ಪದವೀಧರರ ಸಮಸ್ಯೆ ಪರಿಹಾರಕ್ಕೆ ಬಿಜೆಪಿ ಹೋರಾಟ

blank

ಹುಬ್ಬಳ್ಳಿ: ಪಶ್ಚಿಮ ಪದವೀಧರರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಕಳೆದ ಅವಧಿಯಲ್ಲಿ ವಿಧಾನ ಪರಿಷತ್​ನ ಒಳಗೆ ಹಾಗೂ ಹೊರಗೆ ಪದವೀಧರರ ಸಮಸ್ಯೆ ಬಗ್ಗೆ ಧ್ವನಿ ಎತ್ತಿ ಸರ್ಕಾರದ ಗಮನ ಸೆಳೆದಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಇಲ್ಲಿನ ದೇಶಪಾಂಡೆ ನಗರದ ಬಿಜೆಪಿ ಕಚೇರಿಯಲ್ಲಿ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ವಿಧಾನ ಪರಿಷತ್​ನಲ್ಲಿಯೂ ಬಿಜೆಪಿ ಬಹುಮತ ಪಡೆಯಬೇಕಾದಲ್ಲಿ ಪಶ್ಚಿಮ ಪದವೀಧರ ಕ್ಷೇತ್ರ ಸೇರಿದಂತೆ ಪರಿಷತ್​ನ ಎರಡೂ ಕ್ಷೇತ್ರಗಳ ಚುನಾವಣೆಯಲ್ಲಿ ಗೆಲ್ಲುವ ಅಗತ್ಯವಿದೆ ಎಂದರು.

ಮುಂದಿನ ಎರಡ್ಮೂರು ತಿಂಗಳಲ್ಲಿ ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ವಿವಿಧೆಡೆ ಹಲವಾರು ಕೈಗಾರಿಕೆಗಳು ಪ್ರಾರಂಭಗೊಳ್ಳಲಿವೆ. ಧಾರವಾಡದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ 3-4 ಸಾವಿರ ಕೋಟಿ ರೂ. ಬಂಡವಾಳ ಹರಿದು ಬರಲಿದೆ ಎಂದರು.

ಅಭ್ಯರ್ಥಿ ಎಸ್.ವಿ. ಸಂಕನೂರ, ಕಲಘಟಗಿ ಶಾಸಕ ಸಿ.ಎಂ. ನಿಂಬಣ್ಣವರ ಮಾತನಾಡಿದರು. ಮಾಜಿ ಶಾಸಕ ಅಶೋಕ ಕಾಟವೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಹುಡಾ ಅಧ್ಯಕ್ಷ ನಾಗೇಶ ಕಲ್ಬುರ್ಗಿ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ಪ್ರಭು ನವಲಗುಂದಮಠ, ಬಸವರಾಜ ಕುಂದಗೋಳಮಠ ಇತರರಿದ್ದರು.

ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ

ಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಶಂಕರ ಕಲ್ಲೂರ ಅವರ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇವೆ ಎಂದು ಎಂಎಲ್​ಸಿ ಬಸವರಾಜ ಹೊರಟ್ಟಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ಪಕ್ಷದ ಅಭ್ಯರ್ಥಿಗಳು ನನ್ನನ್ನು ಸಂರ್ಪಸಿ ಬೆಂಬಲಿಸುವಂತೆ ಕೇಳಿದರು. ಆದರೆ, ಪದವೀಧರರನ್ನು ಕೇಳಿ ಎಂದಷ್ಟೇ ಹೇಳಿದೆ. ನಾವು ಯಾರ ಜತೆಗೂ ಒಳ ಒಪ್ಪಂದ ಮಾಡಿಕೊಂಡಿಲ್ಲ. ನಮ್ಮ ಬೆಂಬಲ ನಮ್ಮ ಪಕ್ಷದ ಅಭ್ಯರ್ಥಿಗೆ ಮಾತ್ರ. ಎಚ್.ಕೆ. ಪಾಟೀಲ ಜತೆಗೆ ಹೊಂದಾಣಿಕೆ ಇತ್ತು. ಅದು ಉತ್ತರ ಕರ್ನಾಟಕದ ಬಗೆಗೆ ಧ್ವನಿ ಎತ್ತುವುದಾಗಿತ್ತು ಎಂದರು.

ಜೆಡಿಎಸ್ ಅಭ್ಯರ್ಥಿ ಶಿವಶಂಕರ ಕಲ್ಲೂರ, ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿದರು. ಮುಖಂಡರಾದ ರಾಜಣ್ಣ ಕೊರವಿ, ಗುರುರಾಜ ಹುಣಸೀಮರದ, ಶಿವಣ್ಣ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ರಾಜ್ಯ ಮಟ್ಟದಲ್ಲಿ ಹೋರಾಟದ ಎಚ್ಚರಿಕೆ

ಧಾರವಾಡ: ಚುನಾವಣೆ ನಾಮಪತ್ರ ಸಲ್ಲಿಕೆ ಸಮಯದಲ್ಲಿ ಆಡಳಿತಾರೂಢ ಬಿಜೆಪಿ ನಾಯಕರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದರೂ ಅವರ ಮೇಲೆ ಕ್ರಮವಾಗಿಲ್ಲ. ಹೀಗಾಗಿ ಈ ಕುರಿತು ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯ ಘಟಕದ ಖಜಾಂಚಿ ಅರವಿಂದ ಬಿ.ಕೆ. ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Share This Article

ವೆಜ್​ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ Recipe

ಸ್ಟ್ರೀಟ್​ ಫುಡ್​ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…

ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips

ಹೈಹೀಲ್ಸ್​​ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…

ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್​ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…