Monday, 19th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ನೆಮ್ಮದಿ ಬದುಕಿಗೆ ಆಧ್ಯಾತ್ಮಿಕ ಚಿಂತನೆ

Thursday, 12.07.2018, 3:00 AM       No Comments

ತುರುವೇಕೆರೆ : ಆಧ್ಯಾತ್ಮಿಕ ಶಕ್ತಿಯ ಪ್ರಚುರದಿಂದ ಜನರಿಗೆ ದೇವರ ಮೇಲಿನ ಭಕ್ತಿ ಹೆಚ್ಚುತ್ತಿದೆ ಎಂದು ರಾಜ್ಯ ಉಚ್ಚನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶ ಹಾಗೂ ರಾಜ್ಯ ಗಡಿ ಸಂರಕ್ಷಣಾ ಆಯೋಗ ಅಧ್ಯಕ್ಷ ಕೆ.ಎಲ್.ಮಂಜುನಾಥ್ ಹೇಳಿದರು.

ಮಾಯಸಂದ್ರ ಹೋಬಳಿ ಹೊಣಕೆರೆಯಲ್ಲಿ ಬುಧವಾರ ರಂಗನಾಥಸ್ವಾಮಿ ದೇವಾಲಯ ಜೀಣೋದ್ಧಾರ, ಮೂರ್ತಿ ಪ್ರತಿಷ್ಠಾಪನೆ, ಕಳಸ ಸ್ಥಾಪನಾ ಸಮಾರಂಭ ಧಾರ್ವಿುಕ ಸಭೆಯಲ್ಲಿ ಮಾತನಾಡಿದರು.

ಶ್ರದ್ಧೆಯಿಂದ ದೇವರಲ್ಲಿ ನಂಬಿಕೆ ಇಟ್ಟು ಪೂಜೆ ಸಲ್ಲಿಸಿದಾಗ ಮನಸ್ಸಿನ ಕಲ್ಮಶ ಹೊರಹಾಕಲು ಸಾಧ್ಯ. ಹಿಂದು ಧರ್ಮದ ಉಳಿವಿಗೆ ಎಲ್ಲರೂ ಶ್ರಮಿಸಿ ಎಂದು ಕರೆ ನೀಡಿದರು.

ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ಗ್ರಾಮಸ್ಥರು ಒಟ್ಟಾಗಿ 400 ವರ್ಷದ ದೇವಸ್ಥಾನ ಜೀಣೋದ್ಧಾರ ಮಾಡಿದ್ದಾರೆ. ಯುವಕರು ದೇವರಲ್ಲಿ ನಂಬಿಕೆ ಇರಿಸಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಬದರಿಕಾಶ್ರಮದ ಓಂಕಾರಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ದೇವಸ್ಥಾನ ನಿರ್ವಣಕ್ಕೆ ಸಹಕರಿಸಿದ ದಾನಿಗಳನ್ನು ಸನ್ಮಾನಿಸಲಾಯಿತು.

ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ, ನಿವೃತ್ತ ಕೆಎಎಸ್ ಅಧಿಕಾರಿ ಮಂಗಿಗುಪ್ಪೆ ಗಂಗಣ್ಣ, ಸಾಹಿತಿ ಕೆ.ಬೈರಪ್ಪ, ಬಿಇಒ ಜಯಕುಮಾರ್, ಪಿಎಲ್​ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬೋರೇಗೌಡ, ಪ್ರೊ.ಪುಟ್ಟರಂಗಪ್ಪ, ವಕೀಲ ಧನಪಾಲ್, ಟ್ರಸ್ಟ್ ಅಧ್ಯಕ್ಷ ಆರ್.ಲಕ್ಷ್ಮಣಗೌಡ, ಉಪಾಧ್ಯಕ್ಷರಾದ ತಿಮ್ಮಯ್ಯ, ಕಳಸಚಾರ್, ಲಕ್ಷ್ಮೀಕಾಂತಮ್ಮ, ಕಾರ್ಯದರ್ಶಿ ಮೂಡಲಗಿರಯ್ಯ, ಪದಾಧಿಕಾರಿಗಳಾದ ನಿಂಗರಾಜು, ವೆಂಕಟಯ್ಯ, ಕೃಷಗೌಡ, ಗಿರಿಯಪ್ಪ ಇದ್ದರು.

Leave a Reply

Your email address will not be published. Required fields are marked *

Back To Top