ನಶಾ ಮುಕ್ತ ಭಾರತ: ಹೆಚ್ಚಿನ ಅರಿವು ಮೂಡಿಸಲು ಸೂಚನೆ

ಹಾಸನ : ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಹಾಟ್ ಸ್ಪಾಟ್‌ಗಳನ್ನು ಗುರುತಿಸಿ ಹೆಚ್ಚಿನ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಶಾ ಮುಕ್ತ ಭಾರತ ಅಭಿಯಾನ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಪದವಿ ಹಾಗೂ ಉನ್ನತ ಶಿಕ್ಷಣ ಕಾಲೇಜುಗಳಲ್ಲಿ ಯುವ ಜನತೆಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರತಿಯೊಬ್ಬರು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.
ತಾಯಿ ತಂದೆಗಳು ತಮ್ಮ ಮಕ್ಕಳ ಚಲನವಲನಗಳನ್ನು ಗಮನಿಸಿ ಮಕ್ಕಳನ್ನು ಸರಿದಾರಿಯಲ್ಲಿ ನಡೆಸುವ ಕೆಲಸವಾಗಬೇಕು. ಸಮಾಜಕ್ಕೆ ಮಾರಕವಾದ ವಿಷಯಗಳನ್ನು ತಡೆಗಟ್ಟಲು ಎಲ್ಲರೂ ಮುಂದಾಗಬೇಕು. ನಗರ ಸಭಾ ಕಾರ್ಯಕರ್ತರು, ಸ್ವಚ್ಚತಾ ಕಾರ್ಯ ಮಾಡುವವರಿಗೆ, ಸಫಾಯಿ ಕರ್ಮಚಾರಿಗಳಿಗೆ, ಎನ್.ಎಸ್.ಎಸ್ ವಿದ್ಯಾರ್ಥಿಗಳು, ನಿರ್ಗತಿಕ ಮಕ್ಕಳು, ವಸತಿ ನಿಲಯಗಳಲ್ಲಿ ಅರಿವು ಮೂಡಿಸುವಂತೆ ನಿರ್ದೇಶನ ನೀಡಿದರಲ್ಲದೆ, ಸ್ವಯಂ ಸೇವಕರು ಮತ್ತು ಸ್ವಯಂ ಸೇವಾ ಸಂಸ್ಥೆಗಳು ಕೂಡ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳಬೇಕು. ರೇಡಿಯೋ ಹಾಗೂ ಸ್ಥಳೀಯ ವಾಹಿನಿಗಳ ಮೂಲಕವೂ ಸಹ ಅರಿವು ಕಾರ್ಯಕ್ರಮ ನಡೆಸಲು ಕ್ರಮಕೈಗೊಳ್ಳುವಂತೆ ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ದಾಕ್ಷಾಯಿಣಿ ಅವರು ಮಾತನಾಡಿ, ಇಂಜಿನಿಯರಿಂಗ್, ಮೇಡಿಕಲ್, ಕಾನೂನು ಕಾಲೇಜು ಮತ್ತಿತರ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ತಿಳುವಳಿಕೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿ ತಾಲೂಕು ಮಟ್ಟದಲ್ಲಿಯೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Share This Article

ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ಚೆಕ್​ ಮಾಡಿ ನೋಡಿ… ಇದ್ರೆ ನೀವು ರಾಜಯೋಗ ಅನುಭವಿಸುತ್ತೀರಿ!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

ನಿಮ್ಮ ಮನೆಯಲ್ಲಿ ಮರಿ ಹಲ್ಲಿ ಇದ್ರೆ ಈ ಒಂದು ತಪ್ಪು ಮಾತ್ರ ಮಾಡ್ಬೇಡಿ: ಮಾಡಿದ್ರೆ ಈ ಗಂಡಾಂತರ ಫಿಕ್ಸ್!

ಸಾಮಾನ್ಯವಾಗಿ ಹಿಂದು ಪುರಾಣದಲ್ಲಿ ಹಲ್ಲಿಗಳನ್ನು ಅದೃಷ್ಟದ ಸಂಕೇತ ಎಂದು ಕರೆಯಲಾಗಿದೆ. ಹಲ್ಲಿಗಳು ಲೊಚಗುಡುವುದು ಶುಭ ಸೂಚನೆ…

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…