18 C
Bangalore
Friday, December 6, 2019

ನೀತಿ ಸಂಹಿತೆ ಪಾಲನೆಗೆ ಡಿಸಿ ಸೂಚನೆ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಬೆಂಗಳೂರು: ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣೆ ಸುಸೂತ್ರವಾಗಿ ನಡೆಸಲು ಜಿಲ್ಲೆಯಾದ್ಯಂತ ಸಕಲ ಭದ್ರತೆ ಒದಗಿಸಲಾಗುತ್ತಿದೆ.ರಾಜಕೀಯ ಪಕ್ಷಗಳ ಪ್ರತಿನಿಧಿಗಳು ನೀತಿ ಸಂಹಿತೆ ಪಾಲಿಸುವ ಮೂಲಕ ಶಾಂತಿಯುತ ಚುನಾವಣಾ ಪ್ರಕ್ರಿಯೆ ನಡೆಯಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮನವಿ ಮಾಡಿದರು.

ಉಪಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾಡಳಿತಭವನದ ಕಚೇರಿಯಲ್ಲಿ ಭಾನುವಾರ ಕರೆಯಲಾಗಿದ್ದ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ ಅನುಮತಿ ಇಲ್ಲದೇ ರಾಜಕೀಯ ಪಕ್ಷಗಳು ಕಾರ್ಯಕ್ರಮ ಮಾಡುವಂತಿಲ್ಲ. ರಾಜಕೀಯ ಪಕ್ಷಗಳು ಏರ್ಪಡಿಸುವ ಸಭೆ, ವೇದಿಕೆ ಕಾರ್ಯಕ್ರಮ, ರ‌್ಯಾಲಿ ಸೇರಿ ಯಾವುದೇ ಕಾರ್ಯಕ್ರಮಗಳಿಗೆ ಮೊದಲೆ ಮನವಿ ಸಲ್ಲಿಸಬೇಕು. ಅನುಮತಿ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. ಸಭೆ ನಡೆಸುವ ಸ್ಥಳ, ಧ್ವನಿವರ್ಧಕ ಬಳಕೆ ಬಗ್ಗೆ ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ಮೇರೆಗೆ ಅನುಮತಿ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಾದ್ಯಂಥ ಜಾರಿ: ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆದರೂ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಡಿಸಿ ಸ್ಪಷ್ಟಪಡಿಸಿದರು. ಕಾರ್ಯಕ್ರಮ ಅನುಮತಿ ಸಮಸ್ಯೆಗಳ ಪರಿಹಾರಕ್ಕೆ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಹೊಸಕೋಟೆಯಲ್ಲಿ ಏಕಗವಾಕ್ಷಿ ವ್ಯವಸ್ಥೆ ಇರಲಿದ್ದು, ಇನ್ನುಳಿದ ಮೂರು ತಾಲೂಕುಗಳಲ್ಲಿನ ಕಾರ್ಯಕ್ರಮಗಳಿಗೆ ಅನುಮತಿ ಪಡೆಯಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲ ಇಲಾಖೆಗಳನ್ನೊಳಗೊಂಡ ಒಂದು ಏಕಗವಾಕ್ಷಿ ವ್ಯವಸ್ಥೆ ತೆರೆಯಲಾಗುತ್ತಿದೆ ಎಂದರು.

ಮಿನಿವಿಧಾನಸೌಧದಲ್ಲಿ ಪ್ರಕ್ರಿಯೆ: ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಜಿಲ್ಲಾ ಚುನಾವಣಾಧಿಕಾರಿ ಆಗಿದ್ದು, ಹೊಸಕೋಟೆ ತಹಸೀಲ್ದಾರ್ ಸಹಾಯಕ ಚುನಾವಣಾಧಿಕಾರಿಯಾಗಿರುತ್ತಾರೆ. ಹೊಸಕೋಟೆ ಮಿನಿ ವಿಧಾನಸೌಧ ಕಟ್ಟಡದಲ್ಲಿರುವ ತಾಲೂಕು ಕಚೇರಿ ಜಿಲ್ಲಾ ಚುನಾವಣಾಧಿಕಾರಿ ಅವರ ಕೇಂದ್ರ ಕಚೇರಿ ಕಾರ್ಯ ಸ್ಥಳವಾಗಿದೆ. ನಾಮಪತ್ರ ಇತ್ಯಾದಿ ಪ್ರಕ್ರಿಯೆಗಳು ಮಿನಿ ವಿಧಾನಸೌಧದ ಕಟ್ಟಡದಲ್ಲಿ ನಡೆಯಲಿದೆ ಎಂದರು.

ಇವಿಎಂ ಬಳಕೆ:  ಈಗಾಗಲೇ ಪ್ರಕಟಿಸಲಾಗಿರುವ ಮತದಾರರ ಪಟ್ಟಿ ಆಧಾರದ ಮೇಲೆ ಉಪ ಚುನಾವಣೆ ನಡೆಯಲಿದ್ದು, ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 212748 ಮತದಾರರಿದ್ದಾರೆ. ಅದರಲ್ಲಿ 107766 ಪುರುಷ, 104956 ಮಹಿಳೆ ಹಾಗೂ 26 ಇತರೆ ಮತದಾರರಿದ್ದಾರೆ. ಬಿ.ಇ.ಎಲ್ ಸಂಸ್ಥೆಯ ಎಂ3 ಮಾದರಿ ಇ.ವಿ.ಎಂ ಗಳ ಮೂಲಕ ಚುನಾವಣಾ ಪ್ರಕ್ರಿಯೆ ಪೂರೈಸಲಾಗುವುದು.

ಹೊಸಕೋಟೆ ತಾಲೂಕಿನಲ್ಲಿ 286 ಮತಗಟ್ಟೆ ಸ್ಥಾಪಿಸಲಾಗಿದೆ. ಅದರಲ್ಲಿ ಗ್ರಾಮಾಂತರ ವ್ಯಾಪ್ತಿಯಲ್ಲಿ 237 ಮತಗಟ್ಟೆ , ಪಟ್ಟಣ ವ್ಯಾಪ್ತಿಯಲ್ಲಿ 49 ಮತಗಟ್ಟೆಗಳಿವೆ.ಒಟ್ಟು 286 ಮತಗಟ್ಟೆಗಳಲ್ಲಿ 85 ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ, ಮತಗಟ್ಟೆಗಳಲ್ಲಿನ ಮೂಲ ಸೌಕರ್ಯಗಳ ಪರಿಶೀಲನೆಗೆ ಅಧಿಕಾರಿಗಳನ್ನು ನೇಮಿಸಲಾಗಿದೆ. ವಿಕಲಚೇತನ ಮತದಾರರನ್ನು ಮತಗಟ್ಟೆಗೆ ಕರೆ ತರಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು. ಉಪ ಚುನಾವಣೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ, ದೂರವಾಣಿ ಸಂಖ್ಯೆ1950 ಗೆ ಉಚಿತ ಕರೆ ಮಾಡಬಹುದು ಎಂದು ಡಿಸಿ ತಿಳಿಸಿದರು.

ಜಿಲ್ಲೆಯ ಉಪ್ಪಾರಹಳ್ಳಿ, ಗಡಿಗೇನಹಳ್ಳಿ, ಬಾಗೂರು, ಬೆಂಡಿಗಾನಹಳ್ಳಿ ಹಾಗೂ ಇಂಟಿಗಾನಹಳ್ಳಿ ಕ್ರಾಸ್‌ನಲ್ಲಿ 5 ಚೆಕ್‌ಪೋಸ್ಟ್‌ಗಳಿದ್ದು, ಶೀಘ್ರದಲ್ಲಿ 5 ಡೈನಾಮಿಕ್ ಚೆಕ್‌ಪೋಸ್ಟ್ ಸ್ಥಾಫಿಸಿ ಪ್ಲೈಯಿಂಗ್ ಸ್ಕ್ವಾಡ್‌ಗಳನ್ನು ನೇಮಿಸಲಾಗುವುದು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರವಿ.ಡಿ.ಚೆನ್ನಣ್ಣನವರ್ ಹೇಳಿದರು. ಮುಂಜಾಗ್ರತೆಯಾಗಿ ಜಿಲ್ಲೆಯಲ್ಲಿ 1999 ರೌಡಿಶೀಟರ್ ಪರೇಡ್ ನಡೆಸಲಾಗುವುದು, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯವುದು ಸೇರಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆ ಕೇಂದ್ರಗಳಲ್ಲಿ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್, ಜಿಪಂ ಉಪಕಾರ್ಯದರ್ಶಿ ಕರಿಯಪ್ಪ,
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಹನುಮಂತರಾಯಪ್ಪ, ಉಪವಿಭಾಗಾಧಿಕಾರಿ ಮಂಜುನಾಥ್ ಮತ್ತಿತರರಿದ್ದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...