ಚಿತ್ರದುರ್ಗ: ಜಿಲ್ಲೆಯ ಶ್ರೀ ಕ್ಷೇತ್ರ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವದ ಅಂಗವಾಗಿ ರಾಜ್ಯರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ ವಿಭಾಗ ಮಾ.15 ರಿಂದ 17ರವರೆಗೆ 200 ಜಾತ್ರಾ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಪರಶುರಾಮಪುರದಿಂದ ನಾಯಕನ ಹಟ್ಟಿಗೆ ಬಸ್‌ಗಳು ಸಂಚರಿಸಲಿವೆ. ಪ್ರಯಾಣಿಕರ ದಟ್ಟಣೆಗನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಕ್ರಮ ವಹಿಸುವುದಾಗಿ ನಿಗಮದ ಪ್ರಕಟಣೆ ತಿಳಿಸಿದೆ.
——
