ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

blank
blank

ಬೋರಗಾಂವ: ಪ್ರಸ್ತುತ ಬಿಸಿಲಿನ ತೀವ್ರತೆ ಹೆಚ್ಚುತ್ತಿದೆ. ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗಬಹುದು. ಇದಕ್ಕಾಗಿ ಮುಖ್ಯಾಧಿಕಾರಿ ಸೇರಿದಂತೆ ಎಲ್ಲ ಸಿಬ್ಬಂದಿ ಪ್ರತಿ ವಾರ್ಡ್ಗೆ ಹೋಗಿ ಬೋರ್‌ವೆಲ್‌ಗಳು ಮತ್ತು ನದಿ ಪೈಪ್‌ಲೈನ್‌ಗಳ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಪ್ರದೀಪ ಮಾಳಿ ಸೂಚಿಸಿದರು.

ಪಟ್ಟಣದ ಪಪಂ ಕಚೇರಿಯಲ್ಲಿ ಅಧ್ಯಕ್ಷ ಪಿಂಟು ಕಾಂಬಳೆ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪಪಂ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ವಾರ್ಡ್ನಲ್ಲಿ ನೀರಿನ ಸಮಸ್ಯೆ ಇರಬಾರದು. ಮೂಲ ಸೌಲಭ್ಯಗಳಿಗೆ ಆದ್ಯತೆ ನೀಡುವ ಮೂಲಕ ನಾಗರಿಕರಿಗೆ ಸಹಕರಿಸಬೇಕು ಎಂದರು.

ಸದಸ್ಯ ಅಭಯಕುಮಾರ ಮಗದುಮ ಮಾತನಾಡಿ, ಮಹಾವೀರ ವೃತ್ತವನ್ನು ನಿರ್ಬಂಧಿತ ವಲಯವನ್ನಾಗಿ ಮಾಡಿ ಸುಗಮ ವಾಹನ ಸಂಚಾರಕ್ಕೆ ಪ್ರಯತ್ನಿಸಲಾಗುವುದು. ಪ್ರವಾಸಿ ಮಂದಿರದಿಂದ ಸದಲಗಾ ರಸ್ತೆಯವರೆಗೆ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಶೀಘ್ರದಲ್ಲೇ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದರು.

ಸದಸ್ಯ ಶರದ ಜಂಗಟೆ ಮಾತನಾಡಿ, ವೃತ್ತದಲ್ಲಿ ಅನೇಕ ಬಡ ಕುಟುಂಬಗಳು ಭಜಿ, ಚಹಾ ಮಾರಾಟ ಮಾಡುವ ಮೂಲಕ ಜೀವನ ಸಾಗಿಸುತಿದ್ದಾರೆ. ಹೊಸ ವ್ಯಾಪಾರ ಮಳಿಗೆಗಳನ್ನು ನಿರ್ಮಿಸಿದರೆ ಅವರಿಗೆ ಮೊದಲು ಆದ್ಯತೆ ನೀಡಿ. ಸರ್ವೇ ಸಂಖ್ಯೆ ೭೨೯ ರಲ್ಲಿ ಹತ್ತು ಎಕರೆ ಭೂಮಿಯಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲು ಯಾವುದೇ ಅಭ್ಯಂತರವಿಲ್ಲ ಎಂದರು.

ಜಾವೇದ ಮಕಾಂದರ್ ಮಾತನಾಡಿ, ಆರ್.ಕೆ.ಯಲ್ಲಿ ಪದೆ ಪದೇ ನೀರಿನ ಸಮಸ್ಯೆ ಉಂಟಾಗುತ್ತಿದೆ. ನೀರಿನ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಅವರು ಒತ್ತಾಯಿಸಿದರು.

ಉಪಾಧ್ಯಕ್ಷೆ ಭಾರತಿ ವಸವಾಡೆ, ಪ್ರಥಮ ದರ್ಜೆ ಸಹಾಯಕ ರಾಹುಲ್ ಗುಡಯಿನಕರ್, ದ್ವಿತೀಯ ದರ್ಜೆ ಸಹಾಯಕ ಪೋಪಟ ಕುರಳೆ, ಕಂದಾಯ ನಿರೀಕ್ಷಕ ಸಂದೀಪ ವಾಯಿಂಗಡೆ, ವಿಜಯ ಚೌಗುಲಾ, ಜೈಪಾಲ್ ನೇಜೆ, ಗಜಲ ಜಮಾಲಾ ಇತರರು ಇದ್ದರು. ಮುಖ್ಯ ಅಽಕಾರಿ ಎಸ್.ಬಿ.ತೋಡ್ಕರ್ ಸ್ವಾಗತಿಸಿದರು.

Share This Article

ನೀರು, ಸೋಪು ಇಲ್ಲದೆ ಕೊಳಕಾದ ಸ್ವಿಚ್‌ಬೋರ್ಡ್‌ನ್ನು ಹೊಸದರಂತೆ ಮಾಡಲು ಇಲ್ಲಿದೆ ಸೂಪರ್‌ ಟಿಪ್ಸ್‌ | Switchboard

Switchboard: ಸಾಮಾನ್ಯವಾಗಿ ಮನೆಗಳಲ್ಲಿರುವ ವಿದ್ಯುತ್ ಸ್ವಿಚ್‌ಬೋರ್ಡ್‌ಗಳು ದಿನ ಕಳೆದಂತೆ ಕೊಳಕಾಗುತ್ತದೆ. ವಿಶೇಷವಾಗಿ ಅಡುಗೆಮನೆಯಲ್ಲಿರುವ ಸ್ವಿಚ್‌ಬೋರ್ಡ್‌ಗಳು ಬಹಳ…

ಈ ಆಹಾರಗಳ ಅತಿಯಾದ ಸೇವನೆಯಿಂದ ಕಿಡ್ನಿ ಸ್ಟೋನ್‌ ಉಂಟಾಗಬಹುದು: ತಜ್ಞರ ಎಚ್ಚರಿಕೆ..! Health Tips

Health Tips: ಮೂತ್ರಪಿಂಡದಲ್ಲಿ ಕಲ್ಲುಗಳಿದ್ದರೆ ಸೊಂಟ, ಹೊಟ್ಟೆ ಮತ್ತು ಬೆನ್ನಿನಲ್ಲಿ ತೀವ್ರವಾದ ನೋವು ಉಂಟಾಗುತ್ತದೆ. ಈ…