20.4 C
Bangalore
Monday, December 9, 2019

ನಿವೇಶನ ಹೊಂದಲು ಸಲಹೆ

Latest News

ಬೈ ಎಲೆಕ್ಷನ್ ರಿಸಲ್ಟ್​| ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಹುಬ್ಬಳ್ಳಿ: ಶಿವಸಿಂಪಿ ಸಮಾಜದವರು ಸ್ವಂತದ್ದಾದ ನಿವೇಶನ ಹೊಂದುವುದು ಸೂಕ್ತ. ಜೊತೆಗೆ, 2 ಎ ಮೀಸಲು ಪಡೆದುಕೊಂಡರೆ ಅನುಕೂಲವಾಗುತ್ತದೆ. ಈ ದಿಶೆಯಲ್ಲಿ ಸಮಾಜದವರು ಪ್ರಕ್ರಿಯೆ ಆರಂಭಿಸಿದರೆ ಸಾಧ್ಯವಿರುವ ಎಲ್ಲ ರೀತಿಯ ಬೆಂಬಲ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದರು.

ಅಖಿಲ ಭಾರತ ಶಿವಸಿಂಪಿ ಸಂಘದಿಂದ ಇಲ್ಲಿನ ಬಮ್ಮಾಪುರ ಓಣಿಯ ಶ್ರೀ ಗುರುಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ಶಿವದಾಸಿಮಯ್ಯ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಖಾಲಿ ನಿವೇಶನ ಮಂಜೂರು ಮಾಡುವಂತೆ ಸಮಾಜದಿಂದ ಮನವಿ ಸಲ್ಲಿಸಿ ಎಂದು ಸಲಹೆ ನೀಡಿದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರ ಮೇಲ್ವರ್ಗದವರಿಗೆ ಶೇ. 10ರಷ್ಟು ಮೀಸಲು ಪ್ರಕಟಿಸಿದೆ. ಬೇರೆ ಬೇರೆ ರಾಜ್ಯಗಳು ಪಾಲನೆ ಮಾಡಿವೆ. ಆದರೆ, ರಾಜ್ಯ ಸರ್ಕಾರ ಇದನ್ನು ಇನ್ನೂ ಜಾರಿಗೆ ತರುತ್ತಿಲ್ಲ. ತಂದರೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಬಂದು ಬಿಡುತ್ತದೆ ಎನ್ನುವ ಭಯವಿದೆ. ಇದರ ಲಾಭ ಮೇಲ್ವರ್ಗದ ಬಡವರಿಗೆ ಅನುಕೂಲವಾಗಲಿದೆ. ಶಿವಸಿಂಪಿ ಸಮಾಜಕ್ಕೂ ಇದರ ಲಾಭ ಸಿಗಲಿದೆ ಎಂದರು.

ಸಂಸದ ಪ್ರಲ್ಹಾದ ಜೋಶಿ ಮಾತನಾಡಿ ‘ಶರಣರ, ದಾರ್ಶನಿಕರ ತತ್ವಗಳನ್ನು ಅಳವಡಿಸಿಕೊಂಡರೆ ದೇಶದಲ್ಲಿ ಶಾಂತಿ-ನೆಮ್ಮದಿ ನೆಲೆಸಲಿದೆ. ಭಾರತ ಮಾತೆ -ಜಗನ್ಮಾತೆ ಆಗುವ ಕಾಲ ಸನ್ನಿಹಿತವಾಗಿದೆ. 21ನೇ ಶತಮಾನ ಭಾರತದ ಶತಮಾನವಾಗಬೇಕು. ಇದಕ್ಕೆ ಎಲ್ಲರ ಆಶೀರ್ವಾದ ಬೇಕು’ ಎಂದರು.

ಸಾನ್ನಿಧ್ಯ ವಹಿಸಿದ್ದ ರುದ್ರಾಕ್ಷಿಮಠದ ಶ್ರೀ ಬಸವಲಿಂಗ ಸ್ವಾಮೀಜಿ ಮಾತನಾಡಿ, ‘ಮಕ್ಕಳಿಗೆ ಶಿಕ್ಷಣ ನೀಡಬೇಕು. ಅಧಿಕಾರಕ್ಕಿಂತ ವಿದ್ಯೆ ಮೇಲೆಂಬುದು ಅರಿತುಕೊಳ್ಳಬೇಕು. ಕಲಿತ ವಿದ್ಯೆ ಹಾಗೂ ಕಾಯಕ ಎಂದಿಗೂ ನಮ್ಮನ್ನು ಕೈಬಿಡುವುದಿಲ್ಲ. ಸಮಾಜದಲ್ಲಿನ ಬಡವರು ಹಾಗೂ ಪ್ರತಿಭಾವಂತರಿಗೆ ಪ್ರೋತ್ಸಾಹಿಸಬೇಕು. ಅವರು ಮುಂದೆ ಸಮಾಜಕ್ಕೆ ಋಣಿಯಾಗಿರುತ್ತಾರೆ. ಸರ್ಕಾರದಿಂದ ಸಿಗುವ ಸವಲತ್ತು ಪಡೆಯಲು ಎಲ್ಲರೂ ಒಗ್ಗಟ್ಟಾಗಿರಬೇಕು’ ಎಂದು ಸಲಹೆ ನೀಡಿದರು.

ಸನ್ಮಾನ ಸ್ವೀಕರಿಸಿದ ಸಾಹಿತಿ ಚಂದ್ರಕಾಂತ ತಾಳಿಕೋಟಿ, ಪತ್ರಕರ್ತರಾದ ಜಗದೀಶ ಬುರ್ಲಬಡ್ಡಿ, ವಾಸುದೇವ ಹೆರಕಲ್ ಅವರು ಮಾತನಾಡಿದರು. ಇನ್​ಸ್ಪೈರ್ ಪ್ರಶಸ್ತಿ ಪುರಸ್ಕೃತೆ ಕು. ಲಕ್ಷ್ಮೀ ಇಟಗಿ, ಎನ್​ಸಿಸಿಯಲ್ಲಿ ಪ್ರಧಾನ ಮಂತ್ರಿ ಬೆಳ್ಳಿ ಪದಕ ಪುರಸ್ಕೃತ ಪ್ರಣೀತ ವಿಜಯ ಕಲ್ಯಾಣಶೆಟ್ಟಿ, ದಾನಿಗಳಾದ ಡಾ. ಇಷ್ಟಲಿಂಗಪ್ಪ ಅವರ ಪತ್ನಿ ಹೇಮಾ ಕುಪ್ಪಸ್ತ ಅವರನ್ನೂ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಅಖಿಲ ಭಾರತ ಶಿವಶಿಂಪಿ ಸಂಘದ ಅಧ್ಯಕ್ಷ ಗುರುಸಿದ್ದಪ್ಪ ಚಟ್ನಿ ಅಧ್ಯಕ್ಷತೆ ವಹಿಸಿದ್ದರು.

ಸಂಘದ ಕಾರ್ಯಾಧ್ಯಕ್ಷ ಸಿ.ವಿ. ಗಂಗಾವತಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದಕ್ಕೂ ಮೊದಲು ನಡೆದ ಶ್ರೀ ಶಿವದಾಸಿಮಯ್ಯನವರ ಭಾವಚಿತ್ರ ಮೆರವಣಿಗೆಗೆ ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಚಾಲನೆ ನೀಡಿದರು.

ಉಪಾಧ್ಯಕ್ಷ ಪಂಚಲಿಂಗಪ್ಪ ಖೋದಾನಪುರ, ಗೌರವ ಕಾರ್ಯದರ್ಶಿ ಈಶ್ವರ ಅಕ್ಕಿ, ಉಪ ಕಾರ್ಯಾಧ್ಯಕ್ಷ ಪ್ರಶಾಂತ ಕುಪ್ಪಸ್ತ, ಕೋಶಾಧಿಕಾರಿ ಪ್ರಭುಲಿಂಗಪ್ಪ ಕುಬಸದ, ವಿ.ಐ. ಅಳಗುಂಡಿಗೆ ಇತರರು ಉಪಸ್ಥಿತರಿದ್ದರು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...