28.5 C
Bengaluru
Monday, January 20, 2020

ನಾಲಾ ಅತಿಕ್ರಮಣ ತೆರವಿಗೆ ಸಿಡಿಪಿ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಹುಬ್ಬಳ್ಳಿ: ದಾಖಲೆಯ ಮಳೆ ತಂದೊಡ್ಡಿರುವ ಸಂಕಷ್ಟಗಳಿಂದ ಜನತೆಯ ಕೆಂಗಣ್ಣಿಗೆ ಗುರಿಯಾಗಿರುವ ಹು-ಧಾ ಮಹಾನಗರ ಪಾಲಿಕೆಯ ಹೆಗಲಿಗೆ ರಾಜಕಾಲುವೆ (ನಾಲಾ) ಅಕ್ಕ ಪಕ್ಕದ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವ ಹೊಣೆಗಾರಿಕೆ ಏರಿದೆ. ಯಾವ ಕಟ್ಟಡ ಅಕ್ರಮ, ಎಷ್ಟು ಅಕ್ರಮ ಎಂಬಿತ್ಯಾದಿ ಗೊಂದಲಗಳನ್ನು ಪಾಲಿಕೆ ಮೊದಲಿಗೆ ಬಗೆಹರಿಸಿಕೊಳ್ಳಬೇಕಿದೆ.

ನಗರದಲ್ಲಿ ಉಣಕಲ್ ಕೆರೆಯಿಂದ ಗಬ್ಬೂರ್ ಕ್ರಾಸ್​ವರೆಗೆ 11 ಕಿ.ಮೀ. ಉದ್ದಕ್ಕೆ ರಾಜಕಾಲುವೆ ಹಾದು ಹೋಗಿದೆ. ದಾಖಲೆ ಮಳೆಯಿಂದ ಉಣಕಲ್ ಕೆರೆ ಕೋಡಿ ಹರಿದು ಅಪಾರ ಪ್ರಮಾಣದಲ್ಲಿ ನೀರು ಹರಿದ ಪರಿಣಾಮ ರಾಜ ಕಾಲುವೆ ಅಕ್ಕಪಕ್ಕದ ದೇವಿನಗರ, ಲಿಂಗರಾಜನಗರ, ಹನುಮಂತನಗರ, ಬನಶಂಕರಿ ಬಡಾವಣೆ, ವಿಕಾಸನಗರ, ಸಿದ್ಧಲಿಂಗೇಶ್ವರನಗರ, ಇತ್ಯಾದಿ ಕಡೆ ನೂರಾರು ಮನೆಗಳಿಗೆ ನೀರು ನುಗ್ಗಿತ್ತು.

ಜನಜೀವನ ತತ್ತರಿಸಿ ಹೋಗಲು ಕಾರಣವಾದ ಇಂಥ ಘಟನೆಗೆ ನಾಲಾ ಅಕ್ಕಪಕ್ಕದ ಪ್ರದೇಶದ ಅತಿಕ್ರಮಣವೇ ಕಾರಣ. ಕೆಲವೆಡೆ ನಾಲಾವನ್ನೇ ನುಂಗಿ ಬೃಹತ್ ಕಟ್ಟಡಗಳನ್ನು ನಿರ್ವಿುಸಲಾಗಿದೆ. ನೂರಾರು ಕಟ್ಟಡಗಳು ನಿರ್ವಣಗೊಂಡಿವೆ. ಇದರಿಂದ ನಾಲಾದಲ್ಲಿ ಸರಾಗವಾಗಿ ನೀರು ಹರಿ ಯಲು ಸಾಧ್ಯವಾಗದೇ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿದೆ.

ನಾಲಾದ ಅಕ್ಕ ಪಕ್ಕ ಎಷ್ಟು ಸ್ಥಳ ಬಿಟ್ಟು ಕಟ್ಟಡ ಕಟ್ಟಬೇಕು? ಯಾವ ಕಟ್ಟಡ ಅಕ್ರಮ? ಕಟ್ಟಡ ನಿರ್ವಣಕ್ಕೆ ಪಾಲಿಕೆಯಿಂದ ಪರವಾನಗಿ ಪಡೆದಿದ್ದರೆ ಏನು ಮಾಡುವುದು? ಕಟ್ಟಡದ ಮಾಲೀಕರು ನ್ಯಾಯಾಲಯಕ್ಕೆ ಹೋದರೆ ಮುಂದೇನು ? ಎಂಬಿತ್ಯಾದಿ ಪ್ರಶ್ನೆಗಳಿವೆ.

ನಾಲಾದ ಅಕ್ಕ ಪಕ್ಕ ಎಷ್ಟು ಸ್ಥಳ ಬಿಟ್ಟು ಕಟ್ಟಡ ಕಟ್ಟಿರಬೇಕು ಎಂಬುದಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್​ಜಿಟಿ)ಯ ಮಾರ್ಗ ಸೂಚಿಯೇ ಅಂತಿಮವೆಂದು ಭಾವಿಸಲಾಗಿತ್ತು. ಆದರೆ, ಬಿಬಿಎಂಪಿಯ ಪ್ರಕರಣವೊಂದರಲ್ಲಿ ಅಲ್ಲಿಯ ನ್ಯಾಯಾಲಯವು ಸ್ಥಳೀಯ ಮಾಸ್ಟರ್ ಪ್ಲ್ಯಾನ್ ಅಂತಿಮವೆಂದು ಹೇಳಿದೆ. ಹಾಗಾಗಿ ಹು-ಧಾ ಪಾಲಿಕೆಯು ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರ ತಯಾರಿಸಿದ ಮಾಸ್ಟರ್ ಪ್ಲ್ಯಾನ್ (ಸಿಡಿಪಿ)-2031 ಅನ್ನು ಆಧಾರವಾಗಿ ಇಟ್ಟುಕೊಳ್ಳಲು ನಿರ್ಧರಿಸಿದೆ.

ಹುಡಾ ಸಿಡಿಪಿ ಪ್ರಕಾರ ರಾಜಕಾಲುವೆಯ ಎರಡು ಬದಿಯ ತಡೆಗೋಡೆಯಿಂದ 15 ಮೀಟರ್ ಹೊರಗಿನ ಪ್ರದೇಶವನ್ನು ಬಫರ್ ಝೋನ್ ಎಂದು ಘೊಷಿಸಲಾಗಿದೆ. ಈ ಝೋನ್​ನಲ್ಲಿ ನಿರ್ಮಾಣ ನಿಷಿದ್ಧ ಎಂದು ಹುಡಾ ನಗರ ಯೋಜನಾ ಸದಸ್ಯ ವಿವೇಕ ಕರೇಕರ ವಿಜಯವಾಣಿಗೆ ಸ್ಪಷ್ಟಪಡಿಸಿದ್ದಾರೆ.

ರಾಜಕಾಲುವೆ (ನಾಲಾ) ಅಕ್ಕಪಕ್ಕದ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವ ಕುರಿತು ಕೈಗೊಳ್ಳುವ ಕ್ರಮಗಳ ಬಗ್ಗೆ 10 ದಿನಗಳಲ್ಲಿ ವರದಿ ನೀಡುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದರು. ಜಿಲ್ಲಾಡಳಿತ, ಪಾಲಿಕೆ, ಹು-ಧಾ ಸ್ಮಾರ್ಟ್ ಸಿಟಿ ಅಧಿಕಾರಿಗಳು ತಕ್ಷಣ ಸಭೆ ನಡೆಸಬೇಕು. ಬಳಿಕ ಸಿಡಿಪಿಯನ್ನು ಆಧಾರವಾಗಿಟ್ಟುಕೊಂಡು ನಾಲಾ ಅಂಚಿನಲ್ಲಿ ಸರ್ವೆ ನಡೆಸಬೇಕಿದೆ.

ಸ್ಮಾರ್ಟ್ ಸಿಟಿಯಲ್ಲಿ

ಗ್ರೀನ್ ಕಾರಿಡಾರ್

ಉಣಕಲ್ ಕೆರೆ ಕೆಳಭಾಗದಿಂದ ಬಿಡ್ನಾಳವರೆಗೆ 8.59 ಕಿ.ಮೀ. ಉದ್ದ ರಾಜಕಾಲುವೆ ಮಾರ್ಗದಲ್ಲಿ ಹು-ಧಾ ಸ್ಮಾರ್ಟ್ ಸಿಟಿ ಯೋಜನೆಯಡಿ 130 ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಮೊಬಿಲಿಟಿ ಕಾರಿಡಾರ್ ನಿರ್ವಣವಾಗಲಿದೆ. ನಾಲಾದ ಎರಡು ಬದಿ ವಾಕಿಂಗ್ ಪಾಥ್, ಸೈಕಲ್ ಪಾಥ್ ಬರಲಿದೆ. ನಾಲಾದ ಎರಡು ಬದಿ ಕಾಂಕ್ರೀಟ್ ತಡೆಗೋಡೆ, ನಾಲೆಯಲ್ಲಿ ಹರಿಯುವ ಒಳಚರಂಡಿ ನೀರು ಶುದ್ಧೀಕರಣಕ್ಕೆ 4 ಘಟಕ ಸ್ಥಾಪನೆ, 17 ಅಡ್ಡ ರಸ್ತೆಗಳ ಜೋಡಣೆ ಈ ಯೋಜನೆಯಲ್ಲಿ ಅಡಕವಾಗಿದೆ. ನಾಲಾ 12ರಿಂದ 20 ಮೀಟರ್ ಅಗಲವಿದೆ.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...