ಹನೂರು: ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಪಾಳು ಮನೆಯೊಂದರಲ್ಲಿ ಭಾನುವಾರ ವ್ಯಕ್ತಿಯೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗ್ರಾಮದ ಎಂ. ಮಾದೇಶ (29) ಮೃತ ವ್ಯಕ್ತಿ.
ಈತ ಕಳೆದ 10 ವರ್ಷದ ಹಿಂದೆ ಯಳಂದೂರು ತಾಲೂಕಿನ ವೈ.ಕೆ. ಮೋಳೆ ಗ್ರಾಮದ ರಾಜೇಶ್ವರಿ ಎಂಬಾಕೆಯನ್ನು ವಿವಾಹವಾಗಿದ್ದು, ಇಬ್ಬರು ಗಂಡು ಮಕ್ಕಳಿದ್ದಾರೆ. ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಈತನ ಶವ ಬೆಳಗ್ಗೆ 11.30 ರಲ್ಲಿ ಗ್ರಾಮದ ಪಾಳು ಬಿದ್ದಿದ್ದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಗಮನಿಸಿದ ಸ್ಥಳೀಯರು ಕುಟುಂಬಸ್ಥರು ಹಾಗೂ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿ ಮೃತರ ಪತ್ನಿ ರಾಜೇಶ್ವರಿ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದರು. ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಮೃತದೇಹವನ್ನು ಹನೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ನಂತರ ವಾರಸುದಾರರಿಗೆ ನೀಡಲಾಯಿತು.
TAGGED:chamarajanagara news