Monday, 19th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ಪಿಆರ್​ಆರ್​ಗೆ ಮರುಜೀವ

Friday, 06.07.2018, 3:04 AM       No Comments

ಆರ್ಥಿಕ ಸಂಪನ್ಮೂಲ ಕ್ರೋಡೀಕರಣಕ್ಕೆ ಒತ್ತು | ಎಲಿವೇಟೆಡ್ ಕಾರಿಡಾರ್ ಡಿಎಫ್​ಆರ್​ ಸಿದ್ಧ

ಬೆಂಗಳೂರು ಬೃಹದಾಕಾರವಾಗಿ ಬೆಳೆಯುತ್ತಿರುವಂತೆಯೇ ಅದರೊಂದಿಗೆ ಸಂಚಾರ ದಟ್ಟಣೆ ಸಮಸ್ಯೆಯೂ ಹೆಚ್ಚುವಂತಾಗಿದೆ. ಖಾಸಗಿ ಸಂಸ್ಥೆಯ ಸರ್ವೆ ಪ್ರಕಾರ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಗಂಟೆಗೆ 13 ಕಿ.ಮೀ. ವೇಗದಲ್ಲಿ ವಾಹನ ಸಂಚರಿಸುವ ಪರಿಸ್ಥಿತಿಯಿದೆ. ಇದು ನಗರದಲ್ಲಿನ ಸಂಚಾರ ದಟ್ಟಣೆ ಸಮಸ್ಯೆಗೆ ಹಿಡಿದ ಕನ್ನಡಿ. ಈ ಸಮಸ್ಯೆಗೆ ಪರಿಹಾರ ಎನ್ನುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಜೆಟ್​ನಲ್ಲಿ ಎಲಿವೇಟೆಡ್ ಕಾರಿಡಾರ್ ಮತ್ತು ಪೆರಿಫೆರಲ್ ರಿಂಗ್​ರಸ್ತೆ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಎರಡೂ ಯೋಜನೆಗಳು ಹಳೆಯದ್ದಾಗಿದ್ದರೂ ಅವುಗಳ ಅನುಷ್ಠಾನದ ಕುರಿತಂತೆ ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿದೆ. ಆ ಮೂಲಕ ನಗರದಲ್ಲಿನ ಸಂಚಾರ ದಟ್ಟಣೆಗೆ ಪರಿಹಾರ ಎನ್ನುವಂತೆ ಹೊಸ ರಸ್ತೆ ಹಾಗೂ ಮೇಲ್ಸೇತುವೆ ನಿರ್ವಣವನ್ನು ಕೊಡುಗೆಯಾಗಿ ನೀಡಲಾಗುತ್ತಿದೆ.

ನಗರದ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಳೆಯ ಎರಡು ಬೃಹತ್ ಯೋಜನೆಗಳ ಕುರಿತು ಸರ್ಕಾರ ಬಜೆಟ್​ನಲ್ಲಿ ಪ್ರಸ್ತಾಪಿಸಿದೆ. ಪೆರಿಫೆರಲ್ ರಿಂಗ್​ರಸ್ತೆ (ಪಿಆರ್​ಆರ್) ಮತ್ತು ಎಲಿವೇಟೆಡ್ ಕಾರಿಡಾರ್ ಯೋಜನೆಗಳನ್ನು ಘೋಷಿಸಿದ್ದು, ಖಾಸಗಿ ಸಹಭಾಗಿತ್ವದ ಮೂಲಕ ಯೋಜನೆ ಜಾರಿಗೆ ಸರ್ಕಾರ ಚಿಂತನೆ ನಡೆಸಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ತುಮಕೂರು ರಸ್ತೆ- ಹೊಸೂರು ರಸ್ತೆ ಪೆರಿಫೆರಲ್ ರಿಂಗ್​ರಸ್ತೆ ಯೋಜನೆ ಜಾರಿಗೆ ಸಂಬಂಧಿಸಿದಂತೆ ವಿಶೇಷ ಉದ್ದೇಶ ವಾಹಕ (ಎಸ್​ಪಿವಿ) ರಚನೆ ಮಾಡಲಾಗಿದೆ.

ಒಟ್ಟು 65 ಕಿ.ಮೀ. ರಿಂಗ್ ರಸ್ತೆ ನಿರ್ವಿುಸಲು 11,950 ಕೋಟಿ ರೂ. ಅಗತ್ಯವಿದೆ. ಯೋಜನೆ ಜಾರಿಗೆ ಸಂಬಂಧಿಸಿದಂತೆ ಆರ್ಥಿಕ ಸಂಪನ್ಮೂಲ ಕ್ರೋಡೀಕರಣಕ್ಕೆ ಕಳೆದ ಸರ್ಕಾರದಿಂದಲೇ ಕಸರತ್ತು ನಡೆಸಲಾಗುತ್ತಿದೆ. ಇದೀಗ ಮತ್ತೆ ಯೋಜನೆ ಕುರಿತು ಪ್ರಸ್ತಾಪಿಸಲಾಗಿದ್ದು, ಆರ್ಥಿಕ ಸಂಪನ್ಮೂಲ ಕ್ರೋಡೀಕರಣಕ್ಕೆ ಚಾಲನೆ ನೀಡಲಾಗಿದೆ. ರಾಜ್ಯ ಸರ್ಕಾರ ಯೋಜನೆಗೆ 6 ಸಾವಿರ ಕೋಟಿ ರೂ. ಹೊಂದಿಸಬೇಕಿದ್ದು, ಉಳಿದ ಶೇ. 50 ಹಣವನ್ನು ಕೇಂದ್ರ ಸರ್ಕಾರ ನೀಡಲು ಈಗಾಗಲೇ ಒಪ್ಪಿಗೆ ಸೂಚಿಸಿದೆ.

ಎತ್ತರಿಸಿದ ರಸ್ತೆಗೆ ಸಾವಿರ ಕೋಟಿ ರೂ.

ಬೆಂಗಳೂರಿನ ಹೊರವಲಯಗಳಿಂದ ನಗರದೊಳಗೆ ಬರುವ ವಾಹನಗಳು ಸಂಚಾರ ದಟ್ಟಣೆ ಬಿಸಿಯಿಂದ ತಪ್ಪಿಸಿಕೊಳ್ಳಲು 82.7 ಕಿ.ಮೀ. ಉದ್ದದ ಎಲಿವೇಟೆಡ್ ಕಾರಿಡಾರ್ ನಿರ್ವಣಕ್ಕೆ ಸಿದ್ದರಾಮಯ್ಯ ತಮ್ಮ ಬಜೆಟ್​ನಲ್ಲೂ ಘೋಷಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ಡಿಎಫ್​ಆರ್ ಕೂಡ ಸಿದ್ಧಪಡಿಸಲಾಗಿದೆ. ಆದರೆ, ಯೋಜನೆ ಅನುಷ್ಠಾನಕ್ಕೆ ಹಣ ಮೀಸಲಿಟ್ಟಿರದ ಕಾರಣ ಯೋಜನೆ ಪ್ರಗತಿ ಸಾಧಿಸಿರಲಿಲ್ಲ. ಇದೀಗ ಕುಮಾರಸ್ವಾಮಿ ತಮ್ಮ ಬಜೆಟ್​ನಲ್ಲಿ ಯೋಜನೆಗಾಗಿ 1 ಸಾವಿರ ಕೋಟಿ ರೂ. ಘೋಷಿಸಿದ್ದಾರೆ. ಅಲ್ಲದೆ, ಕೆಆರ್​ಡಿಸಿಎಲ್ ಮೂಲಕ ಯೋಜನೆ ಅನುಷ್ಠಾನದ ಬಗ್ಗೆಯೂ ತಿಳಿಸಲಾಗಿದೆ.

 

Leave a Reply

Your email address will not be published. Required fields are marked *

Back To Top