ನವೋದಯ ಸ್ವಸಹಾಯ ಸಂಘಗಳ ಸಮಾವೇಶ

ಹುಬ್ಬಳ್ಳಿ: ಮಂಗಳೂರಿನ ನವೋದಯ ಗ್ರಾಮೀಣ ವಿಕಾಸ ಚಾರಿಟಬಲ್ ಟ್ರಸ್ಟ್ ಹಾಗೂ ಧಾರವಾಡದ ಮಲ್ಲಿಕಾರ್ಜುನ ಸೌಹಾರ್ದ ಸಹಕಾರಿ ನಿಯಮಿತದ ಸಹಯೋಗದಲ್ಲಿ ಅ. 29ರಿಂದ ಮೂರು ದಿನಗಳವರೆಗೆ ಇಲ್ಲಿಯ ಅಮರಗೋಳದ ನವೋದಯ ಕಾನ್ವೆಂಟ್ ಸ್ಕೂಲ್ ಹತ್ತಿರ ನವೋದಯ ಸ್ವಸಹಾಯ ಸಂಘಗಳ ಸಮಾವೇಶ ಹಾಗೂ ಸಾಲ ವಿತರಣೆ ಸಮಾರಂಭ ಏರ್ಪಡಿಸಲಾಗಿದೆ.

ಸಮಾವೇಶ ಸ್ಥಳದಲ್ಲಿ ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನ ಹೊರಕೇರಿ ಅವರು, ಧಾರವಾಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ಇಂತಹ ಸಮಾವೇಶ ಆಯೋಜಿಸಿದ್ದು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರು ಅ. 29ರಂದು ಸಂಜೆ 4.30ಕ್ಕೆ ನವೋದಯ ಮಳಿಗೆಗಳು ಹಾಗೂ ವಸ್ತು ಪ್ರದರ್ಶನ ಉದ್ಘಾಟನೆ ನೆರವೇರಿಸುವರು ಎಂದರು.

ಬೃಹತ್ ಮೆರವಣಿಗೆ: ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ 1,500 ಸ್ವಸಹಾಯ ಸಂಘಗಳನ್ನು ಸ್ಥಾಪನೆ ಮಾಡಲಾಗಿದೆ. ಈ ಎಲ್ಲ ಸಂಘಗಳ ಸುಮಾರು 15 ಸಾವಿರ ಮಹಿಳೆಯರು ಸಮಾವೇಶದಲ್ಲಿ ಸಮವಸ್ತ್ರದಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ. ಅ. 30ರಂದು ಬೆಳಗ್ಗೆ 10ಕ್ಕೆ ನವನಗರದ ಈಶ್ವರ ದೇವಸ್ಥಾನದಿಂದ ಅಮರಗೋಳದವರೆಗೆ ಮೆರವಣಿಗೆ ಆಯೋಜಿಸಲಾಗಿದೆ ಎಂದು ಹೊರಕೇರಿ ಹೇಳಿದರು.

ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಮಾವೇಶ ಉದ್ಘಾಟಿಸುವರು. ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಹೊಸ ಸ್ವಸಹಾಯ ಸಂಘಗಳನ್ನು ಉದ್ಘಾಟಿಸುವರು. ಶಾಸಕ ಲಕ್ಷ್ಮಣ ಸವದಿ ಅವರು ಸಾಲಪತ್ರ ವಿತರಣೆ ಮಾಡುವರು. ಡಾ. ಎಂ.ಎನ್. ರಾಜೇಂದ್ರಕುಮಾರ ಅಧ್ಯಕ್ಷತೆ ವಹಿಸುವರು. ಶಾಸಕರಾದ ಅರವಿಂದ ಬೆಲ್ಲದ, ಕುಸುಮಾವತಿ ಶಿವಳ್ಳಿ, ಸಿ.ಎಂ. ನಿಂಬಣ್ಣವರ, ಪ್ರಸಾದ ಅಬ್ಬಯ್ಯ, ಅಮೃತ ದೇಸಾಯಿ, ಇತರರು ಪಾಲ್ಗೊಳ್ಳುವರು.

ನೂರು ಸ್ಟಾಲ್: ಸ್ವಸಹಾಯ ಸಂಘಗಳ ಸದಸ್ಯರು ತಯಾರಿಸಿದ ಉತ್ಪನ್ನಗಳ ಮಾರಾಟಕ್ಕಾಗಿ ನೂರು ಸ್ಟಾಲ್​ಗಳನ್ನು ನಿರ್ವಿುಸಲಾಗಿದೆ. ಸದಸ್ಯರಿಗೆ ಉಚಿತವಾಗಿ ವಸ್ತು ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ನವೋದಯ ಸ್ವಸಹಾಯ ಸಂಘಗಳ ಉದ್ದೇಶ ಮಹಿಳೆಯರಲ್ಲಿ ಉದ್ಯಮಶೀಲತೆ ಗುಣ ಬೆಳೆಸುವುದು, ಹೈನುಗಾರಿಕೆ, ಗೃಹೋಪಯೋಗಿ ವಸ್ತುಗಳ ಉತ್ಪಾದನೆಗೆ ಪ್ರೋತ್ಸಾಹ ನೀಡುವುದಾಗಿದೆ. ಇದಕ್ಕಾಗಿ ಸ್ವಂತ ಉದ್ಯೋಗ ಕೈಗೊಳ್ಳುವ ಮಹಿಳೆಯರಿಗೆ 5 ಕೋಟಿ ರೂ.ವರೆಗೆ ಸಾಲ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಅ. 31ರಂದು ಸಂಜೆ ಸಮಾರೋಪ ನಡೆಯಲಿದ್ದು, ಧಾರವಾಡದ ಕೆಸಿಸಿ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರು ಪಾಲ್ಗೊಳ್ಳುವರು. ಮೂರು ದಿನ ನಿತ್ಯ ಸಂಜೆ ಸಾಂಸ್ಕೃತಿಕ ಸಂಗೀತ ಕಾರ್ಯಕ್ರಮ ನಡೆಯಲಿವೆ ಎಂದು ತಿಳಿಸಿದರು.

ನಿವೃತ್ತ ಶಿಕ್ಷಕ ಶಿವಾನಂದ ಹೆಬಸೂರ, ಆರ್.ಎಲ್. ಚವ್ಹಾಣ, ಲೋಚನೇಶ ಹೂಗಾರ ಗೋಷ್ಠಿಯಲ್ಲಿದ್ದರು.

Share This Article

ಈ ದಿನಾಂಕದಂದು ಜನಿಸಿದವರ ಮೇಲೆ ಲಕ್ಷ್ಮೀ ಕೃಪೆ ಹೆಚ್ಚು! ಹಣದ ಕೊರತೆ ಕಾಡುವುದಿಲ್ಲ, ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಪ್ರತಿದಿನ ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತೀರಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ…

ಕೆಲವರು ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತಾರೆ. ಈ ರೀತಿ ಕುಡಿಯುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು…

ಕೇವಲ 7 ತಿಂಗಳಲ್ಲಿ 114 ಕೆಜಿ ತೂಕ ಇಳಿಕೆ ಹೇಗೆ ಸಾಧ್ಯ? ವೈರಲ್​ ಸ್ಟಾರ್​ ಬಿಚ್ಚಿಟ್ಟ ರಹಸ್ಯವಿದು…

ನವದೆಹಲಿ: ಯೂಟ್ಯೂಬರ್ ನಿಕೊಕಾಡೊ ಅವಕಾಡೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸ್ಟಾರ್ ಎಂದೇ ಪ್ರಸಿದ್ಧಿ ಪಡೆದಿದ್ದಾರೆ. ನಿಕೋಲಸ್…