18.1 C
Bangalore
Saturday, December 7, 2019

ಪಕ್ಕದಲ್ಲೇ ತುಂಗಭದ್ರೆ ಹರಿದರೂ ಸಿಗುತ್ತಿಲ್ಲ ಜೀವಜಲ..

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಮುಂಡರಗಿ: ಪಕ್ಕದಲ್ಲೇ ತುಂಗಭದ್ರಾ ನದಿ ಹರಿಯುತ್ತಿದ್ದರೂ ಕುಡಿಯಲು ನೀರು ಸಿಗುತ್ತಿಲ್ಲ. ನಿರ್ವಹಣೆ ಸಮಸ್ಯೆಯಿಂದ ನೀರು ಸರಬರಾಜು ಘಟಕ ಬಂದ್ ಆಗಿ ಹಲವು ದಿನಗಳೇ ಕಳೆದಿವೆ, ಸರ್ಕಾರದ ಯೋಜನೆ ಹಳ್ಳ ಹಿಡಿದಿದ್ದರೂ ಯಾರೊಬ್ಬರೂ ಗಮನ ಹರಿಸುತ್ತಿಲ್ಲ.  ಇದು ತಾಲೂಕಿನ ಹೆಸರೂರು ಗಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮಸ್ಥರ ಅಳಲು. ಹೆಸರೂರು, ಕಕ್ಕೂರು, ಕಕ್ಕೂರು ತಾಂಡಾ, ನಾಗರಹಳ್ಳಿ, ಬೆಣ್ಣಿಹಳ್ಳಿ ಸೇರಿ 5 ಗ್ರಾಮಗಳಿಗೆ ತುಂಗಭದ್ರಾ ನದಿಯಿಂದ ನೀರು ಪೂರೈಸಲು 2008ರಲ್ಲಿ 1.38 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಲಾಯಿತು.

ತುಂಗಭದ್ರಾ ನದಿಯಿಂದ 2 ಕಿಮೀ ದೂರದಲ್ಲಿರುವ ನಾಗರಹಳ್ಳಿ ರಸ್ತೆಯ ಬಳಿ ನದಿ ನೀರು ಸಂಸ್ಕರಣಾ ಘಟಕ ಹಾಗೂ 3ಲಕ್ಷ ಲೀಟರ್ ಸಾಮರ್ಥ್ಯದ ಕುಡಿಯುವ ನೀರಿನ ಸಂಪ್ ಅನ್ನು ನಿರ್ವಿುಸಲಾಗಿದೆ. ಆದರೆ ಮೋಟರ್ ದುರಸ್ತಿ, ಸಿಬ್ಬಂದಿ ವೇತನ, ನೀರಿನ ಸಂಸ್ಕರಣಾ ಘಟಕ ಹಾಗೂ ಸಂಪ್ ನಿರ್ವಹಣೆ ಇಲ್ಲದ ಕಾರಣ ಈ ಯೋಜನೆ ವ್ಯರ್ಥವಾಗಿದೆ.

ಬೋರ್​ವೆಲ್ ನೀರೆ ಗತಿ…

ಕಕ್ಕೂರ ನದಿಯಿಂದ ಬಹುಗ್ರಾಮಗಳ ಕುಡಿಯುವ ನೀರು ಸರಬರಾಜು ಘಟಕ ಬಂದ್ ಆಗಿದ್ದರಿಂದ 5 ಗ್ರಾಮಗಳ ಜನರಿಗೆ ಬೋರ್​ವೆಲ್ ನೀರೇ ಗತಿಯಾಗಿದೆ. ನಾಗರಹಳ್ಳಿ ಗ್ರಾಮದಲ್ಲಿ ಒಟ್ಟು 2 ಬೋರ್​ವೆಲ್​ಗಳಿಂದ ನೀರು ಪೂರೈಸಲಾಗುತ್ತಿದೆ. ಅದರಲ್ಲಿ ರೈತರ ಜಮೀನಿನ ಬೋರ್​ವೆಲ್​ನಿಂದ ಪ್ರತಿ ತಿಂಗಳಿಗೆ ಹತ್ತು ಸಾವಿರ ರೂಪಾಯಿಯಂತೆ ಬಾಡಿಗೆ ರೂಪದಲ್ಲಿ ನೀರನ್ನು ಪಡೆದು ಪೂರೈಸಲಾಗುತ್ತಿದೆ.

ಸಮಸ್ಯೆ ಕೇಳೋರಿಲ್ಲ

ಕಳೆದ ಜನವರಿಯಲ್ಲಿ ನಾಗರಹಳ್ಳಿ ಬಳಿಯ ನದಿ ನೀರು ಸಂಸ್ಕರಣಾ ಘಟಕ ಬಂದ್ ಆಗಿದ್ದರೂ ಇದುವರೆಗೂ ಯಾವೊಬ್ಬ ಅಧಿಕಾರಿಯಾಗಲಿ, ಜನಪ್ರತಿನಿಧಿಗಳಾಗಲಿ ಗಮನ ಹರಿಸಿಲ್ಲ. ಜನರಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಕಾಳಜಿ ವಹಿಸುತ್ತಿಲ್ಲ. ನಾಗರಹಳ್ಳಿ ಬಳಿಯ ನದಿ ನೀರು ಸಂಸ್ಕರಣಾ ಘಟಕ ಸಂಪೂರ್ಣವಾಗಿ ಅವ್ಯವಸ್ಥೆಯಿಂದ ಕೂಡಿದೆ. ಘಟಕದ ತುಂಬಾ ಬರೀ ಕಪ್ಪೆ ಜೊಂಡು, ಗಲೀಜು ಕೂಡಿದ್ದು, ನೀರನ್ನು ಶುದ್ಧೀಕರಿಸಿ ಪೂರೈಸಲಾಗುತ್ತಿತ್ತು. ನದಿ ನೀರು ಶುದ್ಧೀಕರಿಸಲು ಪ್ರತಿ ಮೂರು ತಿಂಗಳಿಗೊಮ್ಮೆ ಮರಳನ್ನು ಬದಲಾಯಿಸಬೇಕು. ಆದರೆ, 6 ತಿಂಗಳಿಂದ ನದಿ ನೀರು ಶುದ್ಧೀಕರಿಸುವ ಮರಳನ್ನು ಬದಲಾಯಿಸಿಲ್ಲ. ಇನ್ನು ನೀರಿನ ಸಂಪ್ ಮತ್ತು ಸಂಸ್ಕರಣಾ ಘಟಕದ ಸುತ್ತಲೂ ಮುಳ್ಳುಕಂಟಿ ಬೆಳೆದು ಸ್ವಚ್ಛತೆ ಇಲ್ಲದಂತಾಗಿದೆ.

ವೇತನ ಇಲ್ಲ…

ಕಕ್ಕೂರ ನದಿಯಿಂದ ಪೂರೈಸುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ನಿರ್ವಹಣೆಯಲ್ಲಿ ಇಲೆಕ್ಟ್ರಿಕಲ್, ನೀರು ಸರಬುರಾಜು ಮತ್ತು ವಾಚ್​ವುನ್ ಹುದ್ದೆ ಸೇರಿ 3 ಸಿಬ್ಬಂದಿ ಕಾರ್ಯನಿರ್ವಹಿಸಬೇಕು. ಆದರೆ, ಸದ್ಯ ಇಬ್ಬರು ಮಾತ್ರ ಕಾರ್ಯನಿರ್ವಹಿಸುತ್ತಾರೆ. ಆದರೆ, ನವಂಬರ್​ನಿಂದ ಇದುವರೆಗೆ ಇವರಿಗೂ ವೇತನ ನೀಡಿಲ್ಲ.

 

ಕಕ್ಕೂರ ಬಳಿಯ ತುಂಗಭದ್ರಾ ನದಿಯಿಂದ ಹೆಸರೂರ ಗ್ರಾ.ಪಂ. ವ್ಯಾಪ್ತಿಯ ಐದು ಗ್ರಾಮಗಳಿಗೆ ಪೂರೈಸುವ ಕುಡಿಯುವ ನೀರಿನ ಯೋಜನೆ ನಿರ್ವಹಣೆ ಇಲ್ಲದೆ ಸೊರಗಿದೆ. ಸಾರ್ವಜನಿಕರು ಕೊಳವೆಬಾವಿಗಳ ನೀರಿನ ಮೊರೆ ಹೋಗುವಂತಹ ಪರಿಸ್ಥಿತಿ ಬಂದೊದಗಿದೆ. ಆರು ತಿಂಗಳಿಂದ ಘಟಕ ಬಂದ್ ಇದ್ದರೂ ಯಾರೊಬ್ಬರೂ ಈ ಬಗೆಗೆ ಗಮನ ಹರಿಸದಿರುವುದು ದುರ್ದೈವದ ಸಂಗತಿ.

| ಸುರೇಶ ಹಲವಾಗಲಿ, ನಾಗರಹಳ್ಳಿ ಗ್ರಾಮಸ್ಥ

ಕಕ್ಕೂರು ಬಳಿಯ ತುಂಗಭದ್ರಾ ನದಿಯಿಂದ ಐದು ಗ್ರಾಮಗಳಿಗೆ ನೀರು ಪೂರೈಸುವ ಯೋಜನೆಯನ್ನು ನಿರ್ವಹಣೆ ಮಾಡಲು ಮಾರ್ಚ್​ನಲ್ಲಿ ಟೆಂಡರ್ ಕರೆಯಲಾಗಿತ್ತು. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಟೆಂಡರ್ ಪ್ರಕ್ರಿಯೆಗೆ ಅಡ್ಡಿ ಉಂಟಾಯಿತು. ಶೀಘ್ರವೇ ಟೆಂಡರ್ ಪ್ರಕ್ರಿಯೆ ಮುಗಿಸಿ ಸಂಸ್ಕರಣಾ ಘಟಕ ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಿ ಜನರಿಗೆ ನದಿ ನೀರು ಪೂರೈಸಲಾಗುತ್ತದೆ.

| ಆಕಾಶ ವಂದೇ, ಎಇಇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ವ್ಯುಲ್ಯ ಇಲಾಖೆ

 

 

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...