ಪರೋಪಕಾರದಿಂದ ಜೀವನ ಸಾರ್ಥಕ

blank

ಲಿಂಗಸುಗೂರು: ಪರಿಶ್ರಮದಿಂದ ಜ್ಞಾನ ಸಂಪಾದಿಸಿಕೊಂಡು ಧರ್ಮ ಮಾರ್ಗದಲ್ಲಿ ಪರೋಪಕಾರದ ಬದುಕು ಸಾಗಿಸಿದರೆ ಜೀವನ ಸಾರ್ಥಕವಾಗಲಿದೆ ಎಂದು ದೇವರಭೂಪುರ ಬೃಹನ್ಮಠದ ಅಮರೇಶ್ವರ ಗುರುಗಜದಂಡ ಶಿವಾಚಾರ್ಯರು ಹೇಳಿದರು.

ಪಟ್ಟಣದ ಈಶ್ವರ ದೇವಸ್ಥಾನದಲ್ಲಿ ವೀರಶೈವ ಜಂಗಮ ಸಮಾಜದಿಂದ ಹಮ್ಮಿಕೊಂಡಿದ್ದ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಭಾನುವಾರ ಸಂಜೆ ಆಶೀರ್ವಚನ ನೀಡಿದರು. ಶತಮಾನಗಳಿಂದ ಆಧ್ಯಾತ್ಮಿಕ ಮತ್ತು ಧಾರ್ಮಿಕ ಕಾಯಗಳಲ್ಲಿ ತೊಡಗಿಸಿಕೊಂಡು ಬರುತ್ತಿರುವ ವೀರಶೈವ ಜಂಗಮ ಸಮುದಾಯ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಂಡಾಗ ಇನ್ನೂ ಹೆಚ್ಚಿನ ಗೌರವ ಲಭಿಸಲಿದೆ ಎಂದರು.

ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಅವರ ಕನಸು ನನಸಾಗಿಸಲು ಪ್ರೋತ್ಸಾಹಿಸುವ ಕಾರ್ಯವನ್ನು ಪಾಲಕರು ಮಾಡಬೇಕು. ವೀರಶೈವ ಜಂಗಮ ಸಮಾಜ ಶೈಕ್ಷಣಿಕ, ಸಾಮಾಜಿಕ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ ಕಾರ್ಯವಾಗಿದೆ ಎಂದು ಗುರುಗಜದಂಡ ಶಿವಾಚಾರ್ಯರು ಹೇಳಿದರು.

ಯರಡೋಣ ಸಿದ್ಧರಾಮೇಶ್ವರ ಗುರುಮಠದ ಮುರುಘೇಂದ್ರ ಶಿವಯೋಗಿಗಳು ಆಶೀರ್ವಚನ ನೀಡಿ, ಸಮಾಜದಲ್ಲಿ ಅನಾದಿ ಕಾಲದಿಂದ ವಿರೋಧ ರಹಿತವಾಗಿ ಬದುಕು ಸಾಗಿಸುತ್ತ ಬರುತ್ತಿರುವುದೇ ವೀರಶೈವ ಧರ್ಮವಾಗಿದೆ. ಜ್ಞಾನ ಶಕ್ತಿ ಮತ್ತು ಕ್ರಿಯಾ ಶಕ್ತಿ, ಭಕ್ತಿ ವಿರಕ್ತಿಗಳ ಕ್ರಿಯಾಶಕ್ತಿಗಳೇ ಜಂಗಮರೆಂದು ಸಿದ್ಧಾಂತ ಶಿಖಾಮಣಿಯಲ್ಲಿ ಹೇಳಲಾಗಿದೆ ಎಂದರು.

ಜ್ಞಾನ ಸಂಪಾದಿಸಿಕೊಂಡು ಆಧ್ಯಾತ್ಮಿಕ, ಧಾರ್ಮಿಕ ಕಾರ್ಯಗಳನ್ನು ಕೈಗೊಳ್ಳುತ್ತ ಧರ್ಮೋಪದೇಶ ಮಾಡುತ್ತ ಕಾಯಕ ಮತ್ತು ದಾಸೋಹ ತತ್ವದಿಂದ ಮುನ್ನಡೆಯುವವರೇ ಮೂಲ ಜಂಗಮರಾಗಿದ್ದಾರೆ. ಗುರುವಿನಿಂದ ಶ್ರದ್ಧಾ ಪೂರ್ವಕವಾಗಿ ಜ್ಞಾನ ಸಂಪಾದಿಸಿಕೊಂಡು ಅಹಂಕಾರದಿಂದ ದೂರವಾಗಿ ಸತ್ಯ, ಧರ್ಮ, ಅಧ್ಯಯನ, ದಾನ ಮೊದಲಾದ ಪರಮ ಧರ್ಮಗಳನ್ನು ರೂಢಿಸಿಕೊಳ್ಳಬೇಕು ಮತ್ತು ಮುಂದಿನ ಪೀಳಿಗೆಗೂ ಕಲಿಸಿಕೊಟ್ಟಾಗ ಧರ್ಮ ಉಳಿಸಿ ಬೆಳೆಸಲು ಸಾಧ್ಯವಾಗಲಿದೆ ಎಂದು ಮುರುಘೇಂದ್ರ ಶಿವಯೋಗಿಗಳು ಹೇಳಿದರು. ಶೈಕ್ಷಣಿಕ, ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸಾಧನೆಗೈದ ವೀರಶೈವ ಜಂಗಮ ಸಮಾಜದ ಸಾಧಕರನ್ನು ಗೌರವಿಸಲಾಯಿತು.

Share This Article

ಈ ಕಾಯಿಲೆಯಿಂದ ಬಳಲುತ್ತಿರುವವರು ಸಿಹಿ ಗೆಣಸಿನಿಂದ ದೂರವಿರಿ; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಸಿಹಿ ಗೆಣಸು ಯಾರಿಗೆ ಇಷ್ಟವಿರುವುದಿಲ್ಲ ಹೇಳಿ. ರುಚಿಕರವಾದ ಸಿಹಿಗೆಣಸನ್ನು ಶೀತ ಋತುವಿನಲ್ಲಿ ಕಂಡುಬರುವ ಬೇರು ತರಕಾರಿ…

ಗಿಡಗಳನ್ನು ಹಸಿರಾಗಿಡಲು ಕಡಲೆಕಾಯಿ ಸಿಪ್ಪೆ ಪ್ರಯೋಜನಕಾರಿ; ಇಲ್ಲಿದೆ ಬಳಸುವ ವಿಧಾನ | Tips

ಚಳಿಗಾಲದಲ್ಲಿ ಸಸ್ಯಗಳಿಗೆ ಹೆಚ್ಚಿನ ಕಾಳಜಿ ಬೇಕು. ಏಕೆಂದರೆ ತಂಪಾದ ಗಾಳಿ ಮತ್ತು ಇಬ್ಬನಿಯಿಂದ ತೇವಾಂಶವು ಹೆಚ್ಚಾಗುವುದರಿಂದ…

Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?

ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…