25.3 C
Bangalore
Friday, December 13, 2019

ನೀರಾವರಿ ಯೋಜನೆ ಘೊಷಣೆಗೆ ಬಿಜೆಪಿ ಶ್ರಮ

Latest News

ಸಾಲಿಗ್ರಾಮದಲ್ಲಿ ಕೋಮು ಗಲಾಟೆ ಸಂಬಂಧ ಮಾಜಿ ಸಚಿವ ಸಾ.ರಾ.ಮಹೇಶ್​ ಸಹೋದರನ ವಿರುದ್ಧ ಎಫ್​ಐಆರ್​

ಮೈಸೂರು: ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದಲ್ಲಿ ನಡೆದ ಕೋಮು ಗಲಾಟೆ ಸಂಬಂಧ ಮಾಜಿ ಸಚಿವ ಸಾ.ರಾ.ಮಹೇಶ್​ ಅವರ ಸಹೋದರ ಸಾ.ರಾ.ರಘು ಅವರ ಮೇಲೆ ಎಫ್​ಐಆರ್​...

ಪೌರತ್ವ ತಿದ್ದುಪಡಿ ಮಸೂದೆ ಸಿಂಧುತ್ವ ಪ್ರಶ್ನಿಸಿ ತ್ವರಿತ ವಿಚಾರಣೆಗೆ ಅರ್ಜಿ ಸಲ್ಲಿಸಿದ್ದ ಟಿಎಂಸಿ ಸಂಸದೆಗೆ ಸುಪ್ರೀಂಕೋರ್ಟ್​ನಲ್ಲಿ ಹಿನ್ನೆಡೆ!

ನವದೆಹಲಿ: ಕೇಂದ್ರ ಸರ್ಕಾರ ಗುರುವಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಮಸೂದೆಯ ಸಿಂಧುತ್ವವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್​ ಪಕ್ಷದ ಸಂಸದೆ ಮೋಹುವಾ ಮೊಯಿತ್ರಾ...

ಜೀತ ವಿಮುಕ್ತರಿಗೆ ಬಂಧಮುಕ್ತ ಪ್ರಮಾಣಪತ್ರ ವಿತರಿಸಿದ ಎಸಿ ನವೀನ್ ಭಟ್

ಹೊಳೆನರಸೀಪುರ: ಪಟ್ಟಣದ ತಾಲೂಕು ಕಚೇರಿಯಲ್ಲಿ ಗುರುವಾರ ಸಂಜೆ ಜೀತ ಮುಕ್ತ ಗೊಳಿಸಿದ 6 ಜನರಿಗೆ ಬಂಧಮುಕ್ತ ಪ್ರಮಾಣ ಪತ್ರವನ್ನು ಉಪ ವಿಭಾಗಾಧಿಕಾರಿ ನವೀನ್ ಭಟ್ ವಿತರಿಸಿದರು. ನಂತರ...

ಹಾಸನದವರಷ್ಟು ಬುದ್ಧಿ ನನಗೆ ಕೊಡಪ್ಪ ಅಂತ ದೇವರಲ್ಲಿ ಕೇಳುತ್ತೇನೆ ಅಂದ್ರು ಸಚಿವ ಜೆ.ಸಿ.ಮಾಧುಸ್ವಾಮಿ

ಚನ್ನರಾಯಪಟ್ಟಣ: ತಾಲೂಕಿನ ಏತನೀರಾವರಿ ಯೋಜನೆಯಲ್ಲಿ ಜಮೀನು ಕಳೆದುಕೊಂಡಿರುವವರ ಪರಿಹಾರಕ್ಕೆ ಸುಮಾರು 200 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಹೇಳಿದರು. ತಾಲೂಕಿನ...

ಪತ್ನಿಗೆ ಈರುಳ್ಳಿ ಕಿವಿಯೋಲೆ ತಂದುಕೊಟ್ಟ ಪ್ರಖ್ಯಾತ ನಟನ್ಯಾರು: ಕಾಮಿಡಿಯಾದ್ರೂ ಇದರಲ್ಲಿದೆ ಮನಮುಟ್ಟುವ ಸಂದೇಶ!

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಪತ್ನಿ ಟ್ವಿಂಕಲ್​ ಖನ್ನಾ ದೇಶದಲ್ಲಿ ಏನೇ ಬೆಳವಣಿಗೆಯಾದರೂ ಜಾಲತಾಣದಲ್ಲಿ ಪ್ರತಿಕ್ರಿಯೆ...

ಶಿವಮೊಗ್ಗ: ರಾಜ್ಯ ಸರ್ಕಾರ ಬಜೆಟ್​ನಲ್ಲಿ ತಾಲೂಕಿನ ವಿವಿಧ ನೀರಾವರಿ ಯೋಜನೆ ಘೊಷಣೆ ಮಾಡುವಲ್ಲಿ ಬಿಜೆಪಿ ಮುಖಂಡರ ಶ್ರಮವಿದೆ ಎಂದು ಶಿವಮೊಗ್ಗ ತಾಲೂಕು ಬಿಜೆಪಿ ಅಧ್ಯಕ್ಷ ಜಿ.ಇ.ವಿರುಪಾಕ್ಷಪ್ಪ ತಿಳಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ, ಎಸ್.ರುದ್ರೇಗೌಡ, ಅಶೋಕ ನಾಯ್ಕ ಮುಂತಾದವರು ಸರ್ಕಾರದ ಮಟ್ಟದಲ್ಲಿ ಸಾಕಷ್ಟು ಒತ್ತಡ ಹಾಕಿದ ಪರಿಣಾಮ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಹರಕೆರೆಯಿಂದ ಕುಂಸಿ, ಮಲೇಶಂಕರ, ತಮ್ಮಡಿಹಳ್ಳಿ ಮುಂತಾದ ಗ್ರಾಮಗಳ ಕೆರೆ ತುಂಬಿಸುವ ಯೋಜನೆಗೆ ಈಗಾಗಲೆ 250 ಕೋಟಿ ರೂ. ಮೀಸಲಿರಿಸಿರುವುದರಿಂದ ಯೋಜನೆ ಅನುಷ್ಠಾನಕ್ಕೆ ಟೆಂಡರ್ ಪ್ರಕ್ರಿಯೆ ಮಾತ್ರ ಬಾಕಿ ಉಳಿದಿದೆ. ಹೊಳೆಹನಸವಾಡಿಯಿಂದ 13 ಕೋಟಿ ರೂ. ವೆಚ್ಚದಲ್ಲಿ 8 ಕೆರೆ ತುಂಬಿಸುವ ಯೋಜನೆಯ ಘೊಷಣೆಯೂ ಆಗಿದೆ ಎಂದರು.

ಅಶೋಕ ನಾಯ್್ಕ ಶಾಸಕರಾದ ಬಳಿಕ ಕ್ಷೇತ್ರದಲ್ಲಿ ಅನೇಕ ಯೋಜನೆಗಳು ಜಾರಿಯಾಗಿವೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ನಾವು ಆಸಕ್ತಿ ವಹಿಸಿದ್ದೇವೆ ಎಂದು ಹೇಳಿದರು.

ಶಾಸಕ ಅಶೋಕ ನಾಯ್್ಕ ಮಾತನಾಡಿ, ಗೌಡನಕೆರೆಗೆ ನೀರು ತುಂಬಿಸುವ ಸಂದರ್ಭದಲ್ಲಿ ಆ ಭಾಗದ ಕೆರೆಗಳ ಹೂಳು ತೆಗೆದು ನಾಲೆಗಳನ್ನು ಸ್ವಚ್ಛಗೊಳಿಸುವಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ ಹೆಚ್ಚಿನ ಸಹಕಾರ ನೀಡಿದ್ದರು. ಹಲವು ವರ್ಷದಿಂದ ಶಿವಮೊಗ್ಗ ತಾಲೂಕಿನ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಬಿಜೆಪಿ ಪ್ರಮುಖರು ಸಾಕಷ್ಟು ಕೆಲಸ ಮಾಡಿದ್ದಾರೆ ಎಂದರು.

ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ.ಕಾಂತೇಶ್, ಜಿಪಂ ಸದಸ್ಯೆ ಸೌಮ್ಯಾ ಭೋಜ್ಯಾನಾಯ್ಕ, ವೀರಭದ್ರಪ್ಪ ಪೂಜಾರ್, ತಮ್ಮಡಿಹಳ್ಳಿ ನಾಗರಾಜ್, ತಾಪಂ ಸದಸ್ಯ ಕೃಷ್ಣಮೂರ್ತಿ ಇದ್ದರು.

ಪರೋಕ್ಷ ವಾಗ್ದಾಳಿ:ಬೂದಗೆರೆ ಏತ ನೀರಾವರಿ ಯೋಜನೆ ಏನಾಗಿದೆ ಎಂಬ ಬಗ್ಗೆ ಎಲ್ಲರಿಗೂ ಗೊತ್ತಿದೆ ಎನ್ನುವ ಮೂಲಕ ಯೋಜನೆಯ ವೈಫಲ್ಯ ವಿವರಿಸುವ ಜತೆಗೆ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ ವಿರುದ್ಧ ಶಾಸಕ ಅಶೋಕ ನಾಯ್ಕ ಪರೋಕ್ಷ ವಾಗ್ದಾಳಿ ನಡೆಸಿದರು. ಬಜೆಟ್​ನಲ್ಲಿ ನೀರಾವರಿ ಯೋಜನೆಗಳ ಘೊಷಣೆ ಹಿಂದೆ ಮಾಜಿ ಶಾಸಕರ ಶ್ರಮವಿಲ್ಲವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಶಾಸಕರಿಗೆ ಈ ಯೋಜನೆಗಳ ಬಗ್ಗೆ ಆಸಕ್ತಿಯಿದ್ದರೆ ಈ ಹಿಂದೆ ಏಕೆ ಇವುಗಳ ಬಗ್ಗೆ ಪ್ರಸ್ತಾಪಿಸಿಲ್ಲ ಎಂದು ಮರು ಪ್ರಶ್ನಿಸಿದರು. ಬೂದಗೆರೆ ಏತ ನೀರಾವರಿ ಯೋಜನೆಯ ವೈಫಲ್ಯಕ್ಕೆ ಕಾರಣಗಳೇನು? ಇದರ ಕರ್ಮ ಹಾಗೂ ಮರ್ಮವೇನು? ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ವಿಸ್ತಾರವಾಗಿ ಸಾರ್ವಜನಿಕರಿಗೆ ತಿಳಿಸುತ್ತೇನೆ ಎಂದು ಅಶೋಕ ನಾಯ್ಕ ಹೇಳಿದರು.

Stay connected

278,747FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...