ಪತ್ರಿಕೋದ್ಯಮ ವಿಚಾರಗೋಷ್ಠಿ ಹಾಗೂ ಸಂವಾದ ಕಾರ್ಯಕ್ರಮಕ್ಕೆ ಚಾಲನೆ

ಮಡಿಕೇರಿ: ಫೀ.ಮಾ ಕಾರ್ಯಪ್ಪ ಕಾಲೇಜು ಹಳೆ ವಿಧ್ಯಾರ್ಥಿಗಳ ಸಂಘ ಮತ್ತು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಡಿಕೇರಿ ಇವರ ಸಂಯುಕ್ತಾಶ್ರಯದಲ್ಲಿ ಪತ್ರಿಕೋದ್ಯಮ ವಿಚಾರಗೋಷ್ಠಿ ಹಾಗೂ ಸಂವಾದ ಕಾರ್ಯಕ್ರಮ ಫೀ.ಮಾ.ಕಾರ್ಯಪ್ಪ ಕಾಲೇಜಿನಲ್ಲಿ ಮಂಗಳವಾರ ನಡೆಯಿತು.

ಫೀ.ಮಾ ಕಾರ್ಯಪ್ಪ ಕಾಲೇಜು ಹಳೆ ವಿಧ್ಯಾರ್ಥಿಗಳ ಸಂಘದ ಅಧ್ಯಕ್ಷೆ ಶೋಭಾ ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ.ಟಿ.ಡಿ.ತಿಮ್ಮಯ್ಯ ಉದ್ಘಾಟಿಸಿದರು.

ಕಾಲೇಜಿನ ಪ್ರಾಂಶುಪಾಲ ಟಿ.ಡಿ.ತಿಮ್ಮಯ್ಯ, ನಿವೃತ ಪ್ರಾಂಶುಪಾಲೆ ಡಾ.ಪಾರ್ವತಿ ಅಪ್ಪಯ್ಯ, ಫೀ.ಮಾ ಕಾರ್ಯಪ್ಪ ಕಾಲೇಜು ಹಳೆ ವಿಧ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಶ್ಯಾಂ ಪೂಣಚ್ಚ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ ಇದ್ದರು.