Tuesday, 11th December 2018  

Vijayavani

ಪಂಚರಾಜ್ಯಗಳ ಫಲಿತಾಂಶದಲ್ಲಿ ಕೈ ಆಟ-3 ರಾಜ್ಯಗಳಲ್ಲಿ ಅಧಿಕಾರದತ್ತ ಕಾಂಗ್ರೆಸ್​ - ವರ್ಕೌಟ್​ ಆಗದ ಮೋದಿ - ಅಮಿತ್ ಷಾ ಅಲೆ        ರಾಜಸ್ಥಾನದಲ್ಲಿ ಮ್ಯಾಜಿಕ್ ನಂಬರ್ ಸನಿಹ ಕಾಂಗ್ರೆಸ್-95 ಕ್ಷೇತ್ರದಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ        ಮಧ್ಯಪ್ರದೇಶದಲ್ಲಿ ಹಾವು ಏಣಿ ಆಟ - ಕೈ ಕಮಲ ಸಮಬಲದ ಹೋರಾಟ - ಸರ್ಕಾರ ರಚನೆಗೆ ಪಕ್ಷೇತರರೇ ನಿರ್ಣಾಯಕರು        ತೆಲಂಗಾಣದಲ್ಲಿ ನಡೆಯದ ಕೈ-ಕಮಲದ ಆಟ-ಶರವೇಗದಲ್ಲಿ ಮುನ್ನುಗಿದ ಕೆಸಿಆರ್​-ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ        ಛತ್ತೀಸ್​ಗಢದಲ್ಲಿ ಅಧಿಕಾರದತ್ತ ಕಾಂಗ್ರೆಸ್ - ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗ        ಮಿಜೋರಾಂನಲ್ಲಿ ಕಾಂಗ್ರೆಸ್​​​ಗೆ ಭಾರಿ ಮುಖಭಂಗ - ಅಧಿಕಾರದ ಗದ್ದುಗೆ ಹಿಡಿದ ಎಂಎನ್​​​ಎಫ್​ - 25 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ       
Breaking News

ಪಾಕನ್ನು ಬೆಚ್ಚಿ ಬೀಳಿಸಿದ ಬಾಲಕಿ ಅತ್ಯಾಚಾರ

Friday, 12.01.2018, 3:01 AM       No Comments

ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಕಾಸುರ್​ನಲ್ಲಿ ಜನವರಿ 4ರಂದು ನಡೆದ 8 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಇಡೀ ಪಾಕಿಸ್ತಾನವನ್ನು ಬೆಚ್ಚಿ ಬೀಳುವಂತೆ ಮಾಡಿದ್ದು, ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆಯೇ ಪಾಕಿಸ್ತಾನದ ವಾರ್ತಾವಾಚಕಿಯೊಬ್ಬಳು ತನ್ನ ಹೆಣ್ಣುಮಗುವನ್ನು ಕೂರಿಸಿಕೊಂಡು ವಾರ್ತೆ ಓದಿದ್ದು ಭಾರಿ ಸುದ್ದಿಯಾಗಿದೆ. ಆಂಕರ್ ಕಿರಣ್ ನಾಝå್ ತನ್ನ ಮಗಳನ್ನು ಮಡಿಲಲ್ಲಿ ಕೂರಿಸಿಕೊಂಡು ವಾರ್ತೆ ಓದಿದ್ದು, ‘ನಾನು ಕಿರಣ್ ನಾಝå್ ಅಲ್ಲ, ನಾನೂ ಒಬ್ಬಳು ತಾಯಿ. ಹೀಗಾಗಿಯೇ ನಾನಿವತ್ತು ನನ್ನ ಮಗಳ ಜತೆಗೆ ಇಲ್ಲಿ ಕುಳಿತುಕೊಂಡಿದ್ದೇನೆ’ ಎಂದಿದ್ದಾರೆ.

ಕಾಸುರ್​ನಲ್ಲಿ 8 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಭಾರಿ ಪ್ರತಿಭಟನೆಗಳಿಗೆ ಕಾರಣವಾಗಿದ್ದು, ಬುಧವಾರ ನಡೆದ ಪೊಲೀಸ್ ಫೈರಿಂಗ್​ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜನವರಿ 4ರಂದು ಬಾಲಕಿ ಟ್ಯೂಷನ್ ಕ್ಲಾಸ್ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಕಾಣೆಯಾಗಿದ್ದಳು. ಆಕೆಯ ತಂದೆ-ತಾಯಿ ಸೌದಿ ಅರೇಬಿಯಾಗೆ ತೀರ್ಥಯಾತ್ರೆಗೆ ತೆರಳಿದ್ದರು. ಆಕೆಯ ಕುಟುಂಬದವರು ಬಾಲಕಿ ಅಪರಿಚಿತ ವ್ಯಕ್ತಿಯೊಂದಿಗೆ ತೆರಳುತ್ತಿದ್ದ ವಿಡಿಯೋ ಬಿಡುಗಡೆ ಮಾಡಿದ್ದರು. ಆಕೆಯನ್ನು ಕತ್ತು ಹಿಸುಕಿ ಸಾಯಿಸುವ ಮೊದಲು ಹಲವು ಬಾರಿ ಅತ್ಯಾಚಾರಕ್ಕೊಳಪಡಿಸಲಾಗಿತ್ತು ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಕಾಸುರ್​ನಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 12 ಬಾಲಕಿಯರು ಇದೇ ರೀತಿ ದಾರುಣವಾಗಿ ಹತ್ಯೆಗೀಡಾಗಿದ್ದಾರೆ. 2009ರಿಂದಲೂ ನಗರದಲ್ಲಿ ಶಿಶುಕಾಮಿಗಳ ದಂಧೆ ವ್ಯಾಪಕವಾಗಿ ಹರಡುತ್ತಿದ್ದು, 2015ರವರೆಗೆ 280 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರ ಕುಟುಂಬಗಳಿಗೆ ಬೆದರಿಕೆ ಹಾಕಿದ್ದರು. -ಏಜೆನ್ಸೀಸ್


ಭಯೋತ್ಪಾದನೆ ಕುರಿತು ಪಾಕ್​ನೊಂದಿಗೆ ಚರ್ಚೆ

ನವದೆಹಲಿ: ಕಳೆದ ತಿಂಗಳು ಥಾಯ್ಲೆಂಡ್​ನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ರಾಷ್ಟ್ರೀಯ ಭದ್ರತಾ ಸಲಹೆಗಾರರ ರಹಸ್ಯ ಸಭೆ ನಡೆದಿತ್ತು ಎಂಬುದನ್ನು ಭಾರತದ ವಿದೇಶಾಂಗ ಸಚಿವಾಲಯ ಗುರುವಾರ ಖಚಿತಪಡಿಸಿದೆ. ಅಲ್ಲದೆ, ಭಯೋತ್ಪಾದನೆಗೆ ಕುಮ್ಮಕ್ಕು ನೀಡುವುದನ್ನು ನಿಲ್ಲಿಸಿದರೆ, ಈ ವಿಷಯವಾಗಿ ಪಾಕ್​ನೊಂದಿಗೆ ರ್ಚಚಿಸಲು ಯಾವುದೇ ಅಡ್ಡಿಯಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಪಾಕ್​ನ ರಾಷ್ಟ್ರೀಯ ಭದ್ರತಾ ಸಲಹೆಗಾರ ಲೆ.ಜನರಲ್ (ನಿವೃತ್ತ) ನಾಸೇರ್ ಖಾನ್ ಜಂಜುವಾ ಥಾಯ್ಲೆಂಡ್​ನಲ್ಲಿ ಡಿ.27ರಂದು ಭೇಟಿಯಾಗಿ ಮಾತುಕತೆ ನಡೆಸಿದರು.

ಭಾರತದ ಉಪಖಂಡದಿಂದ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿವಾರಿಸುವ ಕುರಿತು ಮಾತುಕತೆ ನಡೆಯಿತು. ಮಾತುಕತೆ ವೇಳೆ ದೋವಲ್ ಗಡಿಯಾಚೆಗಿನ ಭಯೋತ್ಪಾದನೆ ಕುರಿತು ಪ್ರಸ್ತಾಪಿಸಿದರು ಎಂದು ಹೇಳಿದರು. ಈ ಬೆಳವಣಿಗೆಯಿಂದಾಗಿ ಉಭಯ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಮಟ್ಟದ ಮಾತುಕತೆಗಳು ಪುನರಾರಂಭಗೊಳ್ಳುವ ಸಾಧ್ಯತೆಗಳು ಕಂಡುಬರುತ್ತಿರುವುದಾಗಿ ತಿಳಿಸಿದರು.

Leave a Reply

Your email address will not be published. Required fields are marked *

Back To Top