25.9 C
Bengaluru
Wednesday, January 22, 2020

ನಲ್ಲೂರು ಪರಪ್ಪಾಡಿ ರಸ್ತೆಗಿಲ್ಲ ಕಾಯಕಲ್ಪ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಕಾರ್ಕಳ:ನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ಲೂರು ಪರಪ್ಪಾಡಿ ಮಾಳ ಹುಕ್ರಟ್ಟೆ ಸಂಪರ್ಕ ರಸ್ತೆ ಸಂಪೂರ್ಣ ಹೊಂಡ ಮಯವಾಗಿದ್ದು ಸಂಚಾರಕ್ಕೆ ಅಯೋಗ್ಯವಾಗಿದೆ.
7 ಕಿಮೀ ಉದ್ದದ ರಸ್ತೆಗೆ ಏಕಕಾಲದಲ್ಲಿ ಡಾಂಬರು ಭಾಗ್ಯ ಕಾಣದೆ ಹಲವು ದಶಕಗಳೇ ಕಳೆದಿವೆ. 2 ವರ್ಷಗಳ ಹಿಂದೆ 7 ಕಿಮೀ ಉದ್ದದ ರಸ್ತೆಯಲ್ಲಿ ಕೇವಲ 1 ಕಿಮೀ ರಸ್ತೆಗೆ ಡಾಂಬರು ಹಾಕಲಾಗಿತ್ತು.. ಅವೆಲ್ಲವೂ ಪ್ರಸ್ತುತ ಕಿತ್ತು ಹೋಗಿದ್ದು, ರಸ್ತೆ ಪೂರ್ತಿ ಜಲ್ಲಿ ಕಲ್ಲುಗಳು ಹರಡಿವೆ.
ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ಹೊಂಡಗಳು ನಿರ್ಮಾಣಗೊಂಡು ವಾಹನ ಸವಾರರಿಗೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ರಸ್ತೆ ಅಭಿವೃದ್ಧಿ ಕುರಿತು ವಿವಿಧ ಸ್ತರದ ಜನಪ್ರತಿನಿಧಿಗಳನ್ನು ಸಂಪರ್ಕಿಸಿದರೂ ಇದುವರೆಗೆ ಪ್ರಯೋಜನ ಶೂನ್ಯವಾಗಿದೆ.
ಅತ್ಯಂತ ಗ್ರಾಮೀಣ ಭಾಗವಾದ ನಲ್ಲೂರು ಪರಪ್ಪಾಡಿಯ ಈ ಭಾಗದಲ್ಲಿ ಸುಮಾರು 500ಕ್ಕೂ ಅಧಿಕ ಮನೆಗಳಿವೆ. ರಸ್ತೆ ಅವ್ಯವಸ್ಥೆಯಿಂದ ಗ್ರಾಮಸ್ಥರು ಹಿಡಿಶಾಪ ಹಾಕುವಂತಾಗಿದೆ.

ನಲ್ಲೂರು ಪರಪ್ಪಾಡಿ ಮಹಾಲಿಂಗೇಶ್ವರ ದೇವಸ್ಥಾನ
ನಲ್ಲೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು, ಪ್ರತಿ ಸೋಮವಾರ ಹಾಗೂ ತಿಂಗಳ ಸಂಕ್ರಮಣದಂದು ಭಕ್ತರು ಹಾಗೂ ಗ್ರಾಮಸ್ಥರು ದೇವಸ್ಥಾನಕ್ಕೆ ಸಂಪರ್ಕಿಸಲು ಈ ರಸ್ತೆಯನ್ನೇ ಅವಲಂಬಿಸಿದ್ದಾರೆ. ನಲ್ಲೂರು ಗ್ರಾಪಂ ಹಾಗೂ ಮಾಳ ಗ್ರಾಪಂನ ಹುಕ್ರಟ್ಟೆ ಭಾಗವನ್ನು ಸಂಪರ್ಕಿಸುವ ರಸ್ತೆಯಾಗಿರುವುದರಿಂದ ಎರಡು ಗ್ರಾಪಂಗಳ ಗ್ರಾಮಸ್ಥರು ಇದೇ ರಸ್ತೆ ಅವಲಂಬಿಸಿದ್ದಾರೆ.

ರಿಕ್ಷಾ ಓಡಾಟಕ್ಕೆ ಹಿಂದೇಟು
ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ರಿಕ್ಷಾ ಚಾಲಕರು ಸಹ ಬಾಡಿಗೆಗೆ ಬರಲು ಹಿಂದೇಟು ಹಾಕುತ್ತಿದ್ದು ಸ್ಥಳೀಯರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದೆ. ಈ ರಸ್ತೆಯುದ್ದಕ್ಕೂ ಹೊಂಡಗಳು ನಿರ್ಮಾಣಗೊಂಡಿರುವುದರಿಂದ ಮಳೆಗಾಲದಲ್ಲಿ ರಸ್ತೆಯಲ್ಲಿಯೇ ನೀರು ನಿಂತು ವಾಹನ ಸವಾರರಿಗೆ ತೀರಾ ಅಪಾಯಕಾರಿಯಾಗಿ ಪರಿಣಮಿಸಿದೆ.

ಬೇಸಿಗೆಯಲ್ಲಿ ಈ ರಸ್ತೆ ಧೂಳು ಬಾನೆತ್ತರಕ್ಕೆ ಆವರಿಸುತ್ತಿರುವುದರಿಂದ ಹಲವಾರು ಮಂದಿ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚುನಾವಣೆ ಸಂದರ್ಭ ಕೇಳಿಬಂದ ಭರವಸೆಗಳು ಹುಸಿಯಾಗಿವೆ ಎಂಬುದಕ್ಕೆ ಪರಪ್ಪಾಡಿ-ಹುಕ್ರಟ್ಟೆ ರಸ್ತೆಯನ್ನು ಗಮನಿಸಿದರೆ ಗೊತ್ತಾಗುತ್ತದೆ.
ಜಿತೇಶ್ ಪೂಜಾರಿ, ನಲ್ಲೂರು

ಮಾಳ- ನಲ್ಲೂರು ಸಂಪರ್ಕ ರಸ್ತೆ ಅಭಿವೃದ್ಧಿ ಕುರಿತು ಮಾಳ ಗ್ರಾಮ ಪಂಚಾಯಿತಿ ಹಲವು ಬಾರಿ ಶಾಸಕರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಕಳುಹಿಸಿದ್ದರೂ ಯಾವುದೇ ಪ್ರಗತಿ ಕಂಡುಬಂದಿಲ್ಲ.
ಅಜಿತ್ ಹೆಗ್ಡೆ, ಮಾಳ ಗ್ರಾಪಂ ಅಧ್ಯಕ್ಷರು

ಮಾಳ-ನಲ್ಲೂರು ರಸ್ತೆ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ. ಮುಂದಿನ ಮಳೆಗಾಲದೊಳಗೆ ಕಾಮಗಾರಿ ಮುಕ್ತಾಯಗೊಳ್ಳಲಿದೆ.
-ವಿ.ಸುನೀಲ್‌ಕುಮಾರ್, ಕಾರ್ಕಳ ಶಾಸಕ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...