21.7 C
Bengaluru
Tuesday, January 21, 2020

ನಿವೇಶನ ನೀಡುವುದಾಗಿ 2 ಕೋಟಿ ರೂ. ವಂಚನೆ ಆರೋಪಿಸಿ ಜೆಡಿಎಸ್ ಮುಖಂಡರಿಬ್ಬರ ವಿರುದ್ಧ ದೂರು

Latest News

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ ಸಿದ್ಧಿವಿನಾಯಕನಿಗೆ 35 ಕಿಲೋ ಚಿನ್ನ | ದೆಹಲಿ ಮೂಲದ ಉದ್ಯಮಿಯ ಕಾಣಿಕೆಯ ಮೌಲ್ಯ 14 ಕೋಟಿ ರೂಪಾಯಿ!

ಮುಂಬೈ: ಕಳೆದ 200ಕ್ಕೂ ಹೆಚ್ಚು ವರ್ಷಗಳ ಅವಧಿಯಲ್ಲಿ ಮುಂಬೈ ಸಿದ್ಧಿವಿನಾಯಕ ದೇವರಿಗೆ ಇದೇ ಮೊದಲ ಬಾರಿಗೆ 35 ಕಿಲೋ ಚಿನ್ನ ಕಾಣಿಕೆ ರೂಪದಲ್ಲಿ...

ಬೆಂಗಳೂರು: ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಮತ್ತು ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ಹೆಸರು ಬಳಸಿಕೊಂಡು, ನಿವೇಶನ ಕೊಡಿಸುವುದಾಗಿ ಹೇಳಿ ಜೆಡಿಎಸ್​ ಮುಖಂಡರಿಬ್ಬರು 2 ಕೋಟಿ ರೂ. ವಂಚಿಸಿದ್ದಾರೆಂದು ಆರೋಪಿಸಲಾಗಿದೆ. ಜೆಡಿಎಸ್​ ಮುಖಂಡರಾದ ಸತೀಶ್​ ಗೌಡ ಮತ್ತು ಸುರೇಶ್​ ವಂಚನೆ ಆರೋಪಿಗಳು.

ಸುಬ್ರಮಣ್ಯನಗರ ಜೆಡಿಎಸ್​ನ ಮುಖಂಡನಾಗಿರುವ ಸತೀಶ್​ ಗೌಡ, 5 ಲಕ್ಷ ರೂ.ಗೆ 30/40 ಚದರಡಿ ನಿವೇಶನ ಕೊಡುವುದಾಗಿ ನಂಬಿಸಿದ್ದ ಎನ್ನಲಾಗಿದೆ. ಈ ಮಾತನ್ನು ನಂಬಿದ 100ಕ್ಕೂ ಹೆಚ್ಚು ಜನರು ಸತೀಶ್​ ಗೌಡನಿಗೆ 5 ಲಕ್ಷ ರೂ. ಕೊಟ್ಟಿದ್ದರು ಎಂದು ಹೇಳಲಾಗಿದೆ. ಹಣ ಪಡೆದ ಸತೀಶ್​ಗೌಡ ಮತ್ತಿತರರು ಲಗ್ಗರೆ, ವಿಜಯನಗರ, ನಾಗರಬಾವಿ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನಕಲಿ ದಾಖಲಿ ಸೃಷ್ಟಿಸಿ ನಿವೇಶನಗಳನ್ನು ನೋಂದಣಿ ಮಾಡಿಸಿಕೊಟ್ಟಿದ್ದರು. ನಿವೇಶನ ಖರೀದಿಸಿದವರು ತಮ್ಮ ನಿವೇಶನಗಳ ಪಾಣಿ ತೆಗೆದುಕೊಳ್ಳಲು ಹೋದಾಗ, ಮೋಸ ಹೋಗಿರುವುದು ಖಚಿತಪಟ್ಟಿತ್ತು. ಈ ಹಿನ್ನೆಲೆಯಲ್ಲಿ ನೊಂದವರು ಸುಬ್ರಹ್ಮಣ್ಯನಗರ ಮತ್ತು ಮಹಾಲಕ್ಷ್ಮೀ ಲೇಔಟ್​ ಪೊಲೀಸ್​ ಠಾಣೆಗಳಲ್ಲಿ ದೂರು ದಾಖಲಿಸಿದ್ದಾರೆ.

ಎನ್​ಸಿಆರ್​ ಮಾಡಿಕೊಂಡ ಪೊಲೀಸರು: ನೊಂದ ನಿವೇಶನದಾರರು ನೀಡಿದ ದೂರನ್ನು ಆಧರಿಸಿ ಎಫ್​ಐಆರ್​ ದಾಖಲಿಸಬೇಕಿದ್ದ ಸುಬ್ರಹ್ಮಣ್ಯನಗರ ಪೊಲೀಸರು ಎನ್​ಸಿಆರ್​ ಮಾಡಿಕೊಂಡಿದ್ದಾರೆ. ಇದಕ್ಕೆ ನೊಂದ ನಿವೇಶನದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಎಚ್​.ಡಿ. ಕುಮಾರಸ್ವಾಮಿ ಮಧ್ಯಪ್ರವೇಶಿಸಿ ತಮಗೆ ನ್ಯಾಯಕೊಡಿಸಬೇಕು. ಇಲ್ಲವಾದಲ್ಲಿ ವಿಧಾನಸೌಧ ಎದುರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ್ಧಾರೆ. (ದಿಗ್ವಿಜಯ ನ್ಯೂಸ್​)

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...