25.5 C
Bangalore
Monday, December 16, 2019

ನಿಷ್ಕ್ರಿಯ ಸ್ಥಿತಿಯಲ್ಲಿ ಕಾರ್ವಿುಕ ಇಲಾಖೆ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಮುಸ್ಲಿಂರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ

* ಸಾಮರಸ್ಯಕ್ಕೆ ಮುನ್ನುಡಿ ಬರೆದ ಕಾರ್ಯಕ್ರಮವಿಜಯವಾಣಿ ಸುದ್ದಿಜಾಲ ಬಳ್ಳಾರಿನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ...

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಮುಂಡರಗಿ: ಕಾರ್ವಿುಕ ವರ್ಗದ ಹಿತರಕ್ಷಣೆ ಮತ್ತು ಅವರ ಕಲ್ಯಾಣಕ್ಕಾಗಿ ಇರುವಂಥ ಕಾರ್ವಿುಕ ಇಲಾಖೆಯು ಪಟ್ಟಣದಲ್ಲಿ ನಿಷ್ಕ್ರಿಯ ಸ್ಥಿತಿಯಲ್ಲಿದೆ. ಹೀಗಾಗಿ, ತಾಲೂಕಿನ ಕಾರ್ವಿುಕ ವರ್ಗವು ಸರ್ಕಾರದ ಸೌಲಭ್ಯ ಪಡೆಯಲು ಪರದಾಡುವಂಥ ಸ್ಥಿತಿ ನಿರ್ವಣವಾಗಿದೆ.

- Advertisement -

ಪಟ್ಟಣದ ಖಾಸಗಿ ಕಟ್ಟಡದಲ್ಲಿರುವ ಕಾರ್ವಿುಕ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿಂದ ಕಾರ್ವಿುಕರಿಗೆ ಸ್ಪಂದಿಸುವ ಕಾರ್ಯ ನಡೆಯುತ್ತಿಲ್ಲ. ತಾಲೂಕಿನಲ್ಲಿ 3019 ಕಾರ್ವಿುಕರು ಗುರುತಿನ ಚೀಟಿ ಹೊಂದಿದ್ದಾರೆ.

ಕಾರ್ವಿುಕ ಇಲಾಖೆಯಲ್ಲಿ ಗುರುತಿನ ಚೀಟಿ ಹೊಂದಿದವರಿಗೆ 60 ವರ್ಷದವರಿಗೆ ಮಾಸಿಕ ಪಿಂಚಣಿ, ದುರ್ಬಲತೆ ಪಿಂಚಣಿ, ಗೃಹ ಭಾಗ್ಯ, ಹೆರಿಗೆ ಸೌಲಭ್ಯ, ಅಂತ್ಯಕ್ರಿಯೆ ವೆಚ್ಚ, ಶೈಕ್ಷಣಿಕ ಸಹಾಯಧನ, ಪ್ರತಿಭಾವಂತ ಮಕ್ಕಳಿಗೆ ಧನ ಸಹಾಯ, ವೈದ್ಯಕೀಯ ಸಹಾಯಧನ, ಅಪಘಾತ ಪರಿಹಾರ, ಪ್ರಮುಖ ವೈದ್ಯಕೀಯ ವೆಚ್ಚದ ಸಹಾಯಧನ, ಮದುವೆ ಸಹಾಯಧನ… ಹೀಗೆ ಹಲವಾರು ಯೋಜನೆಗಳನ್ನು ಕಾರ್ವಿುಕ ವರ್ಗಕ್ಕೆ ನೀಡಲಾಗುತ್ತಿದೆ. ಆದರೆ, ಕಾರ್ವಿುಕರು ಈ ಎಲ್ಲ ಸೌಲಭ್ಯ ಪಡೆಯಬೇಕೆಂದರೆ ಹರಸಾಹಸ ಪಡಬೇಕಾಗಿದೆ.

ಕಾರ್ವಿುಕ ಇಲಾಖೆ ಕಚೇರಿಗೆ ಬಂದರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾಗಿ ಸಿಗುತ್ತಿಲ್ಲ. ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿ ಒಂದು ವರ್ಷ, ಎರಡು ವರ್ಷ ಕಳೆದರೂ ಸಮರ್ಪಕವಾಗಿ ದೊರೆಯುತ್ತಿಲ್ಲ. ಕೆಲವರಿಗೆ ಸೌಲಭ್ಯ ಸಿಕ್ಕರೆ, ಇನ್ನು ಕೆಲವರು ಕಚೇರಿಗೆ ಅಲೆದಾಡುವಂಥ ವಾತಾವರಣವಿದೆ.

ಸಿಬ್ಬಂದಿ ಕೊರತೆ:
ಕಾರ್ವಿುಕ ಇಲಾಖೆ ಕಚೇರಿಯಲ್ಲಿ ಕಾರ್ವಿುಕ ನಿರೀಕ್ಷಕರನ್ನು ಮಾತ್ರ ನೇಮಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್ ಒಬ್ಬರು ಕಾರ್ಯನಿರ್ವಹಿಸುತ್ತಿದ್ದಾರೆ. ಮುಂಡರಗಿ ಕಾರ್ವಿುಕ ನಿರೀಕ್ಷಕರು, ಶಿರಹಟ್ಟಿ ಮತ್ತು ಗದಗ ವಿಭಾಗದಲ್ಲೂ ಪ್ರಭಾರಿ ನಿರೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಕಚೇರಿಯಲ್ಲಿ ಸರಿಯಾಗಿ ಸಿಗುತ್ತಿಲ್ಲ. ಕಚೇರಿಗೆ ಬಂದಾಗ ಅರ್ಜಿ ಪರಿಶೀಲನೆ, ಕಾರ್ವಿುಕರ ಕಾರ್ಯ ಪರಿಶೀಲನೆಗೆ ಸಮಯವೇ ಸಿಗುವುದಿಲ್ಲ. ಆದ್ದರಿಂದ ಕಾಯಂ ನಿರೀಕ್ಷಕರನ್ನು ನೇಮಿಸಬೇಕಾಗಿದೆ.

ಸಿಗದ ಮಾಹಿತಿ:
ಸರ್ಕಾರದ ಸೌಲಭ್ಯ ಪಡೆಯಲು ಕಾರ್ವಿುಕರು ಕಾರ್ವಿುಕ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸುತ್ತಾರೆ. ಆದರೆ, ಕಚೇರಿಯಲ್ಲಿ ಕಾಯಂ ನಿರೀಕ್ಷಕರು ಇರದ ಹಿನ್ನೆಲೆಯಲ್ಲಿ ನಿಗದಿತ ಸಮಯಕ್ಕೆ ಕಾರ್ವಿುಕರಿಗೆ ಸೌಲಭ್ಯಗಳು ಸಿಗುತ್ತಿಲ್ಲ. ಕಾರ್ವಿುಕರಿಗೆ ಇಂತಹ ಸೌಲಭ್ಯಗಳು ದೊರೆಯುತ್ತವೆ ಎನ್ನುವುದರ ಕುರಿತು ಯಾವುದೇ ಮಾಹಿತಿ ಪತ್ರಗಳು ಇಲ್ಲ.

ಕಚೇರಿ ಸ್ಥಳಾಂತರಿಸಿ:
ಅಂಬಾಭವಾನಿ ನಗರದ ಖಾಸಗಿ ಕಟ್ಟಡದಲ್ಲಿ ಕಾರ್ವಿುಕ ಇಲಾಖೆ ಕಚೇರಿ ಇದೆ. ಅದು ಮೂರನೇ ಮಹಡಿ ಮೇಲೆ ಇದ್ದು, ವಯಸ್ಸಾದ ಕಾರ್ವಿುಕರು ಮೇಲೆ ಹತ್ತಿಕೊಂಡು ಹೋಗಲು ಕಷ್ಟವಾಗುತ್ತಿದೆ. ಆದ್ದರಿಂದ ಕಾರ್ವಿುಕರಿಗೆ ಅನುಕೂಲವಾಗುವ ಕೆಳ ಭಾಗದಲ್ಲಿರುವ ಕಟ್ಟಡಕ್ಕೆ ಕಚೇರಿಯನ್ನು ಸ್ಥಳಾಂತರಿಸಬೇಕೆಂಬುದು ಕಾರ್ವಿುಕರ ಆಗ್ರಹವಾಗಿದೆ.

ಕಚೇರಿಯಲ್ಲಿ ಕಾರ್ವಿುಕ ನಿರೀಕ್ಷಕರು ಸಿಗುವುದಿಲ್ಲ. ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ. ಸೌಲಭ್ಯಕ್ಕಾಗಿ ಹತ್ತಾರು ಬಾರಿ ಕಚೇರಿಗೆ ಅಲೆದಾಡಬೇಕಾಗಿದೆ. ಕಚೇರಿಗೆ ಕಾಯಂ ನಿರೀಕ್ಷಕರನ್ನು ನೇಮಿಸಬೇಕು. ಪ್ರಾಮಾಣಿಕ ಕಾರ್ವಿುಕರಿಗೆ ಸರ್ಕಾರದ ಸೌಲಭ್ಯ ತಲುಪಬೇಕು. ಕಾರ್ವಿುಕರಿಗೆ ಗುರುತಿನ ಚೀಟಿ ಸಹ ಮಾಡಿಕೊಡುತ್ತಿಲ್ಲ. ಕಾರ್ವಿುಕರೆಲ್ಲರು ಸೇರಿ ಪ್ರತಿಭಟನೆ ನಡೆಸಿದ್ದರೂ ಸ್ಪಂದಿಸಿಲ್ಲ.
| ಗ್ಯಾನಪ್ಪ ಶೀರಿ, ಕಾರ್ವಿುಕರ ಸಂಘದ ಅಧ್ಯಕ್ಷ

ಕಾರ್ವಿುಕರಿಂದ ಬಂದಿರುವ ಅರ್ಜಿಗಳ ಪರಿಶೀಲನೆ ನಡೆಸುತ್ತೇವೆ. ಕೆಲವು ಮಂಜೂರು ಮಾಡಿದ್ದೇವೆ. ಇನ್ನು ಕೆಲವು ಬಾಕಿ ಉಳಿದಿವೆ. ಪುನಃ ಪರಿಶೀಲಿಸಿ ಒಂದು ವಾರದೊಳಗೆ ಕಾರ್ವಿುಕರಿಗೆ ಸಿಗಬೇಕಾದ ಸೌಲಭ್ಯ ನೀಡುತ್ತೇವೆ. ಸಿಬ್ಬಂದಿ ಕೊರತೆ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಕಾರ್ವಿುಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತದೆ.
| ಸುಧಾ ಗರಗ, ಕಾರ್ವಿುಕ ಅಧಿಕಾರಿ ಗದಗ

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...