ಚಿತ್ರದುರ್ಗ: ಹಿರಿಯ ನಾಗರಿಕರು, ಅಂಗವಿಕಲರಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ತಲುಪಿಸುವಲ್ಲಿ ನಿಸ್ವಾರ್ಥ ಸೇವೆ ಅತಿ ಮುಖ್ಯ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್ ಹೇಳಿದರು.
ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬಸವೇಶ್ವರ ವಿದ್ಯಾಸಂಸ್ಥೆಯಿಂದ ಹೊಂಬೆಳಕು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಆಯುಷ್ಮಾನ್ ವಯೋ ವಂದನ ಕಾರ್ಡ್ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕೆಇಬಿ ಎಸ್.ಷಣ್ಮುಖಪ್ಪ ಮಾತನಾಡಿ, ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ಎಲ್ಲ ಸವಲತ್ತುಗಳು ತಲುಪಬೇಕು. ಆ ನಿಟ್ಟಿನಲ್ಲಿ ನೋಂದಾಯಿತ ಸಂಸ್ಥೆಗಳು ಶ್ರಮಿಸಬೇಕು ಎಂದು ಸಲಹೆ ನೀಡಿದರು.
ನಿವೃತ್ತ ಪ್ರಾಚಾರ್ಯ ಗುರುಬಸವಯ್ಯ, ಬಸವೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷೆ ಪ್ರಭಾವತಿ ಶಂಕರಪ್ಪ, ವಿ.ಕೆ.ಶಂಕರಪ್ಪ, ಚಾರ್ಟೆಡ್ ಅಕೌಂಟೆಂಟ್ ಈ.ಚಂದ್ರಣ್ಣ ಇತರರಿದ್ದರು.