25.7 C
Bangalore
Sunday, December 15, 2019

ಪಿಎಂಜಿಎಸ್​ವೈ ಮಾನದಂಡ ಬದಲಿಸಿ

Latest News

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕಾರವಾರ: ಪ್ರಧಾನಮಂತ್ರಿ ಗ್ರಾಮ ಸಡಕ್(ಪಿಎಂಜಿಎಸ್​ವೈ)ಯೋಜನೆಯಡಿ ರಸ್ತೆ ಮಂಜೂರು ಮಾಡಲು ಕೇಂದ್ರ ವಿಧಿಸಿರುವ ಮಾನದಂಡವನ್ನು ಸಡಿಲಿಸುವಂತೆ ಸರ್ಕಾರಕ್ಕೆ ಮನವಿ ಮಾಡಲು ಜಿಪಂ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಯಿತು.

ಯೋಜನೆಯ ಮೂರನೇ ಹಂತ ಜಾರಿ ಮಾಡಲು ಪ್ರತಿ ಗ್ರಾಮಗಳಲ್ಲಿ ಇರುವ ಶೈಕ್ಷಣಿಕ ಕೇಂದ್ರ, ಮಾರುಕಟ್ಟೆ, ಆಸ್ಪತ್ರೆ, ಜನವಸತಿ ಹೀಗೆ ಐದು ಅಂಶಗಳನ್ನು ಪರಿಗಣಿಸಲಾಗುತ್ತಿದೆ. ಈ ಎಲ್ಲವನ್ನೂ ಫೋಟೋ ತೆಗೆದು ಆಪ್​ನಲ್ಲಿ ಅಪ್​ಲೋಡ್ ಮಾಡಬೇಕು. ಅಲ್ಲಿ ಸಿಕ್ಕ ಅಂಕಗಳ ಆಧಾರದ ಮೇಲೆ ರಸ್ತೆ ಮಂಜೂರಾಗಲಿದೆ ಎಂದು ಜಿಪಂ ಸಿಇಒ ಎಂ.ರೋಶನ್ ಸಭೆಗೆ ವಿವರಿಸಿದರು.

ಪ್ರತಿಕ್ರಿಯಿಸಿದ ಸದಸ್ಯರಾದ, ಉಷಾ ಹೆಗಡೆ, ಪುಷ್ಪಾ ನಾಯ್ಕ, ಶಿವಾನಂದ ಹೆಗಡೆ ಇತರರು, ಆ ಮಾನದಂಡದಂತೆ ಹೋದಲ್ಲಿ ಜಿಲ್ಲೆಗೆ ರಾಜ್ಯದಲ್ಲಿ ಅತಿ ಕಡಿಮೆ ಅನುದಾನ ಮಂಜೂರಾಗಲಿದೆ. ಇಲ್ಲಿ ಜನಸಂಖ್ಯೆ ಹೆಚ್ಚಿಲ್ಲ. ಸಣ್ಣ ಗ್ರಾಮಗಳಲ್ಲಿ ಆಸ್ಪತ್ರೆ, ಶಾಲೆಗಳಿಲ್ಲ. ಆದರೆ, ರಸ್ತೆ ಸಂಪರ್ಕ ಬೇಕಿದೆ. ಇದರಿಂದ ಕನಿಷ್ಠ 500 ಜನಸಂಖ್ಯೆ ಇರುವ ಗ್ರಾಮಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಬೇಕು. ಅಂಗನವಾಡಿ, ಪ್ರಾಥಮಿಕ ಶಾಲೆ ಮುಂತಾದವುಗಳಿಗೂ ಆಪ್​ನಲ್ಲಿ ಮಹತ್ವ ನೀಡಬೇಕು. ಮತ್ತು ಹಿಂದಿನ ಎರಡು ಹಂತಗಳ ಪಿಎಂಜಿಎಸ್​ವೈ ಕಾಮಗಾರಿ ಕೈಗೊಳ್ಳುವಾಗ ಇದ್ದ ಮಾನದಂಡಗಳನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿ ನಿಯಮಾವಳಿ ಬದಲಿಸಬೇಕು ಎಂದರು.

ಅಲ್ಬರ್ಟ್ ಡಿಕೋಸ್ಟಾ, ಉಷಾ ಹೆಗಡೆ ಮಾತನಾಡಿ, ಪಿಎಂಜಿಎಸ್​ವೈ ಅಧಿಕಾರಿಗಳು ರಸ್ತೆಗಳನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯ ಸಾಕಷ್ಟು ಅಂಗನವಾಡಿಗಳಿಗೆ ಸ್ವತಂ ಕಟ್ಟಡ, ಮೂಲ ಸೌಕರ್ಯ ಇಲ್ಲದ ಬಗ್ಗೆ ಪುಷ್ಪಾ ನಾಯ್ಕ ಆಕ್ಷೇಪಿಸಿದರು. ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ, ರಾಜೇಂದ್ರ ಬೇಕಲ್, ಜಿಲ್ಲೆಯಲ್ಲಿ 212 ಹೊಸ ಅಂಗನವಾಡಿ ಕಟ್ಟಡ ನಿರ್ವಣಕ್ಕೆ ಕ್ರಿಯಾ ಯೋಜನೆ ರೂಪಿಸಲಾಗಿದೆ. ಯಾವುದಾದರೂ ಬಿಟ್ಟು ಹೋದಲ್ಲಿ ಮತ್ತೆ ಸೇರಿಸಲಾಗುವುದು ಎಂದರು.

ಕೈಗಾ ಹೊಸ ಘಟಕ ಚರ್ಚೆ ಸಂಬಂಧ ವಿಶೇಷ ಸಭೆ: ಕೈಗಾದಲ್ಲಿ ಹೊಸದಾಗಿ ಎರಡು ಅಣು ವಿದ್ಯುತ್ ಘಟಕ ನಿರ್ಮಾಣ ಸಂಬಂಧ ರ್ಚಚಿಸಲು ವಿಶೇಷ ಸಭೆ ಕರೆಯಲಾಗುವುದು ಎಂದು ಜಿಪಂ ಸಿಇಒ ಎಂ.ರೋಶನ್ ಭರವಸೆ ನೀಡಿದರು. ಈಗಿರುವ ಅಣು ವಿದ್ಯುತ್ ಘಟಕಗಳಿಂದ ಜನರಲ್ಲಿ ಆತಂಕ ನಿರ್ವಣವಾಗಿದೆ. ಸ್ಥಳೀಯರಿಗೆ ಉದ್ಯೋಗವಿಲ್ಲ. ಇದರಿಂದ ಹೊಸ ಘಟಕ ಬೇಡ ಎಂದು ಸಭೆಯಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸದಸ್ಯ ಶಾಂತಾ ಬಾಂದೇಕರ್ ಒತ್ತಾಯಿಸಿದರು. ಚೈತ್ರಾ ಕೊಠಾರಕರ್, ಜಗದೀಶ ನಾಯಕ ಮೊಗಟಾ, ಜಿ.ಎನ್.ಹೆಗಡೆ ಮುರೇಗಾರ, ಅಂಕೋಲಾ ತಾಪಂ ಅಧ್ಯಕ್ಷೆ ಸುಜಾತಾ ಗಾಂವಕರ್ ಅದನ್ನು ಬೆಂಬಲಿಸಿದರು.

ಮರು ಸರ್ವೆ: ಆಗಸ್ಟ್​ನಲ್ಲಿ ಸಂಭವಿಸಿದ ಪ್ರವಾಹದಲ್ಲಿ ಹಾನಿಯಾದ ಮನೆಗಳಿಗೆ ಕಳೆದ ವಾರ ಮತ್ತಷ್ಟು ಹಾನಿಯಾಗಿದೆ. ಆದರೆ, ಮನೆ ಹಾನಿ ಸಮೀಕ್ಷೆ ಕಾರ್ಯ ಆಗಲೇ ಮುಕ್ತಾಯವಾಗಿದೆ. ಸಂತ್ರಸ್ತರಿಗೆ ಸಿಗುವ ಪರಿಹಾರದ ಮೊತ್ತ ಕಡಿಮೆಯಾಗಲಿದೆ. ಇದುವರೆಗೂ ಸಮರ್ಪಕ ಪರಿಹಾರ ದೊರೆತಿಲ್ಲ ಎಂದು ಚೈತ್ರಾ ಕೊಠಾರಕರ್ ಅಸಮಾಧಾನ ಹೊರ ಹಾಕಿದರು. ಮತ್ತೊಮ್ಮೆ ಎಲ್ಲ ಮನೆಗಳ ಸರ್ವೆ ಕಾರ್ಯ ಆರಂಭಿಸಲಾಗಿದೆ ಎಂದು ಜಿಪಂ ಸಿಇಒ ಎಂ.ರೋಶನ್ ಭರವಸೆ ನೀಡಿದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...