ಕೋಲಾರ: ರಾಜ್ಯದಲ್ಲಿ ಯಾವುದೇ ರೀತಿಯ ಪವರ್ ಪಾಲಿಟಿಕ್ಸ್ ನಡೆಯುತ್ತಿಲ್ಲ, ಪವರ್ ಶೇರಿಂಗ್, ಪವರ್ ಕೇರಿಂಗ್ ಯಾವುದೂ ಇಲ್ಲ. ರಾಜ್ಯದ ಅಭಿವೃದ್ಧಿಗಾಗಿ ಎಲ್ಲರೂ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವ ಬೈರತಿ ಸುರೇಶ್ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಡಿನ್ನರ್ ಮಾಡುವುದಕ್ಕೆ ನಮ್ಮಲ್ಲಿ ಯಾವುದೇ ನಿರ್ಬಂಧ ಇಲ್ಲ. ಆದರೆ ಪ್ರತ್ಯೇಕ ಸಭೆ ಮಾಡದಂತೆ ಎಐಸಿಸಿ ಸೂಚನೆ ನೀಡಿದೆ. ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇವೆ ಎಂದು ಎಂದು ಸ್ಪಷ್ಟಪಡಿಸಿದರು.
ಡಿಸಿಎಂ ಒಂಟಿಯಾಗಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮುಖ್ಯಮಂತ್ರಿಗಳು ಎಷ್ಟು ಮುಖ್ಯವೋ ಡಿಸಿಎಂ ಸಹ ಅಷ್ಟೇ ಮುಖ್ಯ. ನಮ್ಮಲ್ಲಿ ಅಂತಹ ಭೇದ ಯಾವತ್ತೂ ನಡೆದಿಲ್ಲ ಎಂದು ಪ್ರತಿಕ್ರಿಯಿಸಿದರು.
ಅಽಕಾರ ಹಂಚಿಕೆ ಕುರಿತು ನನಗೆ ಗೊತ್ತಿಲ್ಲ, ಈ ಕುರಿತು ಹೈ ಕಮಾಂಡ್ ನಿರ್ಧಾರ ಮಾಡಲಿದೆ. ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಯಾಗುತ್ತಿಲ್ಲ. ಸಚಿವ ಸ್ಥಾನದ ಆಕಾಂಕ್ಷಿಗಳು ಕೋಲಾರಲ್ಲೂ ಇದ್ದಾರೆ. ಕೊಡೋದು ಬಿಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದರು.
ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಅವರಿಗೆ ಕಾಂಗ್ರೆಸ್‌ಗೆ ಸೇರಲು ಆಫರ್ ನೀಡಲಾಗಿದೆ ಎಂಬ ವಿಷಯದ ಕುರಿತು ಉತ್ತರಿಸಿದ ಸಚಿವರು, ಕಾಂಗ್ರೆಸ್‌ಗೆ ಯಾರೇ ಬಂದರು ಸ್ವಾಗತ ಮಾಡುತ್ತೇವೆ, ಅಭಿವೃದ್ಧಿ ವಿಚಾರಕ್ಕೆ ಬೆಂಬಲ ಕೊಟ್ಟು ಬರುವವರಿಗೆ ಅಭ್ಯಂತರವಿಲ್ಲ ಎಂದರು.
ಬಿಜೆಪಿ, ಜೆಡಿಎಸ್ ಶಾಸಕರನ್ನು ಆಪರೇಷನ್ ಮಾಡಿ ಕಾಂಗ್ರೆಸ್‌ಗೆ ಕರೆಸಿಕೊಳ್ಳುವ ಪರಿಸ್ಥಿತಿ ನಮಗಿಲ್ಲ, ಕಾಂಗ್ರೆಸ್ಸಿನಿAದಲೇ 140 ಶಾಸಕರು ಇರುವಾಗ ಆಪರೇಷನ್ ಮಾತು ಅಪ್ರಸ್ತುತ ಎಂದು ತಿಳಿಸಿದರು.
* ಮನಬಂದಂತೆ ಮಾತನಾಡುವುದು ಯತ್ನಾಳ್ ಅಭ್ಯಾಸ
ಬಿಜೆಪಿಯ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ನಾನು ದೊಡ್ಡ ರಾಜಕಾರಿಣಿ ಎಂದು ತಿಳಿದುಕೊಂಡಿದ್ದೆ. ಆದರೆ ಬಿ.ವೈ.ವಿಜಯೇಂದ್ರ ಅವರನ್ನು ಬಚ್ಚ ಅಂತ ಹೇಳುವ ಬಗ್ಗೆ ಯತ್ನಾಳ್ ಬಗ್ಗೆ ನಾನೇನು ಹೇಳಲಿ. ಮನಬಂದAತೆ ಮಾತನಾಡುವುದು ಅವರಿಗೆ ಅಭ್ಯಾಸವಾಗಿಬಿಟ್ಟಿದೆ ಎಂದು ಛೇಡಿಸಿದ ಸಚಿವರು, ಗಾಂಧಿ ಹತ್ಯೆ ಹಿಂದೆ ನೆಹರು ಕೈವಾಡ ಅನ್ನೋ ಶಾಸಕ ಯತ್ನಾಳ್ ಹೇಳಿಕೆ ಕುರಿತು ಹಾಸ್ಯಸ್ಪದವಾಗಿದೆ ಎಂದರು.