23.2 C
Bangalore
Saturday, December 14, 2019

ನೆರೆಯಿಂದಾದ ಅವ್ಯವಸ್ಥೆ ಸರಿಪಡಿಸಲು ಕ್ರಮ ಕೈಗೊಳ್ಳಿ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ವಿಜಯವಾಣಿ ಸುದ್ದಿಜಾಲ ಹಾನಗಲ್ಲ

ತಾಲೂಕಿನಾದ್ಯಂತ ನೆರೆ ಹಾವಳಿಯಿಂದ ಉಂಟಾದ ಅವ್ಯವಸ್ಥೆಯನ್ನು ಸರಿಪಡಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸವಣೂರು ಉಪವಿಭಾಗಾಧಿಕಾರಿ ಹರ್ಷಲ್ ನಾರಾಯಣರಾವ್ ಸೂಚನೆ ನೀಡಿದರು.

ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಅಧಿಕಾರಿಗಳು ನಿರಂತರ ಸಾರ್ವಜನಿಕರ ಸಂಪರ್ಕದಲ್ಲಿರಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರು ಪೂರೈಕೆಗೆ ಪಿಡಿಒಗಳು ಕ್ರಮಕೈಗೊಳ್ಳಬೇಕು. ಕಾಲಕಾಲಕ್ಕೆ ಫಾಗಿಂಗ್ ಮಾಡಿಸಿ, ಪ್ರತಿ ಗ್ರಾಮಕ್ಕೂ ವೈದ್ಯರು ಭೇಟಿ ನೀಡಿ ಸ್ವಚ್ಛತೆ ಪರಿಶೀಲಿಸಬೇಕು ಎಂದು ಸೂಚಿಸಿದರು.

ತಾಲೂಕಿನಲ್ಲಿ ಸ್ಥಗಿತಗೊಂಡಿರುವ ಕುಡಿಯುವ ನೀರಿನ 32 ಘಟಕಗಳನ್ನು ಕೂಡಲೆ ಸರಿಪಡಿಸಬೇಕು. ತಾಲೂಕಿನ 18 ಶಾಲೆಗಳಲ್ಲಿ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಆ. 15ರವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ಅಲ್ಲಿ ಶಾಲೆಗಳನ್ನು ಪ್ರಾರಂಭಿಸುವುದಾದರೆ ಸಂತ್ರಸ್ತರನ್ನು ಸಮುದಾಯ ಕೇಂದ್ರಗಳಿಗೆ ವರ್ಗಾಯಿಸಬೇಕಾಗುತ್ತದೆ. ಅದಕ್ಕಾಗಿ ಕ್ರಮ ಕೈಗೊಳ್ಳಬೇಕು ಎಂದು ಪಿಡಿಒಗಳಿಗೆ ಸಲಹೆ ನೀಡಿದರು. ಅಲ್ಲದೆ, ಜಾನುವಾರುಗಳಿಗೆ ಮೇವು ವಿತರಣೆಗೂ ವ್ಯವಸ್ಥೆ ಕೈಗೊಳ್ಳಬೇಕಿದೆ ಎಂದರು.

ಹಾನಿ ವರದಿ ಸಲ್ಲಿಸಬೇಕಿದೆ: ತಹಸೀಲ್ದಾರ್ ಎಂ. ಗಂಗಪ್ಪ ಮಾತನಾಡಿ, ರಾಜ್ಯ ಸರ್ಕಾರ ಹಾನಗಲ್ಲ ಅನ್ನು ಪ್ರವಾಹ ಪೀಡಿತ ತಾಲೂಕು ಎಂದು ಘೊಷಿಸಿದೆ. ಕಂದಾಯ, ಕೃಷಿ, ತೋಟಗಾರಿಕೆ, ಗ್ರಾಪಂ ಅಧಿಕಾರಿಗಳು ಜಂಟಿ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸಬೇಕಿದೆ. ಜನ-ಜಾನುವಾರುಗಳ ಜೀವ ಹಾನಿಗೆ ತಕ್ಷಣ ಪರಿಹಾರ ನೀಡಬೇಕಿದೆ. ತಾಲೂಕಿನ 8 ಗ್ರಾಮಗಳು ವಿದ್ಯುತ್ ಸಮಸ್ಯೆ ಎದುರಿಸುತ್ತಿದ್ದವು. ಅವುಗಳಲ್ಲಿ ಆರೇಲಕ್ಮಾಪುರ ಹೊರತುಪಡಿಸಿ ಉಳಿದೆಡೆ ಸಮಸ್ಯೆ ಬಗೆಹರಿಸಲಾಗಿದೆ. ಆರೇಲಕ್ಮಾಪುರಕ್ಕೂ ಶೀಘ್ರ ಸಂಪರ್ಕ ಕಲ್ಪಿಸಲಾಗುವುದು. ಒಟ್ಟು 276 ವಿದ್ಯುತ್ ಕಂಬಗಳು ಮುಳುಗಿವೆ. 157 ಮುರಿದುಬಿದ್ದಿವೆ. 31 ಕಂಬಗಳನ್ನು ಬದಲಾಯಿಸಲಾಗಿದೆ. ನೀರಾವರಿಗೆ ಸಂಬಂಧಿಸಿದ 102 ಟಿಸಿಗಳಲ್ಲಿ 15 ಸುಟ್ಟಿವೆ. 5 ಅನ್ನು ಬದಲಾಯಿಸಲಾಗಿದೆ. ಇನ್ನೂ 10 ಟಿಸಿಗಳನ್ನು ಮಳೆ ತಗ್ಗಿದ ಮೇಲೆ ಬದಲಾಯಿಸಲಾಗುತ್ತದೆ. 72 ಫೀಡರ್​ಗಳನ್ನು ಬಂದ್ ಮಾಡಲಾಗಿದೆ. ಅವಘಡಗಳಾದಲ್ಲಿ 1912 ಸಂಖ್ಯೆಗೆ ಸಂರ್ಪಸುವಂತೆ ಹೆಸ್ಕಾಂ ಎಇಇ ಜಿಂಗಾಡೆ ತಿಳಿಸಿದರು.

ಸಭೆಯಲ್ಲಿ ತಾಪಂ ಇಒ ಚನ್ನಪ್ಪ ರಾಯಣ್ಣನವರ, ತಾಲೂಕು ನೋಡಲ್ ಅಧಿಕಾರಿ ಜಮಖಾನಿ, ಎಡಿಎ ದೇವೇಂದ್ರಪ್ಪ ಕಡ್ಲೇರ, ಟಿಎಚ್​ಒ ಡಾ. ರವೀಂದ್ರಗೌಡ ಪಾಟೀಲ, ಎಸ್. ಆನಂದ್, ಬಿಇಒ ಎಚ್. ಶ್ರೀನಿವಾಸ್, ಮುಖ್ಯಾಧಿಕಾರಿ ಎಚ್.ಎನ್. ಭಜಕ್ಕನವರ, ಜಿಪಂ ಎಇಇ ಆರ್.ಎಂ. ಸೊಪ್ಪಿಮಠ, ಪಶುಸಂಗೋಪನೆ ಇಲಾಖೆ ಅಧಿಕಾರಿ ಡಾ. ಗಿರೀಶ್ ರೆಡ್ಡೇರ, ಸಿಡಿಪಿಒ ಸಾವೋಜಿ ಇತರರು ಉಪಸ್ಥಿತರಿದ್ದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...