ನಾಳೆಯಿಂದ ಯುವಜನೋತ್ಸವ ಜ್ಞಾನೋತ್ಸವ

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಶರಣಬಸವ ವಿಶ್ವವಿದ್ಯಾಲಯ ಆವರಣದಲ್ಲಿ ಪ್ರಥಮ ಯುವಜನೋತ್ಸವ ಜ್ಞಾನೋತ್ಸವ 22ರಿಂದ ಮೂರು ದಿನ ಹಮ್ಮಿಕೊಳ್ಳಲಾಗಿದೆ ಎಂದು ವಿವಿ ಕುಲಾಧಿಪತಿ ಆಗಿರುವ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನ ಪೀಠಾಧಿಪತಿ ಶ್ರೀ ಡಾ.ಶರಣಬಸವಪ್ಪ ಅಪ್ಪ ತಿಳಿಸಿದರು.

ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಶುಕ್ರವಾರ ಬೆಳಗ್ಗೆ 10ಕ್ಕೆ ಶ್ರೀ ಡಾ.ಶರಣಬಸವಪ್ಪ ಅಪ್ಪ ಅಧ್ಯಕ್ಷತೆಯಲ್ಲಿ ಚಾಲನೆ ನೀಡುವರು. ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ ದಾಕ್ಷಾಯಿಣಿ, ಕಾರ್ಯದರ್ಶಿ ಬಸವರಾಜ ದೇಶಮುಖ, ಕುಲಪತಿ ಡಾ.ನಿರಂಜನ ನಿಷ್ಠಿ ಇತರರು ಭಾಗವಹಿಸಲಿದ್ದಾರೆ ಎಂದು ಅವರು ದಾಸೋಹ ಮನೆಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆಂಗ್ಲ ದೈನಿಕ ದಿ ಹಿಂದು ಮತ್ತು ಫ್ಯೂಚರ್ ಇಂಡಿಯಾ ಕ್ಲಬ್ ಸಹಯೋಗದಡಿ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ನಡೆಯಲಿದೆ. ಸ್ಪರ್ಧೆಗಳು ಆಯಾ ವಿಭಾಗಗಳಲ್ಲಿ ನಡೆಯಲಿದೆ. ಶರಣಬಸವ ವಿವಿ ಸೇರಿ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಇತರ ವಿವಿಗಳ 2000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರತಿಭೆ ಪ್ರದರ್ಶಿಸಲಿದ್ದಾರೆ ಎಂದರು.

ಮಹಾರಾಷ್ಟ್ರ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಹೈದರಾಬಾದ್ನ ಜವಾಹರಲಾಲ್ ನೆಹರು ಟೆಕ್ನಾಲಜಿಕಲ್ ಯೂನಿವರ್ಸಿಟಿ, ಗುಲ್ಬರ್ಗ ವಿಶ್ವವಿದ್ಯಾಲಯ, ವಿಟಿಯು, ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿ, ಕರ್ನಾಟಕ ಕೇಂದ್ರೀಯ ವಿವಿ, ಬೆಂಗಳೂರಿನ ರೇವಾ ವಿವಿ ಒಳಗೊಂಡು ಬೀದರ್, ಯಾದಗಿರಿ, ರಾಯಚೂರು, ಮಂಗಳೂರು, ಬೆಂಗಳೂರು ಸೇರಿ ಕರ್ನಾಟಕದ ಇತರ ಪ್ರದೇಶದ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಕುಲಪತಿ ಡಾ.ನಿರಂಜನ ನಿಷ್ಠಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಡೀನ್ ಡಾ.ಲಿಂಗರಾಜ ಶಾಸ್ತ್ರಿ, ಡಾ.ಲಕ್ಷ್ಮೀ ಮಾಕಾ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಟಿ.ವಿ.ಶಿವಾನಂದನ್ ಇತರರಿದ್ದರು.

ನೆರೆ ರಾಜ್ಯಗಳ ಪರಿಣತ ತೀಪರ್ುಗಾರರು
ಯುವಜನೋತ್ಸವಕ್ಕೆ ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣಂದಿಂದ ಬರುವ ತೀರ್ಪುಗಾರರು ವಿವಿಧ ಸ್ಪರ್ಧೆಗಳಲ್ಲಿ ಮೊದಲ ಮೂರು ಉತ್ತಮ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಿದ್ದಾರೆ. ತೀರ್ಪುಗಾರರ ಜತೆ ಕಲಬುರಗಿ ಕೇಂದ್ರ ಸ್ಥಾನ ಒಳಗೊಂಡು ವಿವಿಧ ಕ್ಷೇತ್ರಗಳ ಸಾಧಕರನ್ನು ಆಹ್ವಾನಿಸಲಾಗಿದೆ. ಯುವಜನೋತ್ಸವ ಕೇವಲ ಸಾಂಸ್ಕೃತಿಕ, ಸಾಹಿತ್ಯಕ ಸ್ಪರ್ಧೆಗಳ ಕಾರ್ಯಕ್ರಮವಾಗಿರದೆ ವಿವಿಧ ತಾಂತ್ರಿಕ ವಿಷಯಗಳಲ್ಲಿ ಅಭ್ಯಸಿಸುತ್ತಿರುವ ವಿದ್ಯಾರ್ಥಿಗಳ ತಾಂತ್ರಿಕ ಸ್ಪರ್ಧೆಯೂ ಆಗಿರಲಿದೆ. ಹೀಗಾಗಿ ಎಲ್ಲ ವಿಭಾಗದವರಿಗಾಗಿ ಏರೋ ಮಾಡೆಲಿಂಗ್, ಪೇಪರ್ ಪ್ರಜಂಟೇಷನ್ ಮತ್ತು ರೋಬೋಟಿಕ್, ಆ್ಯಡ್ಮ್ಯಾಡ್ ಶೋ ಸೇರಿ 120ಕ್ಕೂ ಹೆಚ್ಚಿನ ಸ್ಪರ್ಧೆಗಳಿವೆ.