More

  ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ವೆಬ್ ಕಾಸ್ಟ್ ಬಳಕೆ

  ಕಲಾದಗಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾ.25 ರಂದು ಆರಂಭವಾಗಲಿದ್ದು, ತಾಲೂಕಿನಲ್ಲಿ ಯಾವುದೇ ರೀತಿಯಲ್ಲಿಯೂ ನಕಲು ನಡೆಯದಂತೆ ಕಟ್ಟುನಿಟ್ಟಾಗಿ ಹಾಗೂ ಸುಗಮವಾಗಿ ನಡೆಯುವಂತೆ ಎಲ್ಲಾ ಸುವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಬಾಗಲಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು.

  ಗ್ರಾಮದಲ್ಲಿರುವ ಗುರುಲಿಂಗೇಶ್ವರ ಪ್ರೌಢಶಾಲೆ ಹಾಗೂ ಹಣ್ಣು ಬೆಳೆಗಾರರ ವಿದ್ಯಾಸಂಸ್ಥೆಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಶನಿವಾರ ಭೇಟಿ ನೀಡಿದ ಅವರು, ಅಲ್ಲಿನ ಪರೀಕ್ಷಾ ವ್ಯವಸ್ಥೆಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು.

  ಬಾಗಲಕೋಟೆ ತಾಲೂಕಿನಲ್ಲಿರುವ 14 ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳು ಸೇರಿ ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿರುವ ಸಿಸಿ ಕ್ಯಾಮರಾಗಳ ಮೂಲಕ ಪರೀಕ್ಷಾ ಕೊಠಡಿಗಳಲ್ಲಿ ನಡೆಯುವ ಚಲನವಲನವನ್ನು ಕೇಂದ್ರ ಸ್ಥಾನದಲ್ಲಿರುವವರು ಹಾಗೂ ಅಧಿಕಾರಿಗಳು ತಮ್ಮ ಮೊಬೈಲ್ ಮೂಲಕ ಗಮನಿಸಬಹುದಾದ ‘ವೆಬ್ ಕಾಸ್ಟ್’ ಎಂಬ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವ್ಯವಸ್ಥೆಯ ಮೂಲಕ ನಕಲುಮುಕ್ತ ಪರೀಕ್ಷೆಗಳನ್ನು ನಡೆಸಲು ಕಟ್ಟೆಚ್ಚರ ವಹಿಸಲಾಗಿದೆ ಎಂದರು.

  ತಾಲೂಕಿನಲ್ಲಿ ಒಟ್ಟು 4865 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸುವರು. ಇದೇ ಮೊದಲ ಬಾರಿಗೆ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಯ ನಂತರ ಪರೀಕ್ಷಾರ್ಥಿಗಳು ಕೇಂದ್ರದಲ್ಲಿಯೇ ಊಟ ಮಾಡಿ ಮನೆಗೆ ತೆರಳಬಹುದು ಎಂದರು.

  ನೋಡಲ್ ಅಧಿಕಾರಿ ಪಿ.ಬಿ.ಪಾಟೀಲ, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಾದ ಗಿರಿಜಾ ನಾಗರಾಳ, ಎಸ್.ವಿ.ಲಮಾಣಿ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts