More

  ನಿಂತಿದ್ದ ಲಾರಿಗೆ ಕ್ರೂಜರ್ ಡಿಕ್ಕಿ: ಐವರ ಸಾವು


  ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಜರ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 5 ಜನ ಮೃತಪಟ್ಟ ಧಾರುಣ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 150 ನಲ್ಲಿ ಸೋಮವಾರ ನಸುಕಿನ ಜಾವ ನಡೆದಿದೆ.
  ಆಂಧ್ರಪ್ರದೇಶದ ನಂದ್ಯಾಲ ಗ್ರಾಮದ ಮುನೀರ್( 40)
  ನಯಾಮತ್ (40), ಮುದ್ದತ್ ಶಿರ್ ( 12), ರಮಿಜಾ, ಬೇಗಂ (50), ಸುಮ್ಮಿ (12) ಮೃತ ದುರ್ದೈವಿಗಳು.
  ನಂದ್ಯಾಲ ಗ್ರಾಮದಿಂದ ಕಲಬುರಗಿಯ ಖಾಜಾ ಬಂದೇ ನವಾಜ್ ಉರಸ್ ಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿದ್ದಾರೆ.
  ಜೀಪಿನಲ್ಲಿ ಒಟ್ಟು 13 ಜನ ಪ್ರಯಾಣಿಸುತ್ತಿದ್ದರು. ತೀವ್ರ ಗಾಯಗೊಂಡ 8 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಯಾದಗಿರಿ ಮತ್ತು ರಾಯಚೂರು ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
  ಸ್ಥಳಕ್ಕೆ ಎಸ್.ಪಿ.ಡಾ.ವೇದಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts