18 C
Bangalore
Thursday, December 5, 2019

ನೆರೆ ಹಾವಳಿ ನಂತರ ವಿದ್ಯುತ್ ಬರೆ!

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಗುತ್ತಲ: ಪ್ರವಾಹ ಇಳಿಮುಖವಾಗಿ ಬದುಕು ಎಂದಿನಂತೆ ಆಗುವುದು ಎಂದುಕೊಂಡ ಗುತ್ತಲ ಹೋಬಳಿಯ ಅಕ್ಕೂರ, ಕೋಡಬಾಳ, ಕೆಸರಳ್ಳಿ, ಕೋಣನತಂಬಿಗೆ, ಹೊಸರಿತ್ತಿ ಸೇರಿ ವರದಾ ನದಿಯ ಅಚ್ಚುಕಟ್ಟು ಪ್ರದೇಶಗಳ ಗ್ರಾಮಗಳ ಜನತೆಗೆ ಹೆಸ್ಕಾಂ ಶಾಕ್ ನೀಡಿದೆ.

ಪ್ರವಾಹದಿಂದ ಇಲ್ಲಿ ವಿದ್ಯುತ್ ಸಂಪರ್ಕ ಕಡಿದು ಹೋಗಿ 15-20 ದಿನಗಳಾಗಿದೆ. ಆದರೆ, ಈವರೆಗೂ ಹೆಸ್ಕಾಂ ಅಧಿಕಾರಿಗಳು ದುರಸ್ತಿಗೆ ಮುಂದಾಗದಿರುವುದರಿಂದ ನಿವಾಸಿಗಳಿಗೆ ಕುಡಿಯಲು ನೀರು ಸಿಗದ ಸ್ಥಿತಿ ನಿರ್ವಣವಾಗಿದೆ.

ಈ ಪ್ರದೇಶಗಳಲ್ಲಿ ನೂರಾರು ವಿದ್ಯುತ್ ಕಂಬಗಳು ಬಿದ್ದಿವೆ. ಕೆಲವು ಮುಟ್ಟಿದರೆ ಬೀಳುವ ಸ್ಥಿತಿಯಲ್ಲಿವೆ. ಎಲ್ಲೆಂದರಲ್ಲಿ ನೆಲದ ಮೇಲೆ ವಿದ್ಯುತ್ ತಂತಿಗಳು ಬಿದ್ದಿವೆ. ಕೆಲ ವಿದ್ಯುತ್ ಪರಿವರ್ತಕಗಳಲ್ಲಿ (ಟಿಸಿ) ಕೆಸರು ತುಂಬಿಕೊಂಡಿದೆ. ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಹೇಳಿದರೆ ಸಿಬ್ಬಂದಿ ಕೊರತೆ ನೆಪ ಹೇಳುತ್ತಾರೆ ಎಂದು ಅಕ್ಕೂರ ಗ್ರಾಮಸ್ಥರು ದೂರಿದ್ದಾರೆ.

ವರದಾ ನದಿಯ ಅಚ್ಚುಕಟ್ಟು ಪ್ರದೇಶದ ಗ್ರಾಮಗಳಲ್ಲಿ ವಾಸಿಸುವವರಿಗಿಂತ ತೋಟದ ಮನೆಗಳಲ್ಲಿ ವಾಸಿಸುವವರೇ ಅಧಿಕ. ಇವರಿಗೆಲ್ಲ ವಿದ್ಯುತ್ ಸಮಸ್ಯೆಯಿಂದಾಗಿ ಕುಡಿಯುವ ನೀರಿಲ್ಲದೆ ತೊಂದರೆಯಾಗಿದೆ. ನದಿಯಲ್ಲಿನ ನೀರು ಕುಡಿಯಲು ಬರುತ್ತಿಲ್ಲ. ಜಾನುವಾರಗಳೂ ನದಿಯ ನೀರನ್ನು ಕುಡಿಯುತ್ತಿಲ್ಲ. ರಾತ್ರಿ ವೇಳೆ ವಿದ್ಯುತ್ ಇಲ್ಲದೆ ಜನಜೀವನ ಅಸ್ತವ್ಯಸ್ತಗೊಂಡಿದ್ದರೂ, ಈ ಬಗೆಗೆ ಅರಿವು ಇಲ್ಲ ಎಂಬಂತೆ ಹೆಸ್ಕಾಂ ಸಿಬ್ಬಂದಿ ವರ್ತಿಸುತ್ತಿದ್ದಾರೆ. ಪ್ರವಾಹಕ್ಕೆ ಸಿಲುಕದ ಜಮೀನುಗಳಲ್ಲಿನ ಬೆಳೆಗಳಿಗೆ ಈಗ ನೀರುಣಿಸಬೇಕಾಗಿದೆ. ವಿದ್ಯುತ್ ಸಂಪರ್ಕ ಇಲ್ಲದೆ ನೀರುಣಿಸಲು ಆಗುತ್ತಿಲ್ಲ. ಇದರಿಂದ ಬೆಳೆದ ಬೆಳೆ ಬಾಡತೊಡಗಿವೆ. ಬೆಳೆಯನ್ನೇ ನಂಬಿಕೊಂಡ ನಾವು ಜೀವಿಸುವುದಾದರೂ ಹೇಗೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಈ ಎಲ್ಲದರ ಮಧ್ಯೆ ಕೆಲ ರೈತರು ತಮ್ಮ ಜಮೀನುಗಳಲ್ಲಿ ಬಿದ್ದಿದ್ದ ಕೆಲವು ವಿದ್ಯುತ್ ಕಂಬಗಳನ್ನು ಮರುಸ್ಥಾಪಿಸಿದ್ದಾರೆ. ವಿದ್ಯುತ್ ತಂತಿಗಳನ್ನು ಮೇಲಕ್ಕೆ ಕಟ್ಟಿದ್ದಾರೆ. ಆದರೆ, ಅಪಾಯಕಾರಿ ಸ್ಥಿತಿಯಲ್ಲಿನ ವಿದ್ಯುತ್ ಕಂಬಗಳನ್ನು ಸರಿಪಡಿಸುವ ಕಾರ್ಯಕ್ಕೆ ಹೆಸ್ಕಾಂ ಅಧಿಕಾರಿಗಳು ತುರ್ತು ಗಮನಹರಿಸಬೇಕಾಗಿದೆ.

ಪ್ರವಾಹ ಬಂದಾಗಿನಿಂದಲೂ ಇಲ್ಲಿಯವರೆಗೂ ನಮ್ಮ ತೋಟಗಳಿಗೆ ವಿದ್ಯುತ್ ಇಲ್ಲದೆ ತೀವ್ರ ತೊಂದರೆಯಾಗಿದೆ. ಹೆಸ್ಕಾಂ ಅಧಿಕಾರಿಗಳಿಗೆ ಸಮಸ್ಯೆಯ ಬಗ್ಗೆ ಹೇಳಿದರೆ ಲೈನ್​ವುನ್​ಗಳ ಕೊರೆತೆ ಇದೆ ಎಂದು ತಮ್ಮದೇ ಸಮಸ್ಯೆ ಹೇಳುತ್ತಾರೆ ಹೊರತು, ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಎರಡು ದಿನಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸದೇ ಇದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದರು ಧರಣಿ ಮಾಡುತ್ತೇವೆ.
| ಡಾ. ದಯಾನಂದ ಕಲಕೋಟಿ, ಸಂತ್ರಸ್ತರು ಅಕ್ಕೂರ

ವಾಹನಗಳು ಹೋಗದೇ ಇರುವಲ್ಲಿ ಹಾಗೂ ಕೆಸರು ಬಹಳ ಇದ್ದ ಪ್ರದೇಶದಲ್ಲಿ ಸಮಸ್ಯೆಯಾಗಿದೆ. ಕೆಲಸ ಮಾಡಲು ಸಿಬ್ಬಂದಿ ಕೊರತೆ ಇರುವುದು ನಿಜ. ಗುತ್ತಿಗೆದಾರರ ಮೂಲಕ ಅಕ್ಕೂರ- ಹೊಸರಿತ್ತಿ ಭಾಗದಲ್ಲಿನ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಶುಕ್ರವಾರ ಖುದ್ದಾಗಿ ಹೋಗಿ ಸ್ಥಳ ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
| ಎಂ.ಬಿ. ಪಾಟೀಲ, ಸೂಪರಿಡೆಂಟ್ ಇಂಜಿನಿಯರ್ ಹೆಸ್ಕಾಂ, ಹಾವೇರಿ

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...