ಪರಿಹಾರ ಮಾರ್ಗಸೂಚಿ ಬದಲಿಸಿ

Latest News

ಶಾಸಕ ತನ್ವೀರ್​ ಸೇಠ್​ಗೆ ಭದ್ರತೆ ಹೆಚ್ಚಳ ಮಾಡಿದ ಸರ್ಕಾರ: 24 ತಾಸು 3 ಪಾಳಿಗಳಲ್ಲಿ ಗನ್​ಮ್ಯಾನ್​ ಭದ್ರತೆ

ಮೈಸೂರು: ತೀವ್ರ ಹಲ್ಲೆ ಹಿನ್ನೆಲೆಯಲ್ಲಿ ಶಾಸಕ ತನ್ವೀರ್​ ಸೇಠ್​ಗೆ ಒದಗಿಸಿದ್ದ ಭದ್ರತೆಯನ್ನು ಮೂರುಪಟ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದಿನದ 24 ತಾಸು...

ಸಿನಿಮಾದಂತೆ ರಾಜಕೀಯದಲ್ಲೂ ಮೋಡಿ ಮಾಡಲು ರಜಿನಿ-ಕಮಲ್​ ಸಜ್ಜು: ತ.ನಾಡು ಪಾಲಿಟಿಕ್ಸ್​ ಬಗ್ಗೆ ಮಹತ್ತರ ಸುಳಿವು ನೀಡಿದ ನಟದ್ವಯರು!

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಕಾಣುತ್ತಿದೆ. ಅದಕ್ಕೆ ಕಾರಣ ನಟನೆಯಿಂದ ರಾಜಕೀಯಕ್ಕೂ ಹೊರಳಿರುವ ರಜನಿಕಾಂತ್​ ಮತ್ತು ಕಮಲ್​ ಹಾಸನ್​ ಎಂಬುದೇ...

ಕೆಪಿಎಲ್​ ಮ್ಯಾಚ್​ ಫಿಕ್ಸಿಂಗ್ ಹಗರಣ: ಇಂದು 7 ತಂಡಗಳ ಮಾಲೀಕರ ವಿಚಾರಣೆ ನಡೆಸಲಿರುವ ಸಿಸಿಬಿ

ಬೆಂಗಳೂರು: ಕರ್ನಾಟಕ ಪ್ರಿಮೀಯರ್​ ಲೀಗ್​ ಕ್ರಿಕೆಟ್​ ಮ್ಯಾಚ್​ ಫಿಕ್ಸಿಂಗ್​ ಹಗರಣದ ವಿಚಾರಣೆಗೆ 7 ತಂಡಗಳ ಮಾಲೀಕರು ಇಂದು ಹಾಜರಾಗಲಿದ್ದಾರೆ. ಕೆಪಿಎಲ್​ನ 7 ತಂಡಗಳ ಮಾಲೀಕರು...

ವಿವಸ್ತ್ರಗೊಳಿಸಿ ಕ್ರಿಶ್ಚಿಯನ್​ ದಂಪತಿ ಮೇಲೆ ದೌರ್ಜನ್ಯ: ವೈರಲ್​ ಫೋಟೋ ಹಿಂದಿನ ಅಸಲಿಯತ್ತು ಫ್ಯಾಕ್ಟ್​ಚೆಕ್​ನಲ್ಲಿ ಬಹಿರಂಗ!

ನವದೆಹಲಿ: ಸಾರ್ವಜನಿಕ ಸ್ಥಳವೊಂದರಲ್ಲಿ ದಂಪತಿಯು ಮಗುವನ್ನು ಹಿಡಿದುಕೊಂಡು ಬೆತ್ತಲೆಯಾಗಿ ನಿಂತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಕೆಲ ದಿನಗಳಿಂದ ವೈರಲ್​ ಆಗಿದೆ. ಇದರ ಬಗ್ಗೆ...

ಉಪ ಚುನಾವಣೆ ರಣತಂತ್ರ ರೂಪಿಸಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿಂದು ಬಿಜೆಪಿ ಮಹತ್ವದ ಸಭೆ

ಬೆಂಗಳೂರು: ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಲು ಅನುಸರಿಸಬೇಕಾದ ತಂತ್ರಗಳ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ...

ಶಿವಮೊಗ್ಗ: ಬ್ರಿಟಿಷರ ಕಾಲದ ಪ್ರಕೃತಿ ವಿಕೋಪ ಪರಿಹಾರ ಮಾರ್ಗಸೂಚಿ ತಿದ್ದುಪಡಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪದಾಧಿಕಾರಿಗಳು ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಂಘದ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು, ಹಿಂದಿನ ಕಾಲದ ಮಾರ್ಗಸೂಚಿ ಅನ್ವಯ ಪರಿಹಾರ ನೀಡುವುದು ಸರಿಯಲ್ಲ. ಇದರಿಂದ ನಷ್ಟಕ್ಕೆ ಒಳಗಾಗಿರುವ ಸಂತ್ರಸ್ತರು, ಕೃಷಿಕರು ಹಾಗೂ ಜನರಿಗೆ ಸಹಾಯ ಆಗುವುದಿಲ್ಲ ಎಂದು ದೂರಿದರು.

ಪ್ರವಾಹ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕುವ ಸಂತ್ರಸ್ತರಿಗೆ ನಷ್ಟದ ಪ್ರಮಾಣದ ಅರ್ಧಕ್ಕಿಂತ ಹೆಚ್ಚಿನ ಪರಿಹಾರ ನೀಡಬೇಕು. ಮಾರ್ಗಸೂಚಿ ಬದಲಾಯಿಸಬೇಕು. ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯಿಂದ ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಮನೆ, ಕೃಷಿಭೂಮಿ ಜಲಾವೃತಗೊಂಡು ಸಾವಿರಾರು ಕೋಟಿ ರೂ. ಆಸ್ತಿ ನಷ್ಟವಾಗಿದೆ. ಗ್ರಾಮಗಳೇ ಜಲಾವೃತಗೊಂಡು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಮೂಲಕ ರಾಷ್ಟ್ರೀಯ ವಿಪತ್ತು ಎಂದು ಘೊಷಿಸುವಂತೆ ಆಗ್ರಹಿಸಿದರು.

ರಾಷ್ಟ್ರೀಯ ವಿಪತ್ತು ಘೊಷಣೆ ಮಾಡುವುದರಿಂದ ಮನೆ ಕಳೆದುಕೊಂಡ, ಭಾಗಶಃ ಹಾನಿಯಾಗಿರುವ, ಮೃತಪಟ್ಟವರ ಕುಟುಂಬಕ್ಕೆ, ಕೃಷಿಭೂಮಿ ಜಲಾವೃತ, ಬೆಳೆನಾಶ, ಬೆಳೆವಿಮೆ, ಜಾನುವಾರು ಸಾವು ಸೇರಿ ಅನೇಕ ವಿಷಯಗಳಲ್ಲಿ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ಸಿಗುವಂತೆ ಮಾಡಬೇಕು. ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ 5 ಲಕ್ಷ ರೂ. ಘೊಷಿಸಿದ್ದಾರೆ. ಮನೆ ದುರಸ್ತಿ ಕಾರ್ಯಕ್ಕೆ 1 ಲಕ್ಷ ರೂ. ನೀಡಲಾಗುವುದು ಎಂದಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಕೊಡಗು ಸಂತ್ರಸ್ತರಿಗೆ ಮನೆ ಕಟ್ಟಿಕೊಳ್ಳಲು 10 ಲಕ್ಷ ರೂ. ನೀಡಿದ್ದರು. ಈಗಲೂ ಸಂತ್ರಸ್ತರಿಗೆ 10 ಲಕ್ಷ ರೂ. ನೀಡಬೇಕು ಎಂದು ಆಗ್ರಹಿಸಿದರು.

ಬಗರ್​ಹುಕುಂ ರೈತರಿಗೂ ಪರಿಹಾರ ಕೊಡಿ: ಪ್ರವಾಹ ಹಾನಿಯಿಂದ ತೊಂದರೆಗೆ ಸಿಲುಕಿರುವ ಬಗರ್​ಹುಕುಂ ರೈತರಿಗೆ ಪರಿಹಾರ ನೀಡಬೇಕು ಹಾಗೂ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡುವಂತೆ ಎಚ್.ಆರ್.ಬಸವರಾಜಪ್ಪ ಮನವಿ ಮಾಡಿದರು. ಪ್ರವಾಹ ಸ್ಥಳಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡಿ ಹೋಗುತ್ತಿದ್ದಾರೆಯೆ ಹೊರತು ಪರಿಹಾರ ಸಿಗುತ್ತಿಲ್ಲ. ತಾತ್ಕಾಲಿಕ ರೂಪದಲ್ಲಿ ನೀಡಲು ಘೊಷಿಸಿರುವ 10 ಸಾವಿರ ರೂ. ಸಹ ತಲುಪಿಲ್ಲ. ತಾತ್ಕಾಲಿಕವಾಗಿ 25 ಸಾವಿರ ರೂ, ಮನೆ ಹಾನಿ ಸಮೀಕ್ಷೆ ನಡೆಸಿ ಹೆಚ್ಚಿನ ಪರಿಹಾರ ಒದಗಿಸಬೇಕು. ಬೆಳೆ ವಿಮೆ ಮಾಡಿಸಿದ ಕೃಷಿಕರಿಗೂ ಶೀಘ್ರ ವಿಮೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ರಾಜ್ಯ ಕಾರ್ಯಾಧ್ಯಕ್ಷ ಎನ್.ಕೆ.ಮಂಜುನಾಥ್​ಗೌಡ್ರು, ರಾಜ್ಯ ಕಾರ್ಯದರ್ಶಿ ಕೆ.ರಾಘವೇಂದ್ರ, ರಾಜ್ಯ ಉಪಾಧ್ಯಕ್ಷ ಹಿಟ್ಟೂರು ರಾಜು, ಟಿ.ಎಂ.ಚಂದ್ರಪ್ಪ, ಜಿಲ್ಲಾ ಕಾರ್ಯಾಧ್ಯಕ್ಷ ಪಿ.ಡಿ.ಮಂಜಪ್ಪ, ಜಿಲ್ಲಾಧ್ಯಕ್ಷ ಎಸ್.ಶಿವಮೂರ್ತಿ, ಇ.ಬಿ.ಜಗದೀಶ್, ಡಿ.ಎಚ್.ರಾಮಚಂದ್ರಪ್ಪ, ಗುರುಶಾಂತಪ್ಪ, ನಾಗರಾಜ್, ಎಚ್.ಬಿ.ಕನ್ನಪ್ಪ, ಜಿ.ಎನ್.ಪಂಚಾಕ್ಷರಿ, ಎಚ್.ಇ.ಗುರುಶಾಂತಪ್ಪ ಮತ್ತಿತರರು ಪಾಲ್ಗೊಂಡಿದ್ದರು.

- Advertisement -

Stay connected

278,614FansLike
572FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...