More

  ನವಲಗುಂದ ಪಿಎಸ್​ಐ ಅಮಾನತು

  ನವಲಗುಂದ: ಅತ್ಯಾಚಾರಕ್ಕೆ ಯತ್ನಿಸಿದ್ದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ನವಲಗುಂದ ಪಿಎಸ್​ಐ ಜಯಪಾಲ ಪಾಟೀಲ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಶುಕ್ರವಾರ ಅಮಾನತುಗೊಳಿಸಿದ್ದಾರೆ.

  ಬಸವೇಶ್ವರ ಪ್ಲಾಟ್​ನಲ್ಲಿ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾದ ಫಕ್ರುಸಾಬ್ ಮಾಬುಸಾಬ್ ನದಾಫ್ ಎಂಬಾತ ನನ್ನು ಸಾರ್ವಜನಿಕರು ವಿದ್ಯುತ್ ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದರು. ಪೊಲೀಸರು ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿ, ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಬಾಲಕಿ ಮಾವ ಸಂತೋಷ ವಡ್ಡರ ಪೊಲೀಸರ ಕಣ್ತಪ್ಪಿಸಿ ಆಸ್ಪತ್ರೆಗೆ ನುಗ್ಗಿ ಫಕ್ರುಸಾಬ್​ನಿಗೆ ಚಾಕುವಿನಿಂದ ಇರಿದಿದ್ದ. ಆರೋಪಿಯನ್ನು ಚಿಕಿತ್ಸೆಗಾಗಿ ಕಿಮ್ಸ್​ಗೆ ದಾಖಲಿಸಲಾಯಿತಾದರೂ ಆತ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದ.

  ಪ್ರಕರಣವನ್ನು ಗಂಭೀರ ವಾಗಿ ಪರಿಗಣಿಸಿದ ಎಸ್ಪಿ ವರ್ತಿಕಾ ಕಟಿಯಾರ್, ಡಿಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ನೀಡಲು ಆದೇಶಿಸಿದ್ದರು. ಪ್ರಕರಣದಲ್ಲಿ ಪಿಎಸ್​ಐ ಜಯಪಾಲ ಪಾಟೀಲ ಕರ್ತವ್ಯಲೋಪ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts