Wednesday, 14th November 2018  

Vijayavani

ಆ್ಯಂಬಿಡೆಂಟ್ ಕೋಟಿ ಕೋಟಿ ಡೀಲ್ ಪ್ರಕರಣ - ಕೆಲವೇ ಕ್ಷಣಗಳಲ್ಲಿ ಜಾಮೀನು ಅರ್ಜಿ ತೀರ್ಪು- ಬಿಡುಗಡೆಯಾಗ್ತಾರಾ ಗಣಿಧಣಿ..?        ನಾನು ಸಕ್ಕರೆ, ಮಾಧ್ಯಮಗಳು ಇರುವೆ - ನಾನು ಹೋದ್ಕಡೆ ನನ್ನನ್ನೇ ಹಿಂಬಾಲಿಸುತ್ತಾರೆ -  ಜಂಭ ಕೊಚ್ಚಿಕೊಂಡ ನಟಿ ಶ್ರುತಿ        ನಮ್ಮ ತಂದೆನೂ ಬ್ರಾಹ್ಮಣರನ್ನ ಸೋಲಿಸಿದ್ರು - ನಾನೂ ಈಗ ಬ್ರಾಹ್ಮಣರ ವ್ಯಕ್ತಿಯನ್ನು ಸೋಲಿಸಿದ್ದೇನೆ - ಸಿದ್ದು ನ್ಯಾಮಗೌಡ ಹೇಳಿಕೆ        ಮಹದಾಯಿ ನದಿ ನೀರು ಹಂಚಿಕೆ ವಿಚಾರ - ಇದೇ 17ರಂದು ಸರ್ವೆ ಪಕ್ಷ ಸಭೆ ಕರೆ ಸಿಎಂ- ಬಿಎಸ್​ವೈ, ದಿನೇಶ್​ ಗುಂಡೂರಾವ್​ಗೆ ಪತ್ರ        ರಫೇಲ್ ಖರೀದಿ ಅವ್ಯವಹಾರ ಆರೋಪ - ಸುದೀರ್ಘ 5 ಗಂಟೆಗಳ ಕಾಲ ನಡೆದ ವಿಚಾರಣೆ ಮುಕ್ತಾಯ - ತೀರ್ಪು ಕಾಯ್ದಿರಿಸಿದ ಸುಪ್ರೀಂ        ವೈಟ್​​ಹೌಸ್​​ನಲ್ಲಿ ದೀಪಾವಳಿ ಸಂಭ್ರಮ - ದೀಪ ಬೆಳಗಿ ಹಿಂದುಗಳಿಗೆ ಶುಭಕೋರಿದ ಟ್ರಂಪ್ - ಮೋದಿ ನನ್ನ ಸ್ನೇಹಿತ ಎಂದ ಟ್ರಂಪ್​       
Breaking News

ನೌಕರರ ಸೇವಾ ಗುಣಮಟ್ಟ ಕುಸಿತ

Saturday, 14.07.2018, 2:09 PM       No Comments

ಚಿಕ್ಕಬಳ್ಳಾಪುರ: ಕಂದಾಯ ಇಲಾಖೆಯಲ್ಲಿ ನೌಕರರ ಸೇವಾ ಗುಣಮಟ್ಟ ಕುಸಿಯುತ್ತಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಬೇಸರ ವ್ಯಕ್ತಪಡಿಸಿದರು.

ನಗರದ ಕೆಇಬಿ ಸಮುದಾಯ ಭವನದಲ್ಲಿ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ಸಂಘದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕಂದಾಯ ದಿನಾಚರಣೆಯಲ್ಲಿ ಮಾತನಾಡಿದರು.

70ನೇ ದಶಕದಲ್ಲಿ ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು ತಯಾರಿಸುತ್ತಿದ್ದ ವರದಿಗಳು ವಸ್ತುನಿಷ್ಠ ಮತ್ತು ಸ್ಪಷ್ಟವಾಗಿರುತ್ತಿದ್ದವು. ಆದರೆ, ಇದೀಗ ನಿರೀಕ್ಷೆಗೆ ಅನುಗುಣವಾಗಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವೈವಿಧ್ಯತೆಯಿಂದ ಕೂಡಿರುವ ದೇಶದಲ್ಲಿ ಕರ ನಿಗದಿ, ಜಾತಿ, ಆದಾಯ ಪ್ರಮಾಣ ಪತ್ರ, ಬೆಳೆ ನಷ್ಟ ಪರಿಹಾರ, ರೈತರ ಭೂ ದಾಖಲೆಗಳ ನಿರ್ವಹಣೆ ಸೇರಿ ಹಲವು ಮಹತ್ವದ ಸೇವೆಯನ್ನು ಕಂದಾಯ ಇಲಾಖೆ ನೀಡುತ್ತಿದೆ. ಇದಕ್ಕೆ ನೌಕರರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಕಂದಾಯ ಇಲಾಖೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ವಿಜಯಕುಮಾರ್ ಮಾತನಾಡಿ, ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಕಂದಾಯ ಇಲಾಖೆ ಪಾತ್ರ ಮಹತ್ತರವಾದುದು. ಆದರೆ, ಈ ಇಲಾಖೆ ನೌಕರರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಬೇಸರಿಸಿದರು.

ಕಂದಾಯ ಇಲಾಖೆ ನೌಕರರು ಮುಂಬಡ್ತಿ ದೊರೆಯದೆ ವಂಚಿತರಾಗುತ್ತಿದ್ದಾರೆ. ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಇಲಾಖೆಗೆ ಸಂಬಂಧಿಸಿದಂತೆ ಪ್ರತ್ಯೇಕ ಆಯುಕ್ತಾಲಯ ರಚನೆಯಾಗಬೇಕಿದೆ. ಇದರಿಂದ ಏಕರೂಪ ಆಡಳಿತ ವ್ಯವಸ್ಥೆ ಜಾರಿಯಾಗುವುದರೊಂದಿಗೆ ನೌಕರರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧಾ, ಉಪವಿಭಾಗಾಧಿಕಾರಿ ಬಿ.ಶಿವಸ್ವಾಮಿ, ಭೂ ದಾಖಲೆಗಳ ಉಪ ನಿರ್ದೇಶಕ ಜಿ.ಅಜ್ಜಪ್ಪ, ಡಿಯುಡಿಸಿ ಯೋಜನಾ ನಿರ್ದೇಶಕ ಡಾ.ಎನ್.ಭಾಸ್ಕರ್, ತಹಸೀಲ್ದಾರ್​ಗಳಾದ ಕೆ.ನರಸಿಂಹಮೂರ್ತಿ, ಎಂ.ನಾಗರಾಜ್, ಮಹಮ್ಮದ್ ಅಸ್ಲಂ, ವಿಶ್ವನಾಥ್, ಕೆ.ಮುನಿರಾಜು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಸಿ.ರೆಡ್ಡಪ್ಪ, ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ವೈ.ಎಲ್. ಹನುಮಂತರಾವ್, ಪ್ರಧಾನ ಕಾರ್ಯದರ್ಶಿ ಎಸ್.ಪಿ.ಜಯಪ್ರಕಾಶ್, ಖಜಾಂಚಿ ಕೆ.ಎಸ್.ಯೋಗೇಶ್​ಬಾಬು ಮತ್ತಿತರರಿದ್ದರು.

60 ಯೂನಿಟ್ ರಕ್ತ ಸಂಗ್ರಹ: ಚಿಕ್ಕಬಳ್ಳಾಪುರದ ಕೆಇಬಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 60 ಯೂನಿಟ್ ರಕ್ತ ಸಂಗ್ರಹವಾಯಿತು. ರಕ್ತದಾನಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ವಿವಿಧ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ಕಂದಾಯ ಇಲಾಖೆ ನೌಕರರಿಗೆ ಬಹುಮಾನ ವಿತರಿಸಲಾಯಿತು.

 

ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡುವುದಾಗಿ ಘೊಷಿಸಿದೆ. ಆದ್ದರಿಂದ ಕಂದಾಯ ಇಲಾಖೆ ನೌಕರರ ಒಂದು ದಿನದ ವೇತನವನ್ನು ಸರ್ಕಾರಕ್ಕೆ ನೀಡಲು ಸಂಘದ ಕಾರ್ಯಕಾರಿ ಸಮಿತಿ ತೀರ್ವನಿಸಿದೆ.

| ಎಂ.ವಿಜಯಕುಮಾರ್, ರಾಜ್ಯಾಧ್ಯಕ್ಷ, ಕಂದಾಯ ಇಲಾಖೆ ನೌಕರರ ಸಂಘ. 

Leave a Reply

Your email address will not be published. Required fields are marked *

Back To Top