Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ನವೆಂಬರ್​ನಿಂದ ಹುಬ್ಬಳ್ಳಿ-ತಿರುಪತಿ ವಿಮಾನ

Thursday, 20.09.2018, 7:05 AM       No Comments

ಹುಬ್ಬಳ್ಳಿ: ಹುಬ್ಬಳ್ಳಿ-ತಿರುಪತಿ, ಹುಬ್ಬಳ್ಳಿ-ಬೆಂಗಳೂರು ಹಾಗೂ ಹುಬ್ಬಳ್ಳಿ-ಪುಣೆಗೆ ನವೆಂಬರ್​ನಿಂದ ಸ್ಟಾರ್ ಏರ್​ಲೈನ್ಸ್ ಸೇವೆ ಪ್ರಾರಂಭಗೊಳ್ಳಲಿದೆ.

ಇಲ್ಲಿನ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ ಭೇಟಿ ನೀಡಿದ್ದ ಸ್ಟಾರ್ ಏರ್​ಲೈನ್ಸ್ ಘೋಡಾವತ್ ಎಂಟರ್​ಪ್ರೖೆಸೆಸ್​ನ ಪ್ರಧಾನ ವ್ಯವಸ್ಥಾಪಕ ವಿಕ್ರಮ ಚೌಹಾಣ್ ಈ ವಿಷಯ ತಿಳಿಸಿದರು.

ಉತ್ತರ ಕರ್ನಾಟಕದ ಉದ್ದಿಮೆ, ಶಿಕ್ಷಣ ಮತ್ತಿತರ ವಿಷಯಗಳ ಕುರಿತು ಸಂಸ್ಥೆಯ ಪದಾಧಿಕಾರಿಗಳೊಂದಿಗೆ ರ್ಚಚಿಸಿದ ಚೌಹಾಣ್, ಈ ಭಾಗದ ಪ್ರವಾಸಿ ತಾಣಗಳ ಬಗ್ಗೆಯೂ ಮಾಹಿತಿ ಪಡೆದರು.

ಸಂಸ್ಥೆಯ ಕಾರ್ಯದರ್ಶಿ ವಿನಯ ಜವಳಿ ಮಾತನಾಡಿ, ಹುಬ್ಬಳ್ಳಿ-ಧಾರವಾಡ ಅವಳಿ ನಗರ ಕೈಗಾರಿಕೆಗಳ ಹಾಗೂ ಶೈಕ್ಷಣಿಕ ಕೇಂದ್ರವಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಅಭಿವೃದ್ಧಿ ಹೊಂದಿದೆ. ದೆಹಲಿಗೆ ನೇರ ವಿಮಾನಯಾನ ಸಂಪರ್ಕದ ಅವಶ್ಯಕತೆ ಇದ್ದು, ಇದರಿಂದ ಪ್ರವಾಸಿಗರಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು.

ಸಂಸ್ಥೆಯ ಉಪಾಧ್ಯಕ್ಷ ಮಹೇಂದ್ರ ಲದ್ದಡ, ಜಂಟಿ ಕಾರ್ಯದರ್ಶಿ ಅಶೋಕ ಗಾಡದ, ಸದಸ್ಯ ಡಿ.ಕೆ. ಶ್ರೀನಾಥ, ಪ್ರವಾಸೋದ್ಯಮ ವಿಭಾಗದ ಉಪ ಸಮಿತಿ ಚೇರ್ಮನ್ ಸುಭಾಸ ಬಾಗಲಕೋಟ ಮತ್ತಿತರರಿದ್ದರು.

Leave a Reply

Your email address will not be published. Required fields are marked *

Back To Top