More

    ಪಡಿತರ ವಿತರಣೆ ವಿಳಂಬಕ್ಕೆ ಆಕ್ರೋಶ

    ಹಾಸನ: ಪಡಿತರ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ಸಾರ್ವಜನಿಕರು ಬುಧವಾರ ಆಕ್ರೋಶ ವ್ಯಕ್ತಪಡಿಸಿದರು.

    ನಗರದ ಕುವೆಂಪುನಗರ ಬಡಾವಣೆಯಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ಕೊರತೆ ಹಾಗೂ ಇತರ ಕಾರಣಗಳಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಬೆಳಗ್ಗೆ 6 ರಿಂದ 10 ಗಂಟೆವರೆಗೆ ಸರದಿ ಸಾಲಿನಲ್ಲಿ ನಿಂತರೂ ರೇಷನ್ ದೊರೆಯುತ್ತಿಲ್ಲ. ಸರ್ವರ್ ಸಮಸ್ಯೆ ಉಂಟಾಗಿರುವುದಾಗಿ ಸಿಬ್ಬಂದಿ ಹೇಳುತ್ತಾರೆ. ಆದರೆ ಪ್ರತಿ ದಿನವೂ ಹೀಗೆ ಆದರೆ ಜನರು ಬೇರೆ ಕೆಲಸಗಳಿಗೆ ತೆರಳುವುದು ಹೇಗೆ ಎಂದು ಪ್ರಶ್ನಿಸಿದರು.

    ವೃದ್ಧರು, ಮಹಿಳೆಯರು ಮನೆ ಕೆಲಸ ಬಿಟ್ಟು ಗಂಟೆಗಟ್ಟಲೇ ಪ್ರತಿದಿನ ನಿಲ್ಲುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಸುಲಭ ರೀತಿಯಲ್ಲಿ ಪಡಿತರ ದೊರೆಯುವಂತೆ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಸಿನಿಮಾ

    Latest Posts