20.3 C
Bangalore
Sunday, December 15, 2019

ನೀರಿಗಾಗಿ ಭುಗಿಲೆದ್ದ ಆಕ್ರೋಶ

Latest News

ವಿಶ್ವಸುಂದರಿ ವಿಜೇತೆಗೆ ಕೊನೆಯ ಪ್ರಶ್ನೋತ್ತರ ಸುತ್ತಿನಲ್ಲಿ ಕೇಳಿದ ಪ್ರಶ್ನೆಗಾಳವುವು? ಜಮೈಕಾ ಬ್ಯೂಟಿಯ ಉತ್ತರ ಹೇಗಿತ್ತು?

ಲಂಡನ್​: 2019ನೇ ಸಾಲಿನ ವಿಶ್ವಸುಂದರಿ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತೆಯಾಗುವ ಮೂಲಕ ಜಮೈಕಾದ ಟೋನಿ ಅನ್​ ಸಿಂಗ್​ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸ್ಪರ್ಧೆಯ ಕೊನೆಯ ಪ್ರಶ್ನೋತ್ತರ...

ಶಿವಸೇನೆ ಕೈಯಲ್ಲಿರುವ ಗೃಹ ಇಲಾಖೆ ಮೇಲೆ ಎನ್​ಸಿಪಿ ಕಣ್ಣು; ಅಜಿತ್​ ಪವಾರ್​ಗೆ ಜವಾಬ್ದಾರಿ ವಹಿಸುವ ಪ್ರಯತ್ನ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್​ ನೇತೃತ್ವದ ಸರ್ಕಾರ ರಚನೆಯಾಗಿದ್ದರೂ ಇನ್ನು ಸಚಿವ ಸಂಪುಟ ರಚನೆಯಾಗಿಲ್ಲ. ಸದ್ಯ ಯಾವ ಪಕ್ಷಗಳಿಗೆ ಯಾವ ಖಾತೆ ಎಂಬುದನ್ನು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ...

ಸ್ಮಾರಕದ ಮೇಲೆ ಕುಳಿತ ಪಾರಿವಾಳದಲ್ಲಿ ನೆಚ್ಚಿನ ನಟ ದಿ.ಅಂಬರೀಶ್​ ಅವರನ್ನು ಕಂಡ ಅಭಿಮಾನಿಗಳು

ಮಂಡ್ಯ: ರೆಬಲ್​ಸ್ಟಾರ್​ ದಿ.ಅಂಬರೀಶ್​ ಅವರ ಸ್ಮಾರಕವನ್ನು ಯಲಿಯೂರು ಗ್ರಾಮದಲ್ಲಿ ಪುತ್ರ ಅಭಿಷೇಕ್​ ಅಂಬರೀಶ್​ ಲೋಕಾರ್ಪಣೆ ಮಾಡಿದರು. ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದಲ್ಲಿ ಅಭಿಮಾನಿಗಳು ದಿ....

ವಾಣಿಜ್ಯ ಬಾಂಕ್​ಗಳ ನಿಯಮಗಳನ್ನು ಬ್ಯಾಂಕೇತರ ಹಣಕಾಸು ಸಂಸ್ಥೆ, ಸಹಕಾರಿ ಬ್ಯಾಂಕ್​​ಗಳಿಗೂ ವಿಸ್ತರಿಸಲು ಆರ್​ಬಿಐ ಚಿಂತನೆ

ನವದೆಹಲಿ: ವಾಣಿಜ್ಯ ಬಾಂಕ್​ಗಳಲ್ಲಿ ಅಳವಡಿಸಲಾಗಿರುವ ಜಾರಿ ನೀತಿ ಮತ್ತು ಚೌಕಟ್ಟನ್ನು ಬ್ಯಾಂಕೇತರ ಹಣಕಾಸು ಸಂಸ್ಥೆ(ಎನ್​ಬಿಎಫ್​ಸಿ) ಮತ್ತು ಸಹಕಾರಿ ಬ್ಯಾಂಕ್​​ಗಳಿಗೂ ವಿಸ್ತರಿಸಲು ಭಾರತೀಯ ರಿಸರ್ವ್​...

ಕಬ್ಬುಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಮಾತುಕತೆ ವಿಫಲ: ಮಂಗಳವಾರದಿಂದ ಕಾರ್ಖಾನೆಗೆ ಕಬ್ಬು ಪೂರೈಕೆ ಬಂದ್​

ಬಾಗಲಕೋಟೆ: ಕಬ್ಬು ಕಟಾವು ಹಾಗೂ ಸಾಗಣಿಕೆ ವೆಚ್ಚ ಪಾವತಿ ಮಾಡಲು ಜಿಲ್ಲೆಯ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಮಂಗಳವಾರದಿಂದ ಸಕ್ಕರೆ...

ಗಜೇಂದ್ರಗಡ: ಸಮರ್ಪಕವಾಗಿ ನೀರು ಪೂರೈಸಲು ಕ್ರಮ ಕೈಗೊಳ್ಳದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಹಾಗೂ ಅಧಿಕಾರಿಗಳನ್ನು ಗ್ರಾಪಂ ಕಚೇರಿಯಲ್ಲಿ ಕೂಡಿ ಹಾಕಿ ತಾಲೂಕಿನ ಲಕ್ಕಲಕಟ್ಟಿ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರು ಟೈರ್​ಗೆ ಬೆಂಕಿ ಹಚ್ಚಿದ ಗ್ರಾಮಸ್ಥರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ಎರಡು ವರ್ಷಗಳಿಂದ ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದೇವೆ. ತಾಲೂಕು ಆಡಳಿತ ಕೆಲ ತಿಂಗಳ ಹಿಂದೆ ಟ್ಯಾಂಕರ್ ಮೂಲಕ ನೀರು ಪೂರೈಸಿ ತಾತ್ಕಾಲಿಕವಾಗಿ ಸಮಸ್ಯೆ ಪರಿಹರಿಸಿತ್ತು. ಆದರೆ, ಟ್ಯಾಂಕರ್ ಬಾಡಿಗೆ ಹಣ ಪಾವತಿಸದ ಕಾರಣ ಟ್ಯಾಂಕರ್ ಚಾಲಕರು ನೀರು ಪೂರೈಸುವುದನ್ನೇ ನಿಲ್ಲಿಸಿದ್ದಾರೆ. ಹೀಗಾಗಿ, ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಈ ಬಗೆಗೆ ಸೂಕ್ತ ಕ್ರಮ ಕೈಗೊಳ್ಳದ ಕಾರಣ ಅನಿವಾರ್ಯವಾಗಿ ಗ್ರಾಪಂ ಅಧ್ಯಕ್ಷ, ಸದಸ್ಯರು ಹಾಗೂ ಅಧಿಕಾರಿಗಳನ್ನು ಕೂಡಿ ಹಾಕಿ ಪ್ರತಿಭಟನೆ ನಡೆಸಿದ್ದೇವೆ’ ಎಂದು ಗ್ರಾಮಸ್ಥರು ದೂರಿದರು.

ಅಲ್ಲದೆ, ಸಮಸ್ಯೆಗಳ ಕುರಿತು ಅಹವಾಲು ಹೊತ್ತು ಗ್ರಾಮ ಪಂಚಾಯಿತಿಗೆ ಹೋದರೆ ಗ್ರಾಮ ಪಂಚಾಯಿತಿ ಸದಸ್ಯೆಯರ ಗಂಡಂದಿರು ಉಡಾಫೆ ಉತ್ತರ ನೀಡುತ್ತಾರೆ. ಪಂಚಾಯಿತಿಯ ಆಡಳಿತವನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನಾ ಸ್ಥಳಕ್ಕಾಗಮಿಸಿದ ರೋಣ ಸಿಪಿಐ ಕೆ.ಸಿ. ಪ್ರಕಾಶ ಹಾಗೂ ಗಜೇಂದ್ರಗಡ ಪಿ.ಎಸ್.ಐ ಆರ್.ವೈ. ಜಲಗೇರಿ ಅವರು, ‘ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯೊಂದಿಗೆ ರ್ಚಚಿಸಿ ಪರಿಹಾರ ಕಂಡುಕೊಳ್ಳೋಣ’ ಎಂದು ಸಲಹೆ ನೀಡಿದರೂ ಸುಮ್ಮನಾಗದ ಪ್ರತಿಭಟನಾಕಾರರು, ‘ಜಿಲ್ಲಾಧಿಕಾರಿಯವರು ಗ್ರಾಮಕ್ಕೆ ಬಂದು ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ’ ಎಂದು ಪಟ್ಟು ಹಿಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಲಿಂಗಯ್ಯ ಮಾಲಗಿತ್ತಿ, ಸದಸ್ಯರಾದ ನಾಗೇಶ ಭಗವತಿ, ದೇವಿಂದ್ರಪ್ಪ ಕಮ್ಮಾರ, ಕಳಕಪ್ಪ ಕೊಪ್ಪಳದ, ಪಿಡಿಒ ಫಕ್ರುದ್ದಿನ್ ನದಾಫ್, ಕಾರ್ಯದರ್ಶಿ ಬಾಲಚಂದ್ರ ನೇವಾರ, ಬಿಲ್ ಕಲೆಕ್ಟರ್ ಮಹೇಶ ಭಗವತಿ, ವಾಟರ್ ಮನ್ ಬಸವಂತಪ್ಪ ಗಂಜಿಹಾಳ ಅವರನ್ನು ಗ್ರಾಮಸ್ಥರು ಪಂಚಾಯಿತಿಯಲ್ಲಿ ಕೂಡಿ ಹಾಕಿದ್ದರು.

ಅಲೆಬಸಪ್ಪ ಬೆನಕನವಾರಿ, ಶರಣಪ್ಪ ಹೂಗಾರ, ಮಲ್ಲಯ್ಯ ಮಚಕಂಡಿ, ರೇಣುಕಾಂತ ಪೂಜಾರ, ಮಲ್ಲು ಮಾರನಬಸರಿ, ಹನುಮಂತ ರಾಠೋಡ, ಶರಣಪ್ಪ ಹೊಸಳ್ಳಿ, ಮುತ್ತು ಚವ್ಹಾಣ ಇತರರು ಪ್ರತಿಭಟನೆ ವೇಳೆ ಇದ್ದರು.

ಟ್ಯಾಂಕರ್ ನೀರು ಪೂರೈಕೆ ಭರವಸೆ: ರೋಣ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಎಂ.ವಿ. ಚಳಗೇರಿ ಸ್ಥಳಕ್ಕಾಗಮಿಸಿ ಪ್ರತಿಭಟನಾಕಾರರ ಅಹವಾಲು ಆಲಿಸಿದರು. ಬಳಿಕ, ‘ತಕ್ಷಣದಿಂದಲೇ ಗ್ರಾಮದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತದೆ. ಅಲ್ಲದೆ, 4 ದಿನಗಳಲ್ಲಿ ಗ್ರಾಮದಲ್ಲಿ ಸಮರ್ಪಕ ನೀರು ಪೂರೈಸಲು ಶಾಶ್ವತ ಪರಿಹಾರ ಕಂಡುಕೊಳ್ಳಲಾಗುತ್ತದೆ’ ಎಂದು ಭರವಸೆ ನೀಡಿದರು. ನಂತರ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...