16 C
Bangalore
Thursday, December 12, 2019

ನಾಲ್ಕನೇ ಬಾರಿ ಪ್ರಮಾಣ ವಚನಕ್ಕೆ ಬಿಎಸ್​ವೈ ಸಿದ್ಧತೆ

Latest News

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ಶಿವಮೊಗ್ಗ: ಅತ್ಯಧಿಕ ಮುಖ್ಯಮಂತ್ರಿಗಳನ್ನು ನೀಡಿದ ಜಿಲ್ಲೆ ಶಿವಮೊಗ್ಗ. ಇದೇ ಜಿಲ್ಲೆಯಲ್ಲಿ ರಾಜಕಾರಣ ಆರಂಭಿಸಿದ ಬಿ.ಎಸ್.ಯಡಿಯೂರಪ್ಪ ಇದೀಗ ದಾಖಲೆಯ ನಾಲ್ಕನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಸಂಗತಿ ಜಿಲ್ಲೆಯ ಬಿಎಸ್​ವೈ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದೆ.

ಈ ಹಿಂದೆ 2008ರಲ್ಲಿ ಬಿಎಸ್​ವೈ ಪ್ರಮಾಣವಚನ ಸ್ವೀಕರಿಸಿ ಮೂರು ವರ್ಷಗಳ ಕಾಲ ಸಿಎಂ ಆಗಿ ಆಡಳಿತ ನಡೆಸಿದ್ದನ್ನು ಬಿಟ್ಟರೆ ಉಳಿದ ಎರಡು ಅವಧಿಗಳಲ್ಲಿ ಕೆಲ ದಿನಗಳಲ್ಲೇ ಬಹುಮತ ಕೊರತೆಯಿಂದ ಹುದ್ದೆ ತ್ಯಜಿಸಬೇಕಾದ ಅನಿವಾರ್ಯತೆ ಎದುರಾಗಿತ್ತು. ಈಗಿನ ವಿಧಾನಸಭೆ ಅವಧಿ ಇನ್ನೂ ಹೆಚ್ಚೂ ಕಡಿಮೆ ನಾಲ್ಕು ವರ್ಷಗಳಿರುವುದರಿಂದ ಯಡಿಯೂರಪ್ಪ ಅವರಿಗೆ ಉತ್ತಮ ಅವಕಾಶ ಒದಗಿಬಂದಿದೆ.

2006ರಿಂದ ಒಂದೂವರೆ ವರ್ಷ ಉಪಮುಖ್ಯಮಂತ್ರಿಯಾಗಿ 2008ರಲ್ಲಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಶಿವಮೊಗ್ಗ ಜಿಲ್ಲೆಗೆ ಸಾಕಷ್ಟು ಯೋಜನೆ ತಂದಿದ್ದರು. ಹೀಗಾಗಿ ಅವರು ಮತ್ತೊಮ್ಮೆ ಸಿಎಂ ಆದರೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂಬ ಅಭಿಪ್ರಾಯ ಜಿಲ್ಲೆಯ ಬಹುತೇಕರಲ್ಲಿತ್ತು. ಈಗ ಅದು ಈಡೇರುವಂತಾಗಿದೆ.

ನನೆಗುದಿಗೆ ಬಿದ್ದ ಯೋಜನೆಗಳು: ಮುಖ್ಯಮಂತ್ರಿಯಾದವರು ಇಡೀ ರಾಜ್ಯದ ಅಭಿವೃದ್ದಿಗೆ ಒತ್ತು ನೀಡಬೇಕಾದದ್ದು ವಾಸ್ತವ. ಆದರೆ ಸ್ವಂತ ಜಿಲ್ಲೆಗೆ ತುಸು ಹೆಚ್ಚಿನ ಒತ್ತು ನೀಡಬೇಕಾಗುತ್ತದೆ. ಇದೇ ಪರಿಕಲ್ಪನೆಯಲ್ಲಿ ಈ ಹಿಂದೆ ಆಯುರ್ವೆದ ಕಾಲೇಜು, ಕೃಷಿ ಹಾಗೂ ತೋಟಗಾರಿಕೆ ವಿವಿ, ಪಶುವೈದ್ಯಕೀಯ ಕಾಲೇಜು ಮುಂತಾದವುಗಳನ್ನು ಬಿಎಸ್​ವೈ ಮಂಜೂರು ಮಾಡಿದ್ದರು. ಇವೆಲ್ಲವೂ ಆರಂಭವಾಗಿವೆ.

ಬಹು ನಿರೀಕ್ಷಿತ ವಿಮಾನ ನಿಲ್ದಾಣ ಕಾಮಗಾರಿ ಆರಂಭವಾಗಿದ್ದು ಬಿಎಸ್​ವೈ ಸಿಎಂ ಆಗಿದ್ದ ಅವಧಿಯಲ್ಲೇ. ಬಳಿಕ ಕೆಲ ತಾಂತ್ರಿಕ ಕಾರಣಗಳಿಂದ ಅದು ಸ್ಥಗಿತವಾಗಿತ್ತು. ಈಗ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿರುವುದರಿಂದ ಮುಂದೆ ತಮ್ಮದೇ ನೇತೃತ್ವದಲ್ಲಿ ರಾಜ್ಯದಲ್ಲೂ ಸರ್ಕಾರ ಅಸ್ತಿತ್ವಕ್ಕೆ ಬರುವುದರಿಂದ ಯಡಿಯೂರಪ್ಪ ವಿಮಾನ ನಿಲ್ದಾಣ ಕಾಮಗಾರಿಗೆ ಮತ್ತೆ ಚಾಲನೆ ನೀಡುವ ನಿರೀಕ್ಷೆಯಿದೆ.

ಆಯುರ್ವೆದ ಆಸ್ಪತ್ರೆ ಕಟ್ಟಡದಲ್ಲೇ ಆಯುರ್ವೆದ ಕಾಲೇಜು ಆರಂಭವಾಗಿದೆ. ಸೋಗಾನೆಯಲ್ಲಿ ಕಾಲೇಜು ನಿರ್ವಣಕ್ಕೆಂದು ಜಾಗ ಮಂಜೂರಾಗಿದ್ದರೂ ಹಲವು ಅಡೆತಡೆಗಳು ಅದಕ್ಕೆ ಎದುರಾಗಿವೆ. ಇದನ್ನು ನಿವಾರಣೆ ಮಾಡಬೇಕಾದ ಅನಿವಾರ್ಯತೆಯೂ ಬಿಎಸ್​ವೈ ಹೆಗಲೇರಲಿದೆ.

ಯಾರಿಗೆ ಸಿಗಲಿದೆ ಸಂಪುಟದಲ್ಲಿ ಸ್ಥಾನ: ಬಿಎಸ್​ವೈ ಮತ್ತೊಮ್ಮೆ ಸಿಎಂ ಆಗುವುದು ಖಚಿತವಾಗುತ್ತಿದ್ದಂತೆಯೇ ಜಿಲ್ಲೆಯಲ್ಲಿ ರಾಜಕೀಯ ಚರ್ಚೆಗಳು ಆರಂಭವಾಗಿವೆ. ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ 6ರಲ್ಲಿ ಬಿಜೆಪಿ ಶಾಸಕರೇ ಇರುವುದರಿಂದ ಸಂಪುಟ ಸೇರುವ ಅದೃಷ್ಟಶಾಲಿಗಳು ಯಾರ್ಯಾರು ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ತೀವ್ರಗೊಂಡಿದೆ.

ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಸ್ಥಾನ ಪಡೆಯುವುದು ನಿಶ್ಚಿತ. ಈ ಹಿಂದೆ ಜಲಸಂಪನ್ಮೂಲ, ಇಂಧನ, ಉಪಮುಖ್ಯಮಂತ್ರಿ ಸ್ಥಾನದ ಜತೆಗೆ ಕಂದಾಯ ಖಾತೆಗಳನ್ನು ನಿಭಾಯಿಸಿರುವ ಈಶ್ವರಪ್ಪ, ಈ ಬಾರಿಯೂ ಡಿಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಜತೆಗೆ ಅವರಿಗೆ ಪ್ರಮುಖ ಖಾತೆಯೂ ಸಿಗುವುದು ನಿಶ್ಚಿತ.

ಈಡಿಗ ಸಮುದಾಯಕ್ಕೆ ಸೇರಿದ ಹರತಾಳು ಹಾಲಪ್ಪ ಹಾಗೂ ಐದು ಬಾರಿ ಶಾಸಕರಾಗಿರುವ ಆರಗ ಜ್ಞಾನೇಂದ್ರ ಇಬ್ಬರೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳೇ. ಆದರೆ ಈಗಿನ ಸ್ಥಿತಿಯನ್ನು ಗಮನಿಸಿದರೆ ಈಶ್ವರಪ್ಪ ಹೊರತುಪಡಿಸಿದರೆ ಜಿಲ್ಲೆಯ ಬಿಜೆಪಿಯ ಬೇರೆ ಶಾಸಕರಿಗೆ ಬಿಎಸ್​ವೈ ಸಂಪುಟದಲ್ಲಿ ಸ್ಥಾನ ಸಿಗುವ ಲಕ್ಷಣಗಳಿಲ್ಲ.

ಮೈತ್ರಿ ಸರ್ಕಾರ ಬೀಳಿಸಲು ನೆರವಾದ ಅತೃಪ್ತರಿಗೆ ಬಿಜೆಪಿ ಯಾವ ಭರವಸೆ ನೀಡಿದೆ ಎಂಬುದು ಇನ್ನೂ ನಿಗೂಢ. ಅವರೆಲ್ಲರಿಗೂ ಸ್ಥಾನಮಾನ ನೀಡುವ ಜತೆಗೆ ರಾಜ್ಯದ ವಿವಿಧ ಜಿಲ್ಲೆಗಳ ಬಿಜೆಪಿ ಶಾಸಕರಿಗೂ ಪ್ರಾತಿನಿಧ್ಯ ನೀಡಬೇಕಿದೆ. ಹೀಗಾಗಿ ಶಿವಮೊಗ್ಗ ಜಿಲ್ಲೆಗೆ ಸಿಎಂ ಸೇರಿ ಎರಡು ಪ್ರಾತಿನಿಧ್ಯ ಸಿಗಬಹುದಷ್ಟೇ.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...