ಬೈಲಕುಪ್ಪೆ: ಮುಂದಿನ ಪೀಳಿಗೆಗೆ ಸತ್ವಯುತ ಮಣ್ಣು ಹಾಗೂ ಕುಡಿಯಲು ಯೋಗ್ಯವಾದ ನೀರು ಉಳಿಸಲು ಎಲ್ಲರೂ ಕೈಜೋಡಿಸಬೇಕಿದೆ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ಕೆ. ವೆಂಕಟೇಶ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ವತಿಯಿಂದ ಪಿರಿಯಾಪಟ್ಟಣ ತಾಲೂಕಿನ ಹುಣಸವಾಡಿ ಪ್ರೌಢಶಾಲೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ 2.0 ಜಲಾನಯನ ಯಾತ್ರೆ ಕಾರ್ಯಕ್ರಮ-2025ಕ್ಕೆ ಚಾಲನೆ ನೀಡಿ ಮಾತನಾಡಿದರು.
ಜನಸಂಖ್ಯೆ ಹೆಚ್ಚಾದಂತೆಲ್ಲ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಈಗಾಗಲೇ ಕುಡಿಯುವ ನೀರನ್ನು ಹಣ ಕೊಟ್ಟು ಬಳಸುತ್ತಿದ್ದೇವೆ. ಭವಿಷ್ಯದಲ್ಲಿ ನೀರಿನ ಅಭಾವ ಉಂಟಾಗದಂತೆ ನೀರಿನ ಮೂಲಗಳನ್ನು ಸಂರಕ್ಷಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನೀರಿಗಾಗಿಯೇ ಯುದ್ಧ ಮಾಡುವ ಪರಿಸ್ಥಿತಿ ಎದುರಾಗುತ್ತದೆ ಎಂದರು.
ಕೃಷಿ ಇಲಾಖೆ ಉಪ ನಿರ್ದೇಶಕ ಕೆ.ರಾಜು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ.ವೈ.ಪ್ರಸಾದ್ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಹಿಳೆಯರು ಹಾಗೂ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಹುಣಸವಾಡಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಪಿ.ಆರ್.ಮಂಜುನಾಥ್, ಅಧ್ಯಕ್ಷ ಲೋಕೇಶ್, ಸದಸ್ಯರಾದ ಲಕ್ಷ್ಮಮ್ಮ, ಶಾಂತೇಗೌಡ, ಸುಬ್ರಮಣ್ಯ, ಶಶಿಕುಮಾರ್, ಶಂಕರನಾರಾಯಣ, ಕೃಷಿ ಇಲಾಖೆ ಅಧಿಕಾರಿಗಳಾದ ಹಿತೇಶ್, ಮಹೇಶ್, ಪ್ರವೀಣ್, ನವ್ಯಾ ನಾಣಯ್ಯ, ಆತ್ಮ ಯೋಜನೆ ಸಿಬ್ಬಂದಿ ಸತೀಶ್, ದಿವಾಕರ್, ಆನಂದ್, ಮುಖಂಡರಾದ ಹುಣಸವಾಡಿ ಹರೀಶ್, ದೇವೇಗೌಡ, ಎಚ್.ಎಂ.ಗೋವಿಂದೇಗೌಡ, ಕೀರ್ತಿಕುಮಾರ್, ನಿಂಗೇಗೌಡ, ರಾಜಣ್ಣ, ಕೃಷ್ಣ ಇತರರು ಇದ್ದರು.