದ ಒಡ್ಡುಗಳ ಕಾಮಗಾರಿ ವೀಕ್ಷಿಸಿತು. ಈ ವೇಳೆ ಮಾತನಾಡಿದ ಸುನೀಲ ಕುಮಾರ, ಜಮೀನುಗಳಲ್ಲಿನ ಬದುವುಗಳಲ್ಲಿ ಸಸಿಗಳನ್ನು ನೆಡಲು ಪ್ರೇರೇಪಿಸಬೇಕು. ರಸ್ತೆಯ ಅಕ್ಕ ಪಕ್ಕದಲ್ಲಿಯೂ ಸಸಿಗಳನ್ನು ನೆಡುವ ಕಾರ್ಯವಾಗಬೇಕು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಗುರುತಿಸಿ ಅವುಗಳ ಅಂತರ್ಜಲಮಟ್ಟ ವೃದ್ದಿಸಲು ಕ್ರಮ ಕೈಗೊಳ್ಳಬೇಕು. ಮಳೆ ನೀರು ಹರಿದು ಹೋಗದಂತೆ ನೀರು ಸಂಗ್ರಹಿಸಲು ಅಗತ್ಯವಾದ ಯೋಜನೆ ರೂಪಿಸಬೇಕು ಎಂದರು.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...