17 C
Bangalore
Friday, December 13, 2019

ಪರಿಹಾರಕ್ಕೆ ತಿಂಗಳ ಗೌರವಧನ

Latest News

ಸಂಭ್ರಮದ ಅಮೃತೇಶ್ವರ ರಥೋತ್ಸವ

ಅಣ್ಣಿಗೇರಿ: ಪಟ್ಟಣದ ಆರಾಧ್ಯದೈವ ಶ್ರೀ ಅಮೃತೇಶ್ವರ ಮಹಾರಥೋತ್ಸವ ಗುರುವಾರ ಸಂಜೆ ಸಹಸ್ರಾರು ಭಕ್ತರ ಜಯಘೊಷಗಳ ಮಧ್ಯ ಸಡಗರ, ಸಂಭ್ರಮದಿಂದ ಜರುಗಿತು.

ಗಣರಾಜ್ಯೋತ್ಸವಕ್ಕೆ ಬ್ರೆಜಿಲ್ ಪ್ರಧಾನಿ ಬೇಡ

ವಿಜಯವಾಣಿ ಸುದ್ದಿಜಾಲ ಧಾರವಾಡ 2020ರ ಜ. 26ರ ಗಣರಾಜ್ಯೋತ್ಸವದ ಅತಿಥಿಯಾಗಿ ಬ್ರೆಜಿಲ್ ಪ್ರಧಾನಿ ಬೊಲ್ಸೇನಾರೋ ಬರುತ್ತಿರುವುದನ್ನು ರೈತ ಸಂಘ...

ಡಿಸಿಪಿಯಾಗಿ ಬಿ.ಎಸ್. ನೇಮಗೌಡ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್​ನ ಅಪರಾಧ ಮತ್ತು ಸಂಚಾರ ವಿಭಾಗಕ್ಕೆ ವರ್ಗವಾಗಿ ಬಂದಿರುವ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಬಿ.ಎಸ್. ನೇಮಗೌಡ ಗುರುವಾರ...

ಸೇವೆ ಸ್ಥಗಿತಗೊಳಿಸಿ ಧರಣಿ

ವಿಜಯವಾಣಿ ಸುದ್ದಿಜಾಲ ಕುಂದಗೋಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತಾಲೂಕಾಸ್ಪತ್ರೆ ಡಿ ದರ್ಜೆ ಗುತ್ತಿಗೆ ನೌಕರರು ಗುರುವಾರ ಸೇವೆ...

ಜ್ಞಾನ ಸಂಸತ್ ಅಧಿವೇಶನ ನಾಳೆ

ವಿಜಯವಾಣಿ ಸುದ್ದಿಜಾಲ ಧಾರವಾಡ ಹುಬ್ಬಳ್ಳಿಯ ವರದಶ್ರೀ ಫೌಂಡೇಷನ್​ನಿಂದ ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಡಿ. 14ರಂದು ಸಂಜೆ 4ಕ್ಕೆ...

ಗದಗ: ಜಿಲ್ಲೆಯಲ್ಲಿ ಮಲಪ್ರಭಾ, ಬೆಣ್ಣೆಹಳ್ಳ, ತುಂಗಭದ್ರಾ ಹಾಗೂ ವರದಾ ನದಿ ಪ್ರವಾಹಕ್ಕೆ ನದಿ ಪಾತ್ರದ ಗ್ರಾಮಗಳು ಕೊಚ್ಚಿಹೋಗಿದ್ದು, ಸಾವಿರಾರು ಜನರ ಬದುಕು ಬೀದಿಗೆ ಬಂದಿದೆ. ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತ ಕುಟುಂಬಗಳಿಗೆ ವಸತಿ, ಮೂಲಸೌಕರ್ಯ ಒದಗಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕೆಲಸ ನಿರ್ವಹಿಸಬೇಕು ಎಂದು ಜಿಪಂ ಅಧ್ಯಕ್ಷ ಎಸ್.ಪಿ. ಬಳಿಗಾರ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ನೆರೆಪೀಡಿತ ಪ್ರದೇಶದ ಸಂತ್ರಸ್ತರಿಗೆ ನೆರವಾಗುವ ಮತ್ತು ಅಲ್ಲಿ ಮುಂದಿನ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಕುರಿತು ಸೋಮವಾರ ಜರುಗಿದ ಜಿಲ್ಲಾ ಪಂಚಾಯಿತಿ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆಯಿಂದ ಮನೆಗಳ ಹಾಗೂ ಜೀವ ಹಾನಿಯ ಸರ್ವೆ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸಿ ವರದಿ ನೀಡಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯ ನರಗುಂದ, ರೋಣ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕಿನ ಬಹುತೇಕ ಗ್ರಾಮಗಳು ಪ್ರವಾಹಕ್ಕೆ ತತ್ತರಿಸಿವೆ. ಜಿಲ್ಲೆಯ ನೆರೆಪೀಡಿತ ಪ್ರದೇಶದ ಸಂತ್ರಸ್ತರಿಗೆ ಜಿಲ್ಲೆ ಸೇರಿ ರಾಜ್ಯದ ಜನ ಸಹಾಯ ಮಾಡಿದ್ದಾರೆ. ಆದ್ದರಿಂದ ಜಿಪಂ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರು ಒಂದು ತಿಂಗಳ ಗೌರವ ಧನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ತೀರ್ವನಿಸಿದ್ದೇವೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಪ್ರವಾಹ ಇಳಿದಿದೆ. ಪ್ರವಾಹದ ನಂತರ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದ್ದು, ಆರೋಗ್ಯ ಇಲಾಖೆ ಆದಷ್ಟು ಬೇಗ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಗ್ರಾಮಗಳಲ್ಲಿ ಬ್ಲೀಚಿಂಗ್ ಪೌಡರ್ ಸಿಂಪಡಿಸುವುದು, ಫಾಗಿಂಗ್ ಮಾಡುವುದು, ಅಗತ್ಯ ಔಷಧಿಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನೆರೆ ಪೀಡಿತ ಪ್ರದೇಶಗಳಾದ ಹೊಳೆಆಲೂರು ಮತ್ತು ಬೆಳವಣಿಕಿ ಕ್ಷೇತ್ರದ ಜಿಪಂ ಸದಸ್ಯರಾದ ಪಡಿಯಪ್ಪ ಪೂಜಾರ ಹಾಗೂ ಶಿವಕುಮಾರ ನೀಲಗುಂದ ಮಾತನಾಡಿ, ಹಿಂದೆಂದೂ ಕೇಳರಿಯದ ಪ್ರವಾಹಕ್ಕೆ ಜಿಲ್ಲೆ ತುತ್ತಾಗಿದ್ದು, ಈ ಮಧ್ಯೆ ಜಿಲ್ಲಾಡಳಿತ ಮುಂಜಾಗೃತಾ ಕ್ರಮ ಕೈಗೊಂಡ ಪರಿಣಾಮ ನೆರೆಪೀಡಿತ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ ಪರಿಣಾಮ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ ಸೇರಿ ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಸ ಮಾಡಿದ್ದಾರೆ. ಆದರೆ, ಆರೋಗ್ಯ ಇಲಾಖೆ ಮುಖ್ಯಸ್ಥರು ಮಾತ್ರ ಸ್ಪಂದಿಸದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಈ ವೇಳೆ ಪ್ರತಿಕ್ರಿಯಿಸಿದ ಡಿಎಚ್​ಒ ಡಾ. ವಿರುಪಾಕ್ಷರೆಡ್ಡಿ ಮಾದಿನೂರ ಅವರು, ನಾನು ಡಿಸಿ, ಸಿಇಒ ಜೊತೆ ನೆರೆಪೀಡಿತ ಪ್ರದೇಶಕ್ಕೆ ಹೋಗಿದ್ದೆ ಎಂದು ಉತ್ತರಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪಡಿಯಪ್ಪ ಪೂಜಾರ, ಹೊಳೆಆಲೂರಿನಲ್ಲಿ ಗಂಜಿ ಕೇಂದ್ರ ಎಲ್ಲಿ ತೆರೆಯಲಾಗಿತ್ತು? ಅದರ ಬಾಗಿಲು ಯಾವ ದಿಕ್ಕಿಗೆ ಇದೆ ಎಂದು ಪ್ರಶ್ನಿಸಿದರು. ಇದಕ್ಕೆ ಧ್ವನಿಗೂಡಿಸಿದ ಮತ್ತೋರ್ವ ಸದಸ್ಯ ಈಶ್ವರಪ್ಪ ಹುಲ್ಲಲ್ಲಿ, ಸಿಇಒ ಜೊತೆ ಇದ್ದುದಾಗಿ ಹೇಳುತ್ತಿದ್ದಾರೆ. ಅದಕ್ಕೆ ಅವರೇ ಉತ್ತರಿಸಲಿ ಎಂದು ಹೇಳಿದರು.

ಈ ವೇಳೆ ಮಧ್ಯಪ್ರವೇಶಿಸಿದ ಜಿಪಂ ಸಿಇಒ ಮಂಜುನಾಥ ಚವ್ಹಾಣ, ನಿಮ್ಮ ಮಾತಿನಲ್ಲಿ ಗೊಂದಲ ಇದೆ. ಅದನ್ನು ಸ್ಪಷ್ಟಪಡಿಸಿ. ನಾನು ಕೊಣ್ಣೂರಲ್ಲಿ ಇದ್ದಾಗ ನೀವು ಒಂದು ಸಾರಿ ಕಂಡಿದ್ದು ಬಿಟ್ಟರೆ ಬೇರೆಲ್ಲೂ ನೋಡಿಲ್ಲ. ನೀವು ಎಲ್ಲಿಗೆ, ಯಾವಾಗ ಹೋಗಿದ್ದೀರಿ ಎಂದು ವಿವರಿಸುವಂತೆ ವಿರುಪಾಕ್ಷರೆಡ್ಡಿ ಮಾದಿನೂರಗೆ ತಾಕೀತು ಮಾಡಿದರು.

ಜಿಪಂ ಸದಸ್ಯ ಪಡಿಯಪ್ಪ ಪೂಜಾರ ಮಾತನಾಡಿ, ಹೊಳೆಆಲೂರಿನಲ್ಲಿ ನದಿ ದಂಡೆ ಮೇಲಿರುವ ಜ್ಞಾನಸಿಂಧು ಅಂಧ ಮಕ್ಕಳ ಶಿಕ್ಷಣ ಸಂಸ್ಥೆಯಲ್ಲಿನ ಮಕ್ಕಳ ಬಗ್ಗೆ ಅಂಗವಿಕಲ ಕಲ್ಯಾಣ ಇಲಾಖೆ ಅಧಿಕಾರಿ ಆಶು ನದಾಫ್ ಅವರು ನಿರ್ಲಕ್ಷ್ಯ ಮಾಡಿದ್ದರಿಂದ ಅವರನ್ನು ಸ್ಥಳಾಂತರಿಸಲು ಕಷ್ಟಪಡಬೇಕಾಯಿತು. ಜೊತೆಗೆ ಅವರಿಗೆ ನೀಡುತ್ತಿದ್ದ ಅನುದಾನವನ್ನೂ ತಡೆಹಿಡಿದಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅಂಗವಿಕಲರ ಕಲ್ಯಾಣ ಇಲಾಖೆ ಅಧಿಕಾರಿ ಆಶು ನದಾಫ್ ಪ್ರತಿಕ್ರಯಿಸಿ, ಜಿಲ್ಲಾಡಳಿತದ ಸೂಚನೆ ಹಿನ್ನೆಲೆಯಲ್ಲಿ ಆ. 7ರಂದು ಜ್ಞಾನಸಿಂಧು ಅಂಧ ಮಕ್ಕಳ ವಸತಿ ಶಾಲೆ ಮುಖ್ಯಸ್ಥರಿಗೆ ಕರೆ ಮಾಡಿ, ಗದಗನ ಕರ್ನಾಟಕ ಭವನಕ್ಕೆ ಬರುವಂತೆ ಸೂಚಿಸಲಾಗಿತ್ತು. ಅದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಆ. 8ರ ಸಂಜೆ ಬಳಿಕ ಅವರು ನಮ್ಮ ಸಂಪರ್ಕಕ್ಕೆ ಬರಲಿಲ್ಲ. ಧಾರವಾಡಕ್ಕೆ ಹೋಗಿದ್ದರ ಬಗ್ಗೆ ಆ. 14ರಂದು ತಿಳಿಯಿತು. ಜ್ಞಾನಸಿಂಧು ಅಂಧ ಮಕ್ಕಳ ವಸತಿ ಶಾಲೆ ಅನುದಾನಿತವಾಗಿದ್ದು, ಅಲ್ಲಿ ಮೂಲಸೌಕರ್ಯಗಳ ಕೊರತೆ ಇರುವುದರಿಂದ ಇಲಾಖೆ ಮುಖ್ಯಸ್ಥರು ಅನುದಾನ ತಡೆ ಹಿಡಿದಿದ್ದಾರೆ. ಈ ಬಗ್ಗೆ ಮತ್ತೆ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ವಿವರಿಸಿದರು. ಜಿಪಂ ಉಪಾಧ್ಯಕ್ಷೆ ಶಕುಂತಲಾ ಮುಂದಿನಮನಿ, ಸದಸ್ಯರಾದ, ವಾಣ್ಣ ಕುರಡಗಿ, ಸಿದ್ದು ಪಾಟೀಲ, ಹನುಮಂತಪ್ಪ ಪೂಜಾರ, ಮಂಜುಳಾ ಹುಲ್ಲಣ್ಣವರ, ಜಿಪಂ ಉಪಕಾರ್ಯದರ್ಶಿ ಡಿ. ಪ್ರಾಣೇಶರಾವ್ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಪ್ರವಾಹ ಮತ್ತು ಮಳೆಯಿಂದ ಮಣ್ಣಿನ ಮನೆಗಳು ಬೀಳುತ್ತಿವೆ. ಕಾಳು-ಕಡಿ, ದವಸ ಧಾನ್ಯಗಳು ಕೊಚ್ಚಿಕೊಂಡು ಹೋಗಿವೆ. ಅಳಿದುಳಿದ ದವಸ ಧಾನ್ಯಗಳ ಹಾಗೂ ಮಳೆಗಾಲದಲ್ಲಿ ನೆರೆ ಪೀಡಿತ ಜನರ ರಕ್ಷಣೆಗಾಗಿ ಕೃಷಿ ಇಲಾಖೆ ನೀಡುವ ತಾಡಪತ್ರಿಗಳನ್ನು ನೆರೆ ಪೀಡಿತ ಪ್ರದೇಶಗಳಿಗೆ ನೀಡಬೇಕು.

| ಶಿವಕುಮಾರ ನೀಲಗುಂದ,

ಪಡಿಯಪ್ಪ ಪೂಜಾರ ಜಿಪಂ ಸದಸ್ಯರು

ನದಿ ಪಾತ್ರದ ಹಾಗೂ ಪ್ರವಾಹಕ್ಕೆ ತುತ್ತಾಗುವ ಹಳೇ ಗ್ರಾಮಗಳಿಗೆ ಸರ್ಕಾರ ಯಾವುದೇ ಅನುದಾನ ಬಿಡುಗಡೆ ಮಾಡದೆ, ಹೊಸ ಗ್ರಾಮಗಳನ್ನು ಅಭಿವೃದ್ಧಿ ಪಡಿಸಬೇಕು. ಈ ಮೂಲಕ ಎಲ್ಲರನ್ನೂ ಸ್ಥಳಾಂತರಿಸಲು ಸಾಧ್ಯವಾಗುತ್ತದೆ. ಜೊತೆಗೆ ಅಲ್ಲಿನ ಸ್ವಚ್ಛತೆಗೆ ಸುತ್ತಲಿನ ಗ್ರಾಮಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಹಾಗೂ ಪೌರಕಾರ್ವಿುಕರನ್ನು ಒಂದೊಂದು ದಿನ ಬಳಸಿಕೊಳ್ಳಬೇಕು.

| ವಾಸಣ್ಣ ಕುರಡಗಿ ಜಿಪಂ ಸದಸ್ಯ

Stay connected

278,749FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...